CrimeNEWSನಮ್ಮಜಿಲ್ಲೆ

ಬೈಕ್‌ಗೆ ಕಾರು ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲಿಯೇ ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಬದನಗುಪ್ಪೆ-ಮುತ್ತಿಗೆ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಬೇಡರಪುರ ಗ್ರಾಮದ ಅಶೋಕ್ (32) ಹಾಗೂ ಮಹೇಶ್ (25) ಮೃತಪಟ್ಟವರು.

ಅಶೋಕ್ ಮತ್ತು ಮಹೇಶ್ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಿಂದ ರಸ್ತೆಗೆ ಬಿದ್ದ ಸವಾರರಿಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣೆ ಪೊಲೀಸರು ಕಾರಿನ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಶವಗಳನ್ನು ರವಾನಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...