NEWSನಮ್ಮರಾಜ್ಯಶಿಕ್ಷಣ-

ಹಂಪಿ ಕನ್ನಡ ವಿವಿ ಹಗರಣ: ತನಿಖೆಗೆ ಸಮಿತಿ ರಚಿಸಲು ಸಿಎಂ ಬೊಮ್ಮಾಯಿರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಗರಣಗಳ ಕುರಿತ ಆರೋಪಗಳ ಬಗ್ಗೆ ತನಿಖೆ ನಡೆಸಲು ತಜ್ಞರು ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ತಕ್ಷಣ ರಚಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹಂಪಿ ವಿಶ್ವವಿದ್ಯಾಲಯದಲ್ಲಿ ನೇಮಕಾತಿ ಮಾಡಿಕೊಳ್ಳಲು ಹೊರಟಿರುವ ಹುದ್ದೆಗಳ ವಿಚಾರದಲ್ಲಿ ಮೀಸಲಾತಿ ಉಲ್ಲಂಘನೆ ಆರೋಪವಿದೆ. ಈ ವಿಚಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕೋಶಗಳು ತನಿಖೆ ನಡೆಸಿ ವರದಿ ನೀಡಬೇಕು. ಅಲ್ಲಿಯವರೆಗೆ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಪತ್ರದಲ್ಲಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ವಿಶ್ವ ವಿದ್ಯಾ ಲಯಕ್ಕೆ ಅಗತ್ಯ ವಾಗಿರುವ ಅನುದಾನವನ್ನು ತಕ್ಷಣ ಒದಗಿಸಿ, ಸಂಬಳ, ಪಿಂಚಣಿ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನ ಮತ್ತಿತರ ಸೌಲಭ್ಯಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ವಿವಿ ಆಡಳಿತವನ್ನು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ವಿಶ್ವವಿದ್ಯಾ ಲಯದಲ್ಲಿ ಕೆಲವುಬೋಧಕ ಹುದ್ದೆ ಗಳಿಗೆ ಅಧಿಸೂಚನೆಹೊರಡಿಸಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ ಪ್ರತಿ ಹುದ್ದೆಗೆ 50 ಲಕ್ಷ ರೂ. ನಿಗದಿಪಡಿಸಿ ಹರಾಜು ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಹಣ ಕೊಟ್ಟವರಿಗೆ ಪರೀಕ್ಷೆಗೆ ಮೊದಲೇ ಪ್ರಶ್ನೆ ಪತ್ರಿಕೆ ನೀಡಲಾಗುತ್ತಿದೆಯೆಂಬ ಗಂಭೀರ ಆರೋಪಗಳಿವೆ ಎಂದೂ ಪತ್ರಿಕೆ ವರದಿ ಮಾಡಿದೆ. ವಿಶ್ವವಿದ್ಯಾ ಲಯಗಳು ಹುದ್ದೆಗಳನ್ನು ಹರಾಜಿಗಿಟ್ಟರೆ ಬಡ ಪ್ರತಿಭಾವಂತರು ಆಯ್ಕೆಯಾಗಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ಕನ್ನಡ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳ ಭರ್ತಿಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಮೀಸಲಾತಿ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಜತೆಗೆ, ಈ ಹಿಂದೆ ನೇಮಕಗೊಂಡ ಬೋಧಕ, ಬೋಧಕೇತರ ಸಿಬ್ಬಂದಿಯ ಪ್ರೊಬೇಷನರಿ ಅವಧಿಯನ್ನು ಘೋಷಿಸಲು ಕೂಡಾ ಕಮಿಷನ್ ನಿಗದಿಗೊಳಿಸಲಾಗಿದೆ ಮತ್ತು ವಿನಾಕಾರಣ ವಿಳಂಬಮಾಡಲಾಗುತ್ತಿದೆ ಎಂಬ ಆರೋಪಗಳಿವೆ.

ಆದ್ದರಿಂದ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ನಿಲ್ಲಿಸಿ ಈ ಕುರಿತು ತನಿಖೆ ನಡೆಸಿ ತಪ್ಪಿ ತಸ್ಥರ ವಿರುದ್ಧ ತೆಗೆದುಕೊಳ್ಳಬೇಕು ಎಂದಿರುವ ಸಿದ್ದರಾಮಯ್ಯ , ‘ರಾಜ್ಯ ದಲ್ಲಿರುವ ಪ್ರತಿಭಾವಂತರ ಪಟ್ಟಿಯನ್ನು ವಿಷಯವಾರು ತಯಾರಿಸಿ ಯುಜಿಸಿ ನಿಯಮಾವಳಿಗಳಂತೆ ಅವರನ್ನು ವಿಶ್ವವಿದ್ಯಾ ಲಯಗಳಿಗೆ ನೇಮಿಸಿಕೊಳ್ಳುವ ಕೆಲಸಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಕನ್ನಡ ವಿಶ್ವ ವಿದ್ಯಾಲಯದಲ್ಲಿ ಸಂಬಳ ನೀಡಲು, ಪಿಂಚಣಿ ನಿಗದಿಪಡಿಸಲು ಮತ್ತು ಪಿಂಚಣಿ ಬಿಡುಗಡೆ ಮಾಡಲು ಕಮಿಷನ್ ನಿಗದಿಗೊಳಿಸಲಾಗಿದೆ. ಕಮಿಷನ್ ನೀಡದೆಯಾವ ಕಡತಗಳಿಗೂ ಜೀವ ಬರುವುದಿಲ್ಲವೆಂದೂವರದಿಯಾಗಿದೆ. ಈ ಕುರಿತಂತೆ ವಿಶ್ವ ವಿದ್ಯಾ ಲಯದ ನಿವೃತ್ತ ಪ್ರಾಧ್ಯಾಪಕರು ವಿಶ್ವವಿದ್ಯಾ ಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ನಿವೃತ್ತ ಪ್ರಾಧ್ಯಾ ಪಕರ ಪಿಂಚಣಿ ನಿಗದಿಪಡಿಸದೆ ಏಳೆಂಟು ತಿಂಗಳಿಂದ ಅವರು ಜೀವನ ನಿರ್ವಹಿಸಲಾರದೆ ಒದ್ದಾಡುತ್ತಿದ್ದಾರೆ ಎಂಬ ದೂರುಗಳೂ ಇವೆ.

ವಿಶ್ವವಿದ್ಯಾ ಲಯದಲ್ಲಿರುವ ವಿದ್ಯಾ ರ್ಥಿಗಳಿಗೆ ಪ್ರ ತಿ ತಿಂಗಳೂ ನೀಡುತ್ತಿದ್ದ ಪ್ರೋ ತ್ಸಾ ಹ ಧನ, ವಿದ್ಯಾರ್ಥಿ ವೇತನವನ್ನು 2–3 ವರ್ಷಗಳಿಂದ ನಿಲ್ಲಿ ಸಲಾಗಿದೆ. ಇದರಿಂದ ವಿದ್ಯಾ ರ್ಥಿಗಳು ಸಂಶೋಧನೆ, ಕಲಿಕೆ ಮಾಡಲಾಗದ ಪರಿಸ್ಥಿ ತಿ ನಿರ್ಮಾಣವಾಗಿದೆ ಎಂಬದೂರುಗಳೂ ಕೇಳಿಬಂದಿವೆ’ ಎಂದೂ ಪತ್ರದಲ್ಲಿ ಅವರು ಉಲ್ಲೇ ಖಿಸಿದ್ದಾರೆ.

ಹಂಪಿಯಲ್ಲಿ ‘ಕನ್ನಡ ವಿಶ್ವವಿದ್ಯಾಲಯ’ವನ್ನು ವಿಶೇಷ ನಿಯಮಗಳನ್ನು ರೂಪಿಸಿ, ‘ಜ್ಞಾನ ಸೃಷ್ಟಿಯ’ ಕೆಲಸ ಮಾಡುವ ವಿಶಿಷ್ಟ ಉದ್ದೇ ಶದಿಂದ 1991ರಲ್ಲಿ ಸ್ಥಾಪಿಸಲಾಗಿದೆ. ಈ ವಿಶ್ವ ವಿದ್ಯಾ ಲಯದಲ್ಲಿ ನಾಡಿನ ಅನೇಕ ಧೀಮಂತ ವಿದ್ವಾಂ ಸರು ಕೆಲಸಮಾಡಿದ್ದಾರೆ. ಹೀಗಾಗಿ, ಇಲ್ಲಿ ಅತ್ಯು ತ್ತಮ ಕೆಲಸವೂ ಆಗಿದೆ. ವಿಜ್ಞಾನ, ತಾಂತ್ರಿ ಕ ಶಿಕ್ಷಣವೂ ಸೇರಿದಂತೆ ಅನೇಕ ವಿಷಯಗಳಿಗೆ ಕನ್ನಡದಲ್ಲಿ ಪಠ್ಯ ಪುಸ್ತಕಗಳನ್ನು ರೂಪಿಸುವ ಕೆಲಸವನ್ನೂ ಈ ವಿಶ್ವ ವಿದ್ಯಾಲಯಮಾಡಿದೆ.

ಆದರೆ, ಇತ್ತೀ ಚಿನ ದಿನಗಳಲ್ಲಿ ಕನ್ನ ಡ ವಿಶ್ವ ವಿದ್ಯಾ ಲಯ ಭ್ರಷ್ಟಾ ಚಾರ, ಕಮಿಷನ್ ವ್ಯವಹಾರಮುಂತಾದ ಕೆಟ್ಟ ಕಾರಣಗಳಿಂದ ಸುದ್ಧಿಯಲ್ಲಿದೆ. ತೀವ್ರ ಸ್ವ ರೂಪದ ಹಗರಣಗಳ ಆರೋಪಗಳು ವಿಶ್ವ ವಿದ್ಯಾಲಯದ ಘನತೆಯನ್ನು ಗುಡಿಸಿ ಹಾಕುತ್ತಿವೆ’ ಎಂದೂಅವರು ಬೇಸರ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ