Please assign a menu to the primary menu location under menu

NEWSಆರೋಗ್ಯನಮ್ಮಜಿಲ್ಲೆ

ಧಾರವಾಡ ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸ್ಫೋಟ: ಸೋಂಕು ಹರಡಿದ್ದು ಎಲ್ಲಿಂದ..?

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 281 ಜನರಿಗೆ ಕೋವಿಡ್–19 ದೃಢಪಟ್ಟಿದೆ. ನಾಲ್ಕು ವಿದ್ಯಾರ್ಥಿ ನಿಲಯಗಳಿಗೆ ಒಂದೇ ಊಟದ ಸಭಾಂಗಣವಿದ್ದು, ಇಲ್ಲಿಂದಲೇ ಸೋಂಕು ವೇಗವಾಗಿ ಪ್ರಸರಣವಾಗಿರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಹೇಳಿದರು.

‘ಕಾಲೇಜಿನ ಪಕ್ಕ ದ ಡಾ.ವೀರೇಂದ್ರ ಹೆಗ್ಗ ಡೆ ಕಲಾಕ್ಷೇ ತ್ರ ದಲ್ಲಿ ನ.17ರಂದು ನಡೆದ ಕಾರ್ಯಕ್ರಮದ ನಂತರದಲ್ಲಿ ಕೆಲವರಲ್ಲಿ ಸೋಂಕು ಲಕ್ಷಣಗಳು ಕಂಡುಬಂದಿದ್ದವು. ಅದಾದ ಕೆಲವೇ ದಿನಗಳಲ್ಲಿ ಸೋಂಕು ವೇಗವಾಗಿ ಹರಡಿತ್ತು. ಸೋಂಕಿತರು ಒಂದೇ ಕಡೆ ಸೇರುತ್ತಿದ್ದು ದರಿಂದ ವೇಗವಾಗಿ ಪ್ರಸರಣವಾಗಿರುವ ಸಾಧ್ಯತೆ ಇದೆ.

ಆದರೆ, ಇವರು ಕಾಲೇಜು ಮತ್ತು ವಿದ್ಯಾ ರ್ಥಿ ನಿಲಯಗಳಿಗೆ ಸೀಮಿತವಾಗಿದ್ದರಿಂದ ಸೋಂಕು ಹೊರಗೆ ವ್ಯಾಪಿಸಿಲ್ಲ. ಜತೆಗೆ ಆಸ್ಪತ್ರೆ ರೋಗಿಗಳಿಗೂ ಸೋಂಕು ತಗುಲಿರುವ ಸಾಧ್ಯತೆ ಕಡಿಮೆ ಎಂದು ಹೇಳಿದರು.

ಶುಕ್ರವಾರ ರಾತ್ರಿ ವೇಳೆಗೆಸೋಂಕು ದೃಢಪಟ್ಟಿದ್ದು 204 ಜನರಲ್ಲಿ . ಈ ಪೈಕಿ ಸಿಬ್ಬಂದಿ ಹಾಗೂ ವೈದ್ಯರ ಸಂಖ್ಯೆ 25. ಒಟ್ಟು ಸೋಂಕಿತರಲ್ಲಿ ಆರು ಜನರಲ್ಲಿ ಮಾತ್ರ ಸೋಂಕಿನ ಗುಣಲಕ್ಷಣಗಳು ಕಂಡುಬಂದಿವೆ. ಈಗಾಗಲೇ ಕಾಲೇಜು ಹಾಗೂ ಆಸ್ಪ ತ್ರೆಯ 3,500 ಸಿಬ್ಬಂ ದಿಯಮೂಗು ಹಾಗೂ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಲಾಗಿದೆ.

ಹುಬ್ಬಳ್ಳಿಯ ಕಿಮ್ಸ್ ಹಾಗೂ ಡಿಮ್ಹಾನ್ಸ್‌ನ ತಲಾ 5 ಹಾಗೂ ಎಸ್‌ಡಿಎಂ ಒಂದು ತಂಡ ಇಲ್ಲಿ ಮಾದರಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದೆ. ಸೋಂಕುಹೊರಗೆ ವ್ಯಾಪಿಸಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಆದರೂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಹೊರಗೆ ಹೋಗುವವರ ಕೋವಿಡ್ ತಪಾಸಣೆ ನಡೆಸಲುಸೂಚಿಸಲಾಗಿದೆ ಎಂದು ವಿವರಿಸಿದರು.

ಎಸ್‌ಡಿಎಂ ಆಸ್ಪತ್ರೆಯ ಹೊರ ರೋಗಿಗಳ ವಿಭಾಗವನ್ನು ಸ್ಥಗಿತಗೊಳಿಸಲಾಗಿದೆ. ಇಲ್ಲಿ ತುರ್ತು ಸೇವೆಗಳು ಮಾತ್ರ ಲಭ್ಯ . ಆಸ್ಪತ್ರೆಗೆ ಬರುವ ಹೊರರೋಗಿಗಳು ಜಿಲ್ಲಾ ಆಸ್ಪತ್ರೆ , ಹುಬ್ಬಳ್ಳಿ ಕಿಮ್ಸ್ ಹಾಗೂ ಇನ್ನಿತರೆಡೆ ಚಿಕಿತ್ಸೆ ಪಡೆಯಬಹುದು. ಈ ಕುರಿತಂತೆ ವಿವಿಧ ಆಸ್ಪತ್ರೆ ಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಎಸ್‌ಡಿಎಂ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ನಿಯಂತ್ರಣ ಕ್ರಮಗಳ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ನಿರಂತರವಾಗಿಮಾಹಿತಿ ನೀಡಿ, ಮಾರ್ಗದರ್ಶನ ಪಡೆಯಲಾಗುತ್ತಿದೆ ಎಂದು ಹೇಳಿದರು.

ಇಂದು ಸ್ಪಷ್ಟ ಚಿತ್ರ ಣ ಸಾಧ್ಯತೆ; ಎಸ್‌ಡಿಎಂ ಕಾಲೇಜು ಹಾಗೂ ಜಿಲ್ಲೆಯಲ್ಲಿ ಸೋಂಕು ನಿಯಂತ್ರ ಣಕ್ಕೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೋಂಕಿತರ ಪ್ರಯಾಣಮಾಹಿತಿ ಹಾಗೂ ಇದು ವೈರಾಣುವಿನ ಹೊಸತಳಿಯೇ ಎಂದು ತಿಳಿಯಲು ಜಿನೋಮ್ ಅನುಕ್ರಮ ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಲಯಕ್ಕೆ ಕಳುಹಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಸ್‌ಡಿಎಂಗೆ ಸಾರ್ವಜನಿಕರ ಅನಗತ್ಯ ಭೇಟಿ, ದಾಖಲಾಗಿರುವ ರೋಗಿಗಳ ಸಹಾಯಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕಾಲೇಜು ಸುತ್ತ 500 ಮೀಟರ್ ವ್ಯಾ ಪ್ತಿಯಲ್ಲಿರುವ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆಸ್ಪ ತ್ರೆಯ 3,500 ಜನರ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ. ಶನಿವಾರದ ಹೊತ್ತಿಗೆ ಸ್ಪಷ್ಟ ಚಿತ್ರ ಣ
ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್