NEWSನಮ್ಮಜಿಲ್ಲೆ

ಕೋವಿಡ್, ಹೊಸ ಮಾದರಿ ಸೋಂಕು ಹರಡದಂತೆ ಮುಂಜಾಗ್ರತೆ: ಗೌರವ್ ಗುಪ್ತ

ಬಿಬಿಎಂಪಿ: ಕೋವಿಡ್ ಸಂಬಂಧ ತುರ್ತು ಸಭೆ ಕರೆದ ಮುಖ್ಯ ಆಯುಕ್ತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪ್ರಮುಖ‌ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕೋವಿಡ್ ತಂಡಗಳನ್ನು‌ ನಿಯೋಜಿಸಿ ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಕಡ್ಡಾಯ ಪರೀಕ್ಷೆ ಮಾಡಬೇಕು ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿ ಕೋವಿಡ್ ಸೋಂಕು ಸಂಬಂಧಿಸಿದಂತೆ ವರ್ಚುವಲ್ ಮೂಲಕ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನಗರದ ಹೊರ ವಲಯ ಗಡಿ ಭಾಗದಲ್ಲಿ ಕೋವಿಡ್ ಪರೀಕ್ಷೆ ಮಾಡುವ ಸಂಬಂಧ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೊತೆ ಚರ್ಚಿಸಲಾಗಿದ್ದು, ಕೋವಿಡ್ ಹಾಗೂ ಹೊಸ ಮಾದರಿಯ ಸೋಂಕು ಪ್ರಕರಣಗಳು ಹರಡದಂತೆ ಮುನ್ನಚ್ಚರಿಕಾ ಕ್ರಮಗಳನ್ನು ವಹಸಿಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ‌ ಕಳೆದ ವಾರದಿಂದ ಸರಾಸರಿ 160 ಕೋವಿಡ್ ಪ್ರಕರಣಗಳು ಕಂಡುಬರುತ್ತಿದ್ದು, 26 ರಂದು(ನಿನ್ನೆ) 224 ಕೋವಿಡ್ ಪ್ರಕರಣಗಳು ಕಂಡುಬಂದಿವೆ. ಈ ಪೈಕಿ ಆನೇಕಲ್ ವ್ಯಾಪ್ತಿಯಲ್ಲಿ‌ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಆ ಭಾಗದಲ್ಲಿ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ತಿಳಿಸಿದರು.

ನಗರದ ಯಾವ ಭಾಗದಲ್ಲೂ ಕ್ಲಸ್ಟರ್ ಗಳು ವರದಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ 63 ಕಂಟೈನ್ಮೆಂಟ್ ಜೋನ್ ಗಳಿದ್ದು, ಅವುಗಳ ಮೇಲೆ ನಿಗಾವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜಿನೋಮ್ ಸೀಕ್ವೆನ್ಸಿಂಗ್ ಮಾಡಿ ಬೇರೆ ಯಾವುದಾದರು ವೈರಾಣು ಪತ್ತೆಯಾಗಿದೆಯೆ ಎಂಬುದನ್ನು ಪರಿಶೀಲಿಸಿ ಎಂದು ಹೇಳಿದರು.

ನಗರದಲ್ಲಿ ಇದುವರೆಗೆ ಒಟ್ಟು 1,38,06,027 ಡೋಸ್ ಲಸಿಕೆ ನೀಡಲಾಗಿದ್ದು, 80,69,986 ಮೊದಲ ಡೋಸ್ (ಶೇ. 88 ರಷ್ಟು), 57,36,041 ಎರಡನೇ ಡೋಸ್ (ಶೇ. 63 ರಷ್ಟು) ಲಸಿಕೆಯನ್ನು ನೀಡಲಾಗಿದೆ. ನಗರದಲ್ಲಿ ಲಸಿಕೆ ಪಡೆಯುವ ಸಂಬಂಧ ಆಟೋಗಳ ಮೂಲಕ ಧ್ವನಿ ವರ್ಧಗಳಲ್ಲಿ ಜಾಗೃತಿ ಮೂಡಿಸಬೇಕು. ಬ್ಲಾಕ್ ಮತ್ತು ಲೇನ್ ಮಟ್ಟದಲ್ಲಿ ಲಸಿಕೆ ನೀಡುವ ಪ್ರಕ್ರಿಯೆಯನ್ನು ಹೆಚ್ಚಿಸಬೇಕು ಎಂದರು.

ವಿಶೇಷ ಆಯುಕ್ತರು (ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ಉಪ ಆರೋಗ್ಯಾಧಿಕಾರಿ ಡಾ. ಜಿ.ಕೆ.ಸುರೇಶ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC