Please assign a menu to the primary menu location under menu

NEWSಆರೋಗ್ಯನಮ್ಮಜಿಲ್ಲೆ

ಮುನ್ನೆಚ್ಚರಿಕೆ ವಹಿಸಿದರೆ ಹೃದಯದ ಆರೋಗ್ಯ : ಪ್ರಕಾಶ್‌ ನೆಡುಂಗಡಿ

ವಿಜಯಪಥ ಸಮಗ್ರ ಸುದ್ದಿ
  • ಪುನೀತ್‌ ರಾಜ್‌ಕುಮಾರ್‌ ಗೌರವಾರ್ಥ ಆಮ್‌ ಆದ್ಮಿ ಪಾರ್ಟಿಯಿಂದ ಉಚಿತ ಹೃದಯ ಚಿಕಿತ್ಸಾ ಶಿಬಿರ

ಬೆಂಗಳೂರು: ಖ್ಯಾತ ನಟ ದಿ. ಪುನೀತ್‌ ರಾಜ್‌ಕುಮಾರ್‌ ಅವರ ಗೌರವಾರ್ಥ ಬೆಂಗಳೂರಿನಲ್ಲಿ ಆಮ್‌ ಆದ್ಮಿ ಪಾರ್ಟಿ ಆಯೋಜಿಸಿದ್ದ ಉಚಿತ ಹೃದಯ ಚಿಕಿತ್ಸಾ ಶಿಬಿರವು ಯಶಸ್ವಿಯಾಗಿ ನೆರವೇರಿತು.

ಸಂಪಂಗಿರಾಮ ನಗರದ ಪ್ರಸನ್ನ ಗಣಪತಿ ಕಲ್ಯಾಣ ಮಂಟಪದಲ್ಲಿ ನಡೆದ ಶಿಬಿರದಲ್ಲಿ ಮಾತನಾಡಿದ ಸಂಪಂಗಿರಾಮ ನಗರದ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ಪ್ರಕಾಶ್‌ ನೆಡುಂಗಡಿ, “ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಹಾಗೂ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚುತ್ತಿರುವುದು ಆಘಾತಕಾರಿ ಎಂದರು.

ಇನ್ನು ಇದರಿಂದಾಗಿ ಅನೇಕರನ್ನು ಯುವ ವಯಸ್ಸಿನಲ್ಲೇ ಕಳೆದುಕೊಳ್ಳುತ್ತಿದ್ದೇವೆ. ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವ ಹಾಗೂ ಸೂಕ್ತ ಮುನ್ನೆಚ್ಚರಿಕೆ ವಹಿಸುವ ಮೂಲಕ ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಆಮ್‌ ಆದ್ಮಿ ಪಾರ್ಟಿಯು ಉಚಿತ ಹೃದಯ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ ಎಂದು ಹೇಳಿದರು.

ಶಿಬಿರದಲ್ಲಿ ಭಾಗವಹಿಸಿದ್ದ ಅನೇಕ ನುರಿತ ವೈದ್ಯರು ನೂರಾರು ಜನರ ಹೃದಯ ತಪಾಸಣೆ ನಡೆಸಿ, ಔಷಧಗಳನ್ನು ವಿತರಿಸಿದರು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರಿಗೆ ಆಸ್ಪತ್ರೆಗೆ ಭೇಟಿಯಾಗುವಂತೆ ಸಲಹೆ ನೀಡಿದರು. ಆಮ್‌ ಆದ್ಮಿ ಪಾರ್ಟಿಯ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ವೈದ್ಯರು ಹಾಗೂ ರೋಗಿಗಳಿಗೆ ನೆರವಾದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್