Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶ

ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಭಾರತದ ಅತ್ಯಂತ ಬಡ ರಾಜ್ಯಗಳು : ನೀತಿ ಆಯೋಗ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ನೀತಿ ಆಯೋಗದ ಬಹು ಆಯಾಮ ಬಡತನ ಸೂಚ್ಯಂಕ(ಎಂಪಿಐ)ದ ಪ್ರಕಾರ ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶ ರಾಜ್ಯಗಳು ಭಾರತದ ಅತ್ಯಂತ ಬಡ ರಾಜ್ಯಗಳಾಗಿ ಹೊರಹೊಮ್ಮಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸೂಚ್ಯಂಕದ ಪ್ರಕಾರ, ಬಿಹಾರದಲ್ಲಿ ಶೇ. 51.91 ರಷ್ಟು ಜನ ಬಡವರಾಗಿದ್ದರೆ, ಜಾರ್ಖಂಡ್‌ನಲ್ಲಿ ಶೇ. 42.16 ರಷ್ಟು ಜನ ಹಾಗೂ ಉತ್ತರ ಪ್ರದೇಶದಲ್ಲಿ ಶೇ. 37.79 ರಷ್ಟು ಜನ ಬಡವರಾಗಿದ್ದಾರೆ.

ಅತ್ಯಂತ ಬಡ ರಾಜ್ಯಗಳ ಸೂಚ್ಯಂಕದಲ್ಲಿ ಮಧ್ಯಪ್ರದೇಶ(ಶೇ 36.65)ನಾಲ್ಕನೇ ಸ್ಥಾನದಲ್ಲಿದ್ದರೆ, ಮೇಘಾಲಯ (ಶೇ 32.67) ಐದನೇ ಸ್ಥಾನದಲ್ಲಿದೆ.

ಕೇರಳ(ಶೇ. 0.71), ಗೋವಾ(ಶೇ. 3.76), ಸಿಕ್ಕಿಂ (ಶೇ. 3.82), ತಮಿಳುನಾಡು(ಶೇ. 4.89) ಮತ್ತು ಪಂಜಾಬ್(ಶೇ. 5.59) ರಾಜ್ಯಗಳು ದೇಶದಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದ ಬಡತನವನ್ನು ದಾಖಲಿಸಿವೆ ಮತ್ತು ಸೂಚ್ಯಂಕದ ಕೆಳಭಾಗದಲ್ಲಿವೆ.

ವರದಿಯ ಪ್ರಕಾರ, ಭಾರತದ ರಾಷ್ಟ್ರೀಯ ಎಂಪಿಐ ಮಾಪನವೂ ಆಕ್ಸ್‌ಫರ್ಡ್ ಪಾವರ್ಟಿ ಮತ್ತು ಮಾನವ ಅಭಿವೃದ್ಧಿ ಉಪಕ್ರಮ(OPHI) ಮತ್ತು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ(UNDP) ಅಭಿವೃದ್ಧಿಪಡಿಸಿದ ಜಾಗತಿಕವಾಗಿ ಅಂಗೀಕರಿಸಲ್ಪಟ್ಟ ಮತ್ತು ದೃಢವಾದ ವಿಧಾನವನ್ನು ಬಳಸುತ್ತದೆ..

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ