Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಎರಡು ವರ್ಷದ ಬಳಿಕ ಮತ್ತೆ ಬಂದಿದೆ ರಂಗು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕೊರೊನಾ ಕಾಟದಿಂದ ನಿಂತಿದ್ದ ಕಡಲೆಕಾಯಿ ಷರಿಷೆಗೆ ಮತ್ತೆ ರಂಗು ಬಂದಿದೆ. ಮುಜರಾಯಿ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ನಡೆಯುವ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಶಾಸಕರಾದ ರವಿಸುಬ್ರಮಣ್ಯ, ಉದಯ್ ಬಿ.ಗರುಡಾಚಾರ್ ಇಂದು ಚಾಲನೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಡಲೆಕಾಯಿ ಷರಿಷೆ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ ಬಸವನಗುಡಿ ಇಂದು ಕಲರ್ ಫುಲ್ ಆಗಿದೆ. ಬಣ್ಣ-ಬಣ್ಣದ ಅಟಿಕೆ, ರುಚಿ ರುಚಿಯಾದ ಬಡವರ ಬಾದಾಮಿ ಕಡಲೆಕಾಯಿ, ಲೈಟಿಂಗ್‍ನಲ್ಲಿ ಕಂಗೊಳಿಸುವ ಜಾತ್ರೆ ತಿನಿಸುಗಳು ಹಾಗೂ ಕಲರ್ ಫುಲ್ ದುನಿಯಾ ಅನಾವರಣವಾಗಿದೆ.

ಬಸವನಗುಡಿ ಸಂಪ್ರದಾಯಿಕ ಕಡಲೆಕಾಯಿ ಪರಿಷೆ ಪ್ರಯುಕ್ತ ಹಬ್ಬದ ವಾತಾವರಣ ಮನೆ ಮಾಡಿದೆ. ಕೊರೊನಾ ಮಾರ್ಗಸೂಚಿಯೊಂದಿಗೆ ಕಡಲೆಕಾಯಿ ಪರಿಷೆ ನಡೆಯುತ್ತಿದೆ. ಜನರು ಮುಕ್ತವಾಗಿ ಈ ಜಾತ್ರೆಗೆ ಆಗಮಿಸುತ್ತಿದ್ದಾರೆ.

ಇಂದಿನಿಂದ ಡಿಸೆಂಬರ್ 1ರವರೆಗೆ ಅಂದರೆ 3 ದಿನ ಈ ಕಡಲೆಕಾಯಿ ಪರಿಷೆ ನಡೆಯಲಿದೆ. ಸಾವಿರಕ್ಕೂ ಹೆಚ್ಚು ಕಡಲೆಕಾಯಿ ಮಳಿಗೆಗಳು ಓಪನ್ ಆಗಿದ್ದು. 50 ರೂ.ಗೆ ಸೇರು ಮಾರಾಟವಾಗುತ್ತಿದೆ.

ಭಾನುವಾರದಿಂದಲೇ ಪರಿಷೆ ಸಂಭ್ರಮ ಮನೆ ಮಾಡಿತ್ತು. ಕುಟುಂಬ ಸಮೇತರಾಗಿ ಬಂದು ಕೊರೊನಾ ನಿಯಮವನ್ನೇ ಮರೆತು ಕಡಲೆಕಾಯಿ ಖರೀದಿಸಲು ಜನ ಮುಗಿಬಿದ್ದಿದ್ದರು.

ಇಂದು ಕಡಲೆಕಾಯಿ ಷರಿಷೆಗೆ ಚಾಲೆ ನೀಡಿದ್ದು, ಈ ವೇಳೆ ಬಿಬಿಎಂಪಿ ಆಡಳಿತಗಾರ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತ, ವಲಯ ಆಯುಕ್ತರು ತುಳಸಿ ಮದ್ದಿನೇನಿ, ವಲಯ ಜಂಟಿ ಆಯುಕ್ತ ಜಗದೀಶ್ ನಾಯಕ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ