Vijayapatha – ವಿಜಯಪಥ
Friday, November 1, 2024
NEWSಆರೋಗ್ಯನಮ್ಮರಾಜ್ಯ

ಕೋವಿಡ್‌ನಿಂದ ಸಾವಿನ ಮೆರವಣಿಗೆ ಮತ್ತೆ ಬೇಡ : ಮಾಜಿ ಸಿಎಂ ಎಚ್‌ಡಿಕೆ ಎಚ್ಚರಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್‌19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗದಂತೆ ಸರ್ಕಾರ ಮುಜಾಗ್ರತೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಆಸ್ಪತ್ರೆಯಲ್ಲಿ ಬೆಡ್‌ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದು ಬೇಡ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಹೊಸ ತಳಿ ಓಮಿಕ್ರಾನ್ 30ಕ್ಕೂ ಹೆಚ್ಚು ರೂಪಾಂತರ ಹೊಂದಿರುವ ವರದಿ ಇದೆ. ಭಾರತವೂ ಸೇರಿ ಜಗತ್ತಿನ ವಿವಿಧ ದೇಶಗಳಲ್ಲಿ ಮಾರಕ ಮಾರಿ ಪುನಾ ಅಬ್ಬರಿಸುತ್ತಿದೆ.

ಕೇಂದ್ರ ಸರಕಾರ, ಏಮ್ಸ್ ವೈದ್ಯರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಎಲ್ಲೆಡೆ ಕೆನ್ನಾಲಗೆ ಚಾಚಿರುವ ಕೊರೊನಾ ಹೊಸ ತಳಿಯನ್ನೆದುರಿಸಲು ನಮಗೊಂದಿಷ್ಟು ತಾಳ್ಮೆ ಬೇಕಿದೆ ಎಂದರು.

ಕೊರೊನಾ ಶಿಷ್ಟಾಚಾರ ಪಾಲಿಸೋಣ. ಮಾಸ್ಕ್, ಸ್ಯಾನಿಟೈಸ್, ದೈಹಿಕ ಅಂತರ ಪಾಲನೆ ಮಹಾಮಾರಿ ನಿಯಂತ್ರಣಕ್ಕಿರುವ ಸರಳಸೂತ್ರಗಳು. ಅಗತ್ಯವಿದ್ದರೆ ಓಡಾಡಿ.

ಹೊರಗೆ ಬಂದಾಗ ಮುನ್ನೆಚ್ಚರಿಕೆ ಜತೆಗೆ, ಇನ್ನೊಬ್ಬರ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಾವ ಕಾರಣಕ್ಕೂ ಮತ್ತೊಂದು ಸಾವಿನ ಅಲೆಗೆ ಅವಕಾಶ ಕೊಡುವುದು ಬೇಡ. ಇದು ನನ್ನ ವಿನಮ್ರ ಪ್ರಾರ್ಥನೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ