Please assign a menu to the primary menu location under menu

CrimeNEWSದೇಶ-ವಿದೇಶ

ಹೃದಯಾಘಾತವಾಗಿದ್ದ ರೋಗಿಗೆ ಚಿಕಿತ್ಸೆ ನೀಡುತ್ತಿದ್ದಾಗ ವೈದ್ಯರಿಗೂ ಹೃದಯಾಘಾತ, ರೋಗಿ-ವೈದ್ಯ ಇಬ್ಬರೂ ಮೃತ

ವಿಜಯಪಥ ಸಮಗ್ರ ಸುದ್ದಿ

ಕಾಮಾರೆಡ್ಡಿ: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿ ಆ ವೈದ್ಯರಿಗೂ ಹೃದಯಾಘಾತ ಸಂಭವಿಸಿ ಇಬ್ಬರೂ ಸಾವನ್ನಪ್ಪಿದ ಮನಕಲಕುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಕಾಮಾರೆಡ್ಡಿ ಜಿಲ್ಲೆಯ ಗುಜ್ಜಲ ತಾಂಡಾದ ಜಗ್ಯಾ ನಾಯಕ್ ಎಂಬಾತ ಹೃದಯಾಘಾತದಿಂದ ಗಾಂಧಾರಿಯ ಖಾಸಗಿ ನರ್ಸಿಂಗ್ ಹೋಂ ಗೆ ದಾಖಲಾಗಿದ್ದರು.

ಜಗ್ಯಾ ನಾಯಕ್‌ಗೆ ಚಿಕಿತ್ಸೆ ನೀಡುತ್ತಿದ್ದ ಡಾ.ಲಕ್ಷ್ಮಣ್ ಚಿಕಿತ್ಸೆ ನೀಡುತ್ತಿದ್ದಾಗಲೇ ಅವರಿಗೂ ಹೃದಯಾಘಾತವಾಗಿದ್ದು, ರೋಗಿಯನ್ನು ನೋಡುತ್ತಲೇ ಕೆಳಗೆ ಕುಸಿದು ಬಿದ್ದಿದ್ದಾರೆ.

ರೋಗಿಗೆ ಚಿಕಿತ್ಸೆ ನಿಡುತ್ತಿದ್ದಾಗಲೇ ಕುಸಿದು ಬಿದ್ದ ವೈದ್ಯರ ಜೀವ ಉಳಿಸಲು ಆಸ್ಪತ್ರೆ ಸಿಬ್ಬಂದಿ ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗದೆ ಕೊನೆಯುಸಿರೆಳೆದಿದ್ದಾರೆ.

ವೈದ್ಯರಿಗೆ ಹೃದಯಾಘಾತವಾದ ಸುದ್ದಿ ತಿಳಿಯುತ್ತಿದ್ದಂತೆ ಏನು ಮಾಡಬೇಕೆಂದು ದಿಕ್ಕು ತೋಚದ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯ ಸಂಬಂಧಿಕರು ಆತನನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರೋಗಿಯೂ ಜೀವ ಬಿಟ್ಟಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಅಧಿಕಾರಿಗಳು-ನೌಕರರ ಬೇಡಿಕೆಯಂತೆ ಸರಿ ಸಮಾನ ವೇತನ ಕೊಡಿ: BMS ತಾಕೀತು NWKRTC: ಹುಬ್ಬಳ್ಳಿ-ಧಾರವಾಡ ಹೈಕೋರ್ಟ್‌ ನಡುವೆ ಹೊಸ ಬಸ್‌ಗಳ ಸಂಚಾರ- ವಕೀಲರ ಮನವಿ ಸ್ಪಂದಿಸಿದ ಅಧಿಕಾರಿಗಳು ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ