NEWSನಮ್ಮರಾಜ್ಯ

ಸರ್ಕಾರಿ ಸೌಲಭ್ಯ ಮಾಹಿತಿ ಪಡೆಯಲು ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567ಕ್ಕೆ ಕರೆ ಮಾಡಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾಮಾಂತರ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567 ಗೆ ಕರೆ ಮಾಡಿ, ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳ ಮಾಹಿತಿಯನ್ನು ಪಡೆಯಬಹುದು.

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ರೂಪುಗೊಳಿಸಿರುವ ಮಹತ್ವಪೂರ್ಣ ಯೋಜನೆಯಾದ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವನ್ನು ಕರ್ನಾಟಕದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ 1998ರಿಂದ ಹಿರಿಯ ನಾಗರಿಕರ ಯೋಗಕ್ಷೇಮಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆ ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಕರ್ನಾಟಕದಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಪಾಲುದಾರರಾಗಿ ನಾಮನಿರ್ದೇಶನಗೊಂಡಿದ್ದು, ಪ್ರಸ್ತುತ ಹಿರಿಯ ನಾಗರಿಕರ ಸಹಾಯವಾಣಿ 14567 ಸಂಪರ್ಕ ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪಿತವಾಗಿದೆ ಹಾಗೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಷೇತ್ರ ಕಾರ್ಯನಿರ್ವಹಣ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಹಿರಿಯ ನಾಗರಿಕರ ಸಹಾಯವಾಣಿ(ಎನ್.ಹೆಚ್.ಎಸ್.ಸಿ) ಎಲ್ಡರ್‌ಲೈನ್, ಟೋಲ್ ಫ್ರೀ ಸಂಖ್ಯೆ 14567 ಅಗತ್ಯ ಮಾಹಿತಿ ಮತ್ತು ಉತ್ತಮ ಕ್ಷೇತ್ರ ಕಾರ್ಯದ ಮೂಲಕ ಭಾರತದಲ್ಲಿ ಹಿರಿಯ ನಾಗರಿಕರ ಕುಂದು ಕೊರತೆಗಳನ್ನು ಪರಿಹರಿಸುವ ಒಂದು ಸಾರ್ವಜನಿಕ ವೇದಿಕೆಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಹಿರಿಯ ನಾಗರಿಕರಿಗೆ ಕೋವಿಡ್ ಸಂಬಂಧಿತ ವಿಷಯಗಳು ಕುರಿತು ಮಾಹಿತಿ, ಆಸ್ಪತ್ರೆಗಳ ಬಗ್ಗೆ, ವೃದ್ದಾಶ್ರಮಗಳ ಬಗ್ಗೆ, ಆರೈಕೆ ಕೇಂದ್ರಗಳು, ಹಗಲು ಯೋಗಕ್ಷೇಮ ಕೇಂದ್ರಗಳು ಇತ್ಯಾದಿ ವಿಚಾರಗಳ ಬಗ್ಗೆ ಮಾಹಿತಿಯನ್ನು ಒದಗಿಸಲಾಗುತ್ತದೆ.

ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳು, ಪಿಂಚಣಿ ಯೋಜನೆಯ ಬಗ್ಗೆ ಮಾರ್ಗದರ್ಶನ ನೀಡುವುದಲ್ಲದೆ, ಹಿರಿಯ ನಾಗರಿಕರ ಪಾಲನೆ ಪೋಷಣೆ ಕಾಯಿದೆ ಕುರಿತು ಮತ್ತು ಕಾನೂನಾತ್ಮಕ ಸಮಸ್ಯೆಗಳ ಬಗ್ಗೆ ಮಾರ್ಗದರ್ಶನ ನೀಡಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಾಸಿಸುತ್ತಿರುವ ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567 ಗೆ ಕರೆ ಮಾಡಿ, ಹಿರಿಯ ನಾಗರಿಕರಿಗೆ ಇರುವ ಸರ್ಕಾರಿ ಸೌಲಭ್ಯಗಳ ಮಾಹಿತಿಯನ್ನು ಪಡೆಯುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೋರಿದ್ದಾರೆ.

Leave a Reply

error: Content is protected !!
LATEST
ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ...