Please assign a menu to the primary menu location under menu

NEWSರಾಜಕೀಯ

ಮಿತಿಮೀರಿದ ಅಕ್ರಮ: ಚುನಾವಣೆ ರದ್ದುಪಡಿಸಲು ಚನ್ನಪ್ಪಗೌಡ ನೆಲ್ಲೂರು ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಅಕ್ರಮಗಳು ಮಿತಿಮೀರಿರುವುದರಿಂದ ಚುನಾವಣೆಯನ್ನು ರದ್ದು ಪಡಿಸಬೇಕು ಎಂದು ಆಮ್‌ ಆದ್ಮಿ ಪಾರ್ಟಿಯ ಮುಖಂಡ ಹಾಗೂ ಅಭ್ಯರ್ಥಿ ಚನ್ನಪ್ಪಗೌಡ ನೆಲ್ಲೂರು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚನ್ನಪ್ಪಗೌಡ ನೆಲ್ಲೂರು, “ಡಿ. 12ರಂದು ನಡೆಯಲಿರುವ ಒಕ್ಕಲಿಗರ ಸಂಘದ 35 ನಿರ್ದೇಶಕರ ಸ್ಥಾನದ ಚುನಾವಣೆಗೆ ಅನೇಕ ರಾಜಕಾರಣಿಗಳು, ನಿವೃತ್ತ ಸರ್ಕಾರಿ ಅಧಿಕಾರಿಗಳು, ಪ್ರಸ್ತುತ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿಗಳು ಹಾಗೂ ಭ್ರಷ್ಟರು ಸ್ಪರ್ಧಿಸಿದ್ದಾರೆ.

ಅವರು ಅಕ್ರಮ ಮಾರ್ಗಗಳಲ್ಲಿ ಗಳಿಸಿದ ಹಣವನ್ನು ಮತದಾರರಿಗೆ ಹಂಚಲು ರಾಜ್ಯದ ಮೂಲೆಮೂಲೆಗೂ ಕೋಟ್ಯಂತರ ರೂಪಾಯಿಗಳನ್ನು ವಾಮಮಾರ್ಗಗಳ ಮೂಲಕ ಸಾಗಿಸುತ್ತಿದ್ದಾರೆ. ಇದಕ್ಕೆ ಯಾವುದೇ ಲೆಕ್ಕವನ್ನು ಆದಾಯ ತೆರಿಗೆ ಇಲಾಖೆ ಅಥವಾ ಸರ್ಕಾರದ ಯಾವುದೇ ಪ್ರಾಧಿಕಾರಗಳಿಗೆ ಸಲ್ಲಿಸದಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಈ ಬಗ್ಗೆ ಆದಾಯ ತೆರಿಗೆ ಇಲಾಖೆಯ ಜಾರಿ ನಿರ್ದೇಶನಾಲಯದ ಜಂಟಿ ಆಯುಕ್ತರು ಹಾಗೂ ಒಕ್ಕಲಿಗರ ಸಂಘದ ಚುನಾವಣಾಧಿಕಾರಿಗಳಿಗೆ ದೂರನ್ನು ಸಹ ಸಲ್ಲಿಸಲಾಗಿದೆ ಎಂದು ಚನ್ನಪ್ಪ ಗೌಡ ಹೇಳಿದರು.

ರಾಜ್ಯ ಭೂಕಬಳಿಕೆ ಹೋರಾಟ ಸಮಿತಿ ಅಧ್ಯಕ್ಷ ಎಚ್‌.ಸುರೇಶ್‌ ಮಾತನಾಡಿ, “ಅಕ್ರಮ ಹಣವನ್ನು ಮನಸೋ ಇಚ್ಛೆ ಮತದಾರರಿಗೆ ಹಂಚಿ ಚುನಾವಣಾ ಅಕ್ರಮಗಳ ಮೂಲಕ ಗೆಲ್ಲಲು ಹೊರಟಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ.

ಈ ದೇಶದ ಕಾನೂನುಗಳಿಗೆ ಎಳ್ಳಷ್ಟೂ ಬೆಲೆ ನೀಡದೇ ಅಕ್ರಮ ಆರ್ಥಿಕ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಆದ್ದರಿಂದ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಆದಾಯ ತೆರಿಗೆ (ಐಟಿ) ಇಲಾಖೆಗಳು ಶೀಘ್ರವೇ ದಾಳಿ ನಡೆಸಿ, ಅಭ್ಯರ್ಥಿಗಳು ಅಡಗಿಸಿಟ್ಟಿರುವ ಹಾಗೂ ಸಾಗಿಸುತ್ತಿರುವ ಅಕ್ರಮ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವ ಮೂಲಕ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಉಪಾಧ್ಯಕ್ಷ ಬಿ .ಟಿ .ನಾಗಣ್ಣರವರು ಮಾತನಾಡಿ, “ಮತದಾರರ ಪಟ್ಟಿಯಲ್ಲಿನ ಅಕ್ರಮದ ಬಗ್ಗೆ ಚನ್ನಪ್ಪಗೌಡರು ಸಾಕ್ಷಿ ಸಮೇತ ದೂರು ದಾಖಲಿಸಿದ್ದರೂ, ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಅಪ್ರಾಮಾಣಿಕ ಅಭ್ಯರ್ಥಿಗಳು ಗೆದ್ದು ಬಂದು ಮುಂದಿನ ದಿನಗಳಲ್ಲಿ ಸಂಘದ ಆಸ್ತಿ ಪಾಸ್ತಿಗಳಿಗೆ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ ಚುನಾವಣೆಯನ್ನು ರದ್ದು ಪಡಿಸುವುದೇ ಸೂಕ್ತ” ಎಂದು ಅಭಿಪ್ರಾಯಪಟ್ಟರು.

Leave a Reply

error: Content is protected !!
LATEST
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತ... ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಕಟಾವುಮಾಡಿ ಕಣದಲ್ಲೇ ಬಿಟ್ಟಿದ್ದ 60 ಕ್ವಿಂಟಲ್‌ ಭತ್ತ ತಿಂದು ನಾಶ ಮಾಡಿದ ಆನೆಗಳು: ತಲೆಮೇಲೆ ಕೈಹೊತ್ತು ಕುಳಿತ ರೈತರು ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ತುಂಬಿದ ಲಾರಿ ಡಿಕ್ಕಿ: ಹೊತ್ತಿ ಉರಿದ ಕ್ಯಾಂಟರ್‌- ಚಾಲಕರಿ... KSRTC: ನಾಲ್ಕೂ ನಿಗಮಗಳ ಸಾರಿಗೆ ನೌಕರರು ಜ.1ರಿಂದ 6 ತಿಂಗಳುಗಳ ಕಾಲ ಮುಷ್ಕರ ಮಾಡುವಂತಿಲ್ಲ- ಸರ್ಕಾರ ಆದೇಶ ಟೀ ಕುಡಿದು ಹೋಗುವಿರಂತೆ ಮನೆಗೆ ಬನ್ನಿ ಎಂದು ಕರೆದ ಸುಂದರಿಯ ಮಾತು ನಂಬಿ ಹನಿ ಟ್ರ್ಯಾಪ್‌ಗೆ ಬಿದ್ದ ಕಂಟ್ರ್ಯಾಕ್ಟರ್ 4 ವರ್ಷಕ್ಕೊಮ್ಮೆ ಚೌಕಾಸಿ ನಡೆಸುವ ಬದಲು 7ನೇ ವೇತನ ಆಯೋಗ ಜಾರಿಮಾಡಿ: ನೌಕರರ ಸೇನೆ ಆಗ್ರಹ