NEWSನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವಸ್ತು ಸ್ಥಿತಿ ತಿಳಿಯಲು ಐಎಎಸ್ ಅಧಿಕಾರಿ ಶ್ರೀನಿವಾಸ ಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವಸ್ತು ಸ್ಥಿತಿ ಹಾಗೂ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣ ಕುರಿತಾಗಿ ಅಧ್ಯಯನ ನಡೆಸಿ ಮೂರು ತಿಂಗಳ ಒಳಗಡೆ ವರದಿ ನೀಡಲು ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಸರ್ಕಾರ ಸಮಿತಿ ರಚಿಸಿದೆ.

ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಕೆಎಸ್‍ಆರ್ ಟಿಸಿ, ವಾಯುವ್ಯ ಸಾರಿಗೆ ಸಂಸ್ಥೆ, ಬಿಎಂಟಿಸಿ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ನಿಗಮಗಳಲ್ಲಿ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣ ಕುರಿತಾಗಿ ಮೂರು ತಿಂಗಳೊಳಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ನಷ್ಟದಲ್ಲಿ ಸಾಗುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ಸಾರಿಗೆ ನಿಗಮ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ನಿಗಮಗಳ ಪುನರ್ ನಿರ್ಮಾಣಕ್ಕೆ ಹಲವು ಸುಧಾರಣೆಗಳನ್ನು ತರಲು ಸಮಿತಿ ರಚಿಸಲಾಗಿದೆ. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ತಿಳಿಸಿದ್ದರು.

ಅದಂತರ ಸಮಿತಿ ರಚಿಸಿದ್ದು ಆ ಸಮಿತಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಕೆಎಸ್‌ಆರ್‌ಟಿಸಿ ಎಂಡಿಗಳು ಒದಗಿಸಿಕೊಡಬೇಕು. ಜತೆಗೆ ಸಮಿತಿ ಕೇಳುವ ಎಲ್ಲ ಮಾಹಿತಿಯನ್ನು ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದರೆ, ಸಮಿತಿ ವರದಿ ಸಲ್ಲಿಕೆಗೆ ಮೂರು ತಿಂಗಳ ಗಡುವು ನೀಡಿದ್ದು, ಅದರ ವರದಿ ಆದರಿಸಿ ನೌಕರರ ಸಮಸ್ಯೆ, ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು ಹೋಗುವ ಬಗ್ಗೆ  ಸರ್ಕಾರ ಹೊರಟಿರುವುದು ಒಳ್ಳೆಯ ಬೆಳವಣಿಗೆ.

ಆದರೆ, ಈಗ ಮುಷ್ಕರದ ಸಮದಲ್ಲಿ ಅಮಾಯಕರ ಮೇಲೆ ವಜಾಸ್ತ್ರ ಹೂಡಿರುವುದನ್ನು ವಾಪಸ್‌ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು ಅತೀ  ಶೀಘ್ರ ಕ್ರಮ ಕೈಗೊಳ್ಳಬೇಕಿದೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC