Please assign a menu to the primary menu location under menu

NEWSಆರೋಗ್ಯನಮ್ಮರಾಜ್ಯ

ಎಚ್‌ಐವಿ ಮತ್ತು ಏಡ್ಸ್ ಸೋಂಕಿತರು ಸರ್ಕಾರದ ಸೌಲಭ್ಯ ಪಡೆದು ಉತ್ತಮ ಜೀವನ ನಡೆಸಿ : ಕೆ.ಲೀಲಾವತಿ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾಮಾಂತರ: ಎಚ್.ಐ.ವಿ. ಮತ್ತು ಏಡ್ಸ್ ಸೋಂಕಿನಿಂದ ಬಾಧಿತದವರಿಗೆ, ಸರ್ಕಾರದಿಂದ ವೈದ್ಯಕೀಯ ತಪಾಸಣೆ ಮತ್ತು ಔಷಧೀಯ ಸೌಲಭ್ಯಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಹಿಂಜರಿಕೆ ಇಲ್ಲದೇ ಸೋಂಕಿತರು ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಂಡು, ಉತ್ತಮ ಜೀವನ ನಡೆಸಲು ಮಾನಸಿಕವಾಗಿ ಸಿದ್ಧರಾಗಬೇಕೆಂದು ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಯೋಜನಾ ನಿರ್ದೇಶಕರಾದ ಕೆ.ಲೀಲಾವತಿ  ತಿಳಿಸಿದರು.

ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಆರೋಗ್ಯಧಿಕಾರಿಗಳು ದೇವನಹಳ್ಳಿ ಹಾಗೂ ಜಿಲ್ಲೆಯ ಇತರೆ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ‘ಅಸಮಾನತೆಯನ್ನು ಕೊನೆಗೊಳಿಸಿ, ಏಡ್ಸ್ ಕೊನೆಗೊಳಿಸಿ’ ಎಂಬ ಘೋಷವಾಕ್ಯದಡಿ “ವಿಶ್ವ ಏಡ್ಸ್ ದಿನ-2021” ಪ್ರಯುಕ್ತ ಎಚ್.ಐ.ವಿ ಮತ್ತು ಏಡ್ಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಚ್.ಐ.ವಿ. ಮತ್ತು ಏಡ್ಸ್ ರೋಗದಿಂದ ಬಾಧಿತರಾದವರು ತೆಗದುಕೊಳ್ಳಬೇಕಾದ ಕ್ರಮಗಳ ಹಾಗೂ ಸೋಂಕು ಹರಡದಂತೆ ತಡೆಯುವ ಕುರಿತು ಸಾರ್ವಜನಿಕರಲ್ಲಿ ಮಾಹಿತಿ ಹಾಗೂ ಅರಿವು ಮೂಡಿಸುವುದು ನಮ್ಮೆಲ್ಲರ ಜವಬ್ದಾರಿಯಾಗಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕ್ರಮ ಕೈಗೊಳ್ಳಬೇಕು ಎಂದರು.

ಶಾಲಾ ಕಾಲೇಜುಗಳಲ್ಲಿ ಎಚ್.ಐ.ವಿ. ಮತ್ತು ಏಡ್ಸ್ ಕುರಿತ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅವರಲ್ಲಿ ಆರೋಗ್ಯಕರ ಜೀವನ ನಡೆಸುವಂತೆ ತಿಳಿ ಹೇಳಬೇಕು, ಸಮಾಜದಲ್ಲಿ ಸೋಂಕು ಬಾಧಿತ ವ್ಯಕ್ತಿಗೆ ತಾರತಮ್ಯಕ್ಕೆ ಒಳಪಟ್ಟರೆ ಅಂತಹವರು ಕಾನೂನು ನೆರವು ಪಡೆಯಬಹುದುದಾಗಿದೆ ಎಂದು ಸಲಹೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಮಾತನಾಡಿ, ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲಾ ಎಚ್.ಐ.ವಿ. ಸೋಂಕಿತರಿಗೆ ಜೀವನ ಪಯರ್ಂತ ಉಚಿತವಾಗಿ ಎ.ಆರ್.ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರಲ್ಲದೆ, ಸೋಂಕಿತರು ಯಾವುದೇ ಭಯವಿಲ್ಲದೇ ಚಿಕಿತ್ಸೆಗೆ ಸ್ಪಂದಿಸಿ ಅತ್ಯುತ್ತಮ ಜೀವನವನ್ನು ನಡೆಸಬಹುದು.

ಕರಪತ್ರ, ಪೋಸ್ಟರ್, ಬ್ಯಾನರ್, ಜಾಥಾ, ಗೋಡೆ ಬರಹಗಳ ಮೂಲಕ ಜನರಲ್ಲಿ, ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು. ಎಚ್.ಐ.ವಿ. ಹಾಗೂ ಏಡ್ಸ್ ಸೋಂಕು ತಡೆಗಟ್ಟಲು ಸಂಬಂಧಿಸಿದ ಇಲಾಖೆ ಅಥವಾ ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮವನ್ನು ನಡೆಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ ಸೋಂಕು ಹೊಂದಿರುವ ವ್ಯಕ್ತಿಯು ಮಾನಸಿಕವಾಗಿ ಧೃತಿಗೆಡದೆ ಚಿಕಿತ್ಸೆ ಪಡೆದುಕೊಳ್ಳಬೇಕು, ಸಮಾಜದಲ್ಲಿ ಎಲ್ಲರಂತೆ ಸೋಂಕಿತರು ಸರಿ ಸಮನಾಗಿ ಬದುಕಲು ಅವಕಾಶ ಕಲ್ಪಿಸುವ ಮುಖಾಂತರ ಅವರಿಗೆ ನೈತಿಕ ಬೆಂಬಲ ಸೂಚಿಸಬೇಕು ಎಂದರು.

ಜಿಲ್ಲೆಯಲ್ಲಿ ಪ್ರತಿವರ್ಷ ನಾಲ್ಕು ತಾಲೂಕುಗಳಲ್ಲಿ ಜಾನಪದ ಕಲಾ ತಂಡಗಳಿಂದ ಆಯ್ದ ಪ್ರಮುಖ ಜನನಿಬಿಡ ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ಹೆಚ್.ಐ.ವಿ. ಹಾಗೂ ಏಡ್ಸ್ ಸೋಂಕು ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್