Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

ಹಿರಿಯೂರು: ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಪಾದಯಾತ್ರೆ

ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಿಂದ ವಿಧಾನಸೌಧದ ವರೆಗೆ

ವಿಜಯಪಥ ಸಮಗ್ರ ಸುದ್ದಿ

ಹಿರಿಯೂರು : ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರ ತವರು ಜಿಲ್ಲೆ ಬಳ್ಳಾರಿಯಿಂದ ವಿಧಾನಸೌಧದ ವರೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ (ನ.29) ಆರಂಭಗೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಬುಧವಾರ ರಾತ್ರಿ ಹಿರಿಯೂರಿನಲ್ಲಿರುವ ಸಾರಿಗೆ ಮಹಿಳಾ ನೌಕರರೊಬ್ಬರು ಪಾದಯಾತ್ರೆ ಮಾಡುತ್ತಿರುವ ತಮ್ಮ ಸಹೋದ್ಯೋಗಿಗಳು ಉಳಿದುಕೊಳ್ಳಲು ಲಾಡ್ಜ್‌ನಲ್ಲಿ ವ್ಯವಸ್ಥೆ ಮಾಡುವ ಮೂಲಕ ಯ ಪಾದಯಾತ್ರೆಗೆ ಬೆಂಬಲವನ್ನು ನೀಡಿದರು.

ಇಂದು ಬೆಳಗ್ಗೆ ಬಿಎಂಟಿಸಿಯ ನೌಕರರೊಬ್ಬರು ಹಿರಿಯೂರಿನಲ್ಲಿರುವ ತಮ್ಮ ಮನೆಯಲ್ಲಿ ಉಪಾಹಾರ ವ್ಯವಸ್ಥೆ ಮಾಡಿದ್ದರು. ಈಗ ಪಾದಯಾತ್ರೆ ಹಿರಿಯೂರು ಬಿಟ್ಟು 5 ಕಿಮಿ ಕ್ರಮಿಸಿದ್ದು, ವಜಾಗೊಂಡ ನೌಕರರು ಸೇರಿ ಇತರ ನೌಕರರು ಪಾದಯಾತ್ರೆಗೆ ಸಾಥ್‌ ನೀಡುತ್ತಿದ್ದಾರೆ.

ಮಂಗಳವಾರ ರಾತ್ರಿ ಚಳ್ಳಕೆರೆಯ ತಮ್ಮ ಸಹೋದ್ಯೋಗಿಯ ಮನೆಯಲ್ಲಿ ವಾಸ್ತವ್ಯ ಮಾಡಿದ್ದ ಪಾದಯಾತ್ರಿಗರು ಮೂರನೇ ದಿನವಾದ ಬುಧವಾರ ಬೆಳಗ್ಗೆ ತಿಂಡಿ ಮುಗಿಸಿ ಚಳ್ಳಕೆರೆಯಿಂದ ಪಾದಯಾತ್ರೆ ಆರಂಭಿಸಿದರು.

ಮಂಗಳವಾರ (ನ.30) ಹಾನಗಲ್‌ಲ್ಲಿ ವಾಸ್ತವ್ಯ ಮಾಡಿದ್ದರು. ಮುಂಜಾನೆ 5ಗಂಟೆಗೆ ಹಾನಗಲ್‌ನಿಂದ ಮತ್ತೆ ಪಾದಯಾತ್ರೆ ಆರಂಭಿಸಿದರು. ಈ ಮಧ್ಯೆ ಹಾನಗಲ್‌ನಲ್ಲಿ ರಾತ್ರಿ ಉಳಿದುಕೊಳ್ಳಲು ಮಸೀದಿಯಲ್ಲಿ ಮುಸ್ಲಿಂ ಬಾಂಧವರು ವ್ಯವಸ್ಥೆ ಮಾಡಿದ್ದರು. ಜತೆಗೆ ಊಟದ ವ್ಯವಸ್ಥೆಯನ್ನು ಮಾಡಿಕೊಟ್ಟು ಸತ್ಕರಿಸುವ ಮೂಲಕ ಪಾದಯಾತ್ರೆಗೆ ಬೆಂಬಲ ಸೂಚಿಸಿದರು.

ಇನ್ನೂ ಅಧಿಕಾರಿಗಳಿಗೆ ಹೆದರಿ ಹಲವು ನೌಕರರು ಪಾದಯಾತ್ರೆ ಮಾಡಲು ಮುಂದಾಗಲು ಹಿಂದೆ ಸರಿಯುತ್ತಿದ್ದ ನೌಕರರು ಏನಾದರೂ ಆಗಲಿ ನಾವು ಪಾದಯಾತ್ರೆಯಲ್ಲಿ ಭಾಗವಹಿಸುತ್ತೇವೆ ಎಂದು ಬರುತ್ತಿರುವುದು ಒಗ್ಗಟ್ಟಿನ ಸಂಕೇತವಾಗಿದೆ.

4ನೇ ದಿನವಾದ ಇಂದು ದೊಡ್ಡಯ್ಯ, ನಿಂಗಪ್ಪ, ಸೆಲ್ವಂ, ರಾಮು ಮತ್ತು ಮಂಜೇಗೌಡ ಈ ಐವರು ನೌಕರರು ಪಾದಯಾತ್ರೆ ಮಾಡುತ್ತಿದ್ದು, ಮಾರ್ಗ ಮಧ್ಯೆ ಬರುವ ಗ್ರಾಮಗಳ ಗ್ರಾಮಸ್ಥರು ಈ ನೌಕರರಿಗೆ ಸಾಥ್‌ ನೀಡುತ್ತಿದ್ದಾರೆ.

ಬಳ್ಳಾರಿ ಕೇಂದ್ರ ಬಸ್‌ನಿಲ್ದಾಣದಿಂದ ಆರಂಭವಾದ ಪಾದಯಾತ್ರೆ ಹಾನಗಹಲ್‌- ಚಳ್ಳಕೆರೆ – ಹಿರಿಯೂರು ಬೈಪಾಸ್‌- ತುಮಕೂರು – ಯಶವಂತಪುರ – ಮೇಖ್ರಿ ವೃತ್ತ – ಪ್ಯಾಲೇಸ್‌ಗುಟ್ಟಹಳ್ಳಿ ಮಾರ್ಗವಾಗಿ ಸಾಗಿ ಡಿ.4ರಂದು ವಿಧಾನಸೌಧ ತಲುಪಲಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಮತ್ತು ಬೇಡಿಕೆಗಳ ಮನವಿ ಸಲ್ಲಿಸಲಿದ್ದಾರೆ.

ನಾಲ್ಕು ನಿಗಮಗಳ 1,30 ಲಕ್ಷ ನೌಕರರ ಪರವಾಗಿ ಬಳ್ಳಾರಿ ಯಿಂದ ಬೆಂಗಳೂರಿಗೆ ಪಾದಯಾತ್ರೆ  ಹಮ್ಮಿಕೊಂಡು ಈಗಾಗಲೇ ಬಳ್ಳಾರಿ, ಹಾನಗಲ್, ಚಳ್ಳಕೆರೆ ಮತ್ತು ಹಿರಿಯೂರು ಬಿಟ್ಟು ಹೊರಟಿದೆ.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್