ಎಎಪಿಯಿಂದ ಬೆಂಗಳೂರು ರಸ್ತೆ ಗುಂಡಿ ಬಿದ್ದಿರುವುದನ್ನು ಖಂಡಿಸಿ 10 ದಿನಗಳ ಜನಜಾಗೃತಿ, ಸಹಿ ಸಂಗ್ರಹ
ಡಿಸೆಂಬರ್ 4ರಿಂದ ಹತ್ತು ದಿನಗಳ ಕಾಲ ಬೃಹತ್ ಜನಜಾಗೃತಿ ಅಭಿಯಾನ
ಬೆಂಗಳೂರು: ರಸ್ತೆ ಗುಂಡಿಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಡಿಸೆಂಬರ್ 4ರಿಂದ ಹತ್ತು ದಿನಗಳ ಕಾಲ ಬೆಂಗಳೂರಿನಾದ್ಯಂತ ಬೃಹತ್ ಜನಜಾಗೃತಿ ಅಭಿಯಾನ ಹಾಗೂ ಸಹಿ ಸಂಗ್ರಹಣಾ ಚಳವಳಿ ಹಮ್ಮಿಕೊಂಡಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರ ಎಎಪಿ ಉಪಾಧ್ಯಕ್ಷ ಬಿ.ಟಿ.ನಾಗಣ್ಣ, “ರಸ್ತೆಗುಂಡಿ ಮುಕ್ತ ಬೆಂಗಳೂರು ನಿರ್ಮಾಣವು ಆಮ್ ಆದ್ಮಿ ಪಾರ್ಟಿಯ ಗುರಿ. ಇದಕ್ಕಾಗಿ ಡಿ. 4ರ ಶನಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರವಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನವನ್ನು ಆರಂಭಿಸುತ್ತೇವೆ ಎಂದರು.
ತೆರೆದ ವಾಹನದ ಮೂಲಕ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರವನ್ನು ಬೆಂಗಳೂರಿನ ಮೂಲೆಮೂಲೆಗೆ ತಲುಪಿಸುತ್ತೇವೆ. ಹತ್ತು ದಿನಗಳಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜನಜಾಗೃತಿ ಮಾಡಿ, ಲಕ್ಷಾಂತರ ಬೆಂಗಳೂರಿಗರ ಸಹಿ ಸಂಗ್ರಹ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ ಎಂದು ತಿಳಿಸಿದರು.
ವಾಹನಗಳ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು ರಸ್ತೆಯ ಗುಣಮಟ್ಟವನ್ನು ನಿರ್ಧರಿಸಬೇಕು. ಆದರೆ ಇಲಾಖೆಗಳು ಈ ನಿಯಮವನ್ನು ಅನುಸರಿಸುತ್ತಿಲ್ಲ. ರಸ್ತೆಯ ಎಲ್ಲ ಪದರಗಳನ್ನು ಗುಣಮಟ್ಟದ ಸಾಮಗ್ರಿ ಬಳಸಿ ನಿರ್ಮಿಸಬೇಕು. ಆದರೆ ಗುಣಮಟ್ಟದ ಸಾಮಗ್ರಿಗೆ ಖರ್ಚಾಗಬೇಕಾದ ಹಣವನ್ನು ಗುತ್ತಿಗೆದಾರರು ಲಪಟಾಯಿಸುತ್ತಿದ್ದಾರೆ. ಅದರಲ್ಲಿ ಇಂಜಿನಿಯರ್‌ಗಳು, ಕಾರ್ಪೊರೇಟರ್ ಹಾಗೂ ಶಾಸಕರಿಗೆ ಪಾಲು ಸಿಗುತ್ತಿದೆ ಎಂದರು.
ತಮಿಳುನಾಡು ಹಾಗೂ ಆಂಧ್ರದ ರಸ್ತೆಗಳು ಕರ್ನಾಟಕದ ರಸ್ತೆಗಳಿಗಿಂತಲೂ ಚೆನ್ನಾಗಿರಲು ಕಾರಣವೇನೆಂದು ನಾವು ಯೋಚಿಸಬೇಕು. ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಎಂದೂ ಅಲ್ಲಿ ಆಡಳಿತ ಮಾಡಿಲ್ಲದಿರುವುದೇ ಇದಕ್ಕೆ ಕಾರಣ ಎಂದು ಬಿ.ಟಿ.ನಾಗಣ್ಣ ಹೇಳಿದರು.
ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಉಪಾಧ್ಯಕ್ಷರಾದ ಸುರೇಶ್ ರಾಥೋಡ್ ಮಾತನಾಡಿ, ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ 20,000 ಕೋಟಿ ರೂಪಾಯಿ ಎಲ್ಲಿ ಮತ್ತು ಹೇಗೆ ಖರ್ಚಾಗಿದೆ ಎಂಬ ವಿವರವನ್ನು ಸರ್ಕಾರ ಬಹಿರಂಗಪಡಿಸಬೇಕು. ಆ ಹಣವನ್ನು ನುಂಗಿದವರಿಗೆ ಜೈಲು ಶಿಕ್ಷೆ ಆಗಬೇಕು. ರಸ್ತೆಯನ್ನು ಸರಿಪಡಿಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಮೂರು ಬೇಡಿಕೆಗಳಾಗಿವೆ ಎಂದರು.
ರಸ್ತೆ ಗುಂಡಿಗಳಿಗೆ ಸಂಬಂಧಿಸಿ ನಾವು ಈ ಹಿಂದೆ ಮಾಡಿದ್ದ ಪ್ರತಿಭಟನೆಗಳು, ರಸ್ತೆಗುಂಡಿ ಹಬ್ಬ ಎಂಬ ವಿನೂತನ ಅಭಿಯಾನ, ಸೋಶಿಯಲ್ ಮೀಡಿಯಾ ಚಳವಳಿಗೆ ಉತ್ತಮ ಜನಬೆಂಬಲ ವ್ಯಕ್ತವಾಗಿದೆ. ಗುಂಡಿಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ 70ಕ್ಕೂ ಹೆಚ್ಚು ದೂರುಗಳನ್ನು ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದೇವೆ, ಈ ಚಳವಳಿಗೆ ಕೂಡ ಹೆಚ್ಚಿನ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
Related
You Might Also Like
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...