NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಸರ್ವ ಸಂಘಟನೆಗಳ ಸಭೆ ಯಶಸ್ವಿ: ಸಂಘಟನೆಗಳ ಜಂಟಿ ಸಮಿತಿ ಅಸ್ತಿತ್ವಕ್ಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ಸರ್ವ ಸಂಘಟನೆಗಳ ಮುಖಂಡರನ್ನು ಒಗ್ಗೂಡಿಸಲು ಕೂಟದ ಪದಾಧಿಕಾರಿಗಳು ಇಂದು ನಡೆಸಿದ ಸರ್ವ ಸಂಗಟನೆಗಳ ಸಭೆಯಲ್ಲಿ “ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಗಳ ಜಂಟಿ ಸಮಿತಿ” ರಚಿಸಿ ಎಲ್ಲರೂ ಒಗ್ಗಟ್ಟಾಗಿರಲು ಎಲ್ಲ ಸಂಘಟನೆಗಳ ಮುಖಂಡರು ಒಕ್ಕೂರಲಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ನಡೆದಂತಹ ಸಾರಿಗೆ ಮುಷ್ಕರದ ಅವಧಿಯಲ್ಲಿ ಬಹಳಷ್ಟು ಸಾರಿಗೆ ನೌಕರರ ವಿರುದ್ಧ ವಜಾ, ವರ್ಗಾವಣೆ, ಅಮಾನತು ಹಾಗೂ ಪೊಲೀಸ್ ಪ್ರಕರಣಗಳು ದಾಖಲಿಸಲಾಗಿದ್ದು ಈವರೆಗೂ ಅವುಗಳನ್ನು ವಾಪಸ್‌ ಪಡೆಯದೆ ಇರುವುದರಿಂದ ನೌಕರರು ಸಮಸ್ಯೆಗೆ ಸಿಲುಕಿದ್ದಾರೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಪೂರ್ಣಿಮಾ ಟಾಕೀಸ್ ಮುಂಭಾಗದ ಜೈ ಬೀಮ್‌ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸರ್ವ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸುವ ಮೂಲಕ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಅದರಲ್ಲಿ ಎಐಟಿಯುಸಿ ಸಂಘಟನೆ ಬಿಟ್ಟು ಸಿಐಟಿಯು, ಕೆಬಿಎನ್‌, ಯುನಿಟೆಡ್ ಎಂಪ್ಲಾಯ್‌ಯೂನಿಯನ್, ಕೆಎಸ್‌ಆರ್‌ಟಿಸಿ ಯುನಿಟೆಡ್ ಎಂಪ್ಲಾಯ್‌ಯೂನಿಯನ್, ಮಹಾಮಂಡಲ, ಬಿಎಂಎಸ್, ಮುಸ್ಲಿಂ ಸಂಘಟನೆ, ಕನ್ನಡ ಸಮನ್ವಯ ಸಂಘ, ಬಿಎಂಟಿಸಿ ಒಕ್ಕಲಿಗ ಸಂಘ ಸೇರಿದಂತೆ ಸಾರಿಗೆಯ ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಈ ಸಭೆಯಲ್ಲಿ ಪ್ರಮುಖವಾಗಿ ಮುಷ್ಕರದ ವೇಳೆ ಸಮಸ್ಯೆಗಳಿಗೆ ಒಳಗಾಗಿರುವ ನೌಕರರ ಬದುಕನ್ನು ಸರಿಪಡಿಸುವ ಕುರಿತ ಸುಮಾರು ನಾಲ್ಕು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಯಿತು.

ವಜಾ, ವರ್ಗಾವಣೆ, ಅಮಾನತು ಆದ ನೌಕರರ ಬಗ್ಗೆ ಹಾಗೂ ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವೇತನ ನೀಡದಿರುವುದು, ಘಟಕಗಳಲ್ಲಿ ಕಿರುಕುಳ ಕೊಡುತ್ತಿರುವುದನ್ನು ಸರಿಪಡಿಸಬೇಕಾದರೆ ಎಲ್ಲ ಸಂಘಟನೆಗಳು ಒಟ್ಟಾಗಿ ಮುಂದಿನ ಹೋರಾಟಕ್ಕೆ ಕೈ ಜೋಡಿಸಬೇಕು ಎಂಬ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಹೀಗಾಗಿ ಈ ಎಲ್ಲ ಸಾರಿಗೆ ನೌಕರರ ಪರವಾದ ಸಂಘಟನೆಗಳು ಇಂದು ಕೈ ಜೋಡಿಸಿದ್ದು, ನೌಕರರು ಅನುಭವಿಸುತ್ತಿರುವ ಸಮಸ್ಯೆಗಳು ಅತೀ ಶೀಘ್ರದಲ್ಲೇ ದೂರವಾಗುವ ಎಲ್ಲ ಬೆಳವಣಿಗಳು ಗೋಚರಿಸುತ್ತಿವೆ. ಈ ಬೆಳವಣಿಗೆಯನ್ನು ನೌಕರರು ಸ್ವಾಗತಿಸುವ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಮುಂದೆ “ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಗಳ ಜಂಟಿ ಸಮಿತಿ” ಯಲ್ಲಿ ಏನು ನಿರ್ಧಾರ ತೆಗೆದುಕೊಳ್ಳಲಾಗುತ್ತದೆಯೋ ಆ ನಿಟ್ಟಿನಲ್ಲಿ ಪ್ರತಿಯೊಂದು ಸಂಘಟನೆಯ ಪದಾಧಿಕಾರಿಗಳು ನಡೆದುಕೊಳ್ಳಬೇಕು. ಜತೆಗೆ ನೌಕರರ ದಿಕ್ಕು ತಪ್ಪಿಸುವಂತ ಮಾಹಿತಿಗಳನ್ನು ನೀಡಬಾರದು ಎಂಬ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ಸಾರಿಗೆ ಸಂಸ್ಥೆಯಲ್ಲಿರುವ ಬಹುತೇಕ ಎಲ್ಲ ಸಂಘಟನೆಗಳು ಒಗ್ಗೂಡಿದ್ದು, ಮುಂದಿನ ದಿನಗಳಲ್ಲಿ ನೌಕರರರಿಗೆ ಆಗಿರುವ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವತ್ತ ಯಾವ ರೀತಿ ಹೋರಾಟದ ರೂಪುರೇಷೆ ರಚಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ಮಾಡಲಾಗಿದೆ.

ಇನ್ನು ಪ್ರಮುಖವಾಗಿ ಡಿ.13ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನ ಎಲ್ಲಿ ನಡೆಯುತ್ತದೆಯೋ (ಬೆಳಗಾವಿ ಅಥವಾ ಬೆಂಗಳೂರು) ಅಲ್ಲಿ ಅರ್ನಿದಿಷ್ಟಾವಧಿ ಮುಷ್ಕರ ಕೂರುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ ಸರ್ವ ಸಂಘಟನೆಗಳ ಮುಖಂಡರೂ ಸದ್ಯಕ್ಕೆ ಈಗ ಬಳ್ಳಾರಿಯಿಂದ – ಬೆಂಗಳೂರಿಗೆ ನೌಕರರು ಏನು ನ.29ರಿಂದ ಪಾದಯಾತ್ರೆ ನಡೆಸುತ್ತಿದ್ದಾರೋ ಆ ಪಾದಯಾತ್ರೆಗೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಸಾಥ್‌ ನೀಡುವ ಮೂಲಕ ತುಮಕೂರಿನಿಂದ ಬೆಂಗಳೂರಿನವರೆಗೂ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಬೇಕು. ಜತೆಗೆ ಹಲವಾರು ಕನ್ನಡ ಪರ ಸಂಘಟನೆಗಳ ಪ್ರಮುಖರು ಭಾಗಿಯಾಗುವಂತೆ ಆಹ್ವಾನಿಸುವ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಇನ್ನು ಪಾದಯಾತ್ರೆ ಮಾದವರಕ್ಕೆ ಬರುತ್ತಿದ್ದಂತೆ ಎಐಟಿಯುಸಿಯ ಪದಾಧಿಕಾರಿಗಳು ಸೇರಿಕೊಳ್ಳುವ ಮೂಲಕ ಅವರೂ ನೌಕರರಿಗೆ ಬೆಂಬಲ ಸೂಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಭೆಯಲ್ಲಿ ಸಿಐಟಿಯು ಉಪಾಧ್ಯಕ್ಷ ಡಾ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್‌, ಕೂಟದ ಅಧ್ಯಕ್ಷ ಚಂದ್ರು, ಉಪಾಧ್ಯಕ್ಷ ಸುಧಾಕರ್‌ ರೆಡ್ಡಿ ಸೇರಿದಂತೆ ವಿವಿಧ ಸಂಘಟನೆಗಳ 150ಕ್ಕೂ ಹೆಚ್ಚು ಪದಾಧಿಕಾರಿಗಳು ಮತ್ತು ನೌಕರರು ಭಾಗವಹಿಸಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC