Please assign a menu to the primary menu location under menu

NEWSದೇಶ-ವಿದೇಶ

ಕರ್ನಾಟಕದ ಮಾಜಿ ರಾಜ್ಯಪಾಲ ಕೆ. ರೋಸಯ್ಯ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಗುಂಟೂರು: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ತಮಿಳುನಾಡು ಮತ್ತು ಕರ್ನಾಟಕದ ರಾಜ್ಯಪಾಲರಾಗಿದ್ದ ಕೋನಿಜೇಟಿ ರೋಸಯ್ಯ ಇಂದು (ಡಿ.4) ಮುಂಜಾನೆ ನಿಧನರಾದರು.

89 ವರ್ಷದ ರೋಸಯ್ಯ ಅವರು ಬಹುದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಳಗ್ಗೆ ಕಡಿಮೆ ರಕ್ತದೊತ್ತಡಕ್ಕೆ ಒಳಗಾಗಿದ್ದ ಅವರನ್ನು ಬಂಜಾರಾ ಹಿಲ್ಸ್​ ಸ್ಟಾರ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಕೆ. ರೋಸಯ್ಯ ಕಾಂಗ್ರೆಸ್​​ನ ಪ್ರಮುಖ ನಾಯಕರು. ಅವರು ಶಾಸಕರು, ಎಂಎಲ್​ಸಿ, ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ (ತೆಲಂಗಾಣ ಬೇರೆ ರಾಜ್ಯವಾಗಿ ವಿಭಜನೆ ಆಗುವುದಕ್ಕೂ ಪೂರ್ವ) ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.

ಸುಮಾರು ಏಳು ಬಾರಿ ಬಜೆಟ್​ ಮಂಡನೆ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದರು. ವೈ.ಎಸ್​. ರಾಜಶೇಖರ್​ ರೆಡ್ಡಿ ನಿಧನದ ನಂತರ ಅವಿಭಜಿತ ಆಂಧ್ರಪ್ರದೇಶದ ಸಿಇಒ ಆಗಿದ್ದರು. ಅಷ್ಟೇ ಅಲ್ಲ, ತಮಿಳುನಾಡು ಮತ್ತು ಕರ್ನಾಟಕದ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ರೋಸಯ್ಯ 1933ರ ಜುಲೈ 4ರಂದು, ಆಂಧ್ರದ ಗುಂಟೂರು ಜಿಲ್ಲೆಯ ವೆಮೂರಿನಲ್ಲಿ ಜನಿಸಿದ್ದರು. ಗುಂಟೂರಿನ ಹಿಂದು ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದಿದ್ದಾರೆ. ಅವರು 1968, 1974 ಮತ್ತು 1980 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್