NEWSದೇಶ-ವಿದೇಶರಾಜಕೀಯ

ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ ಭಾರತಕ್ಕೆ ಆಗಮಿಸಲಿದ್ದು 21ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರನ್ನು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಲಿದ್ದಾರೆ.

ಉಭಯ ನಾಯಕರ ಭೇಟಿ, ಮಾತುಕತೆ ಸಂದರ್ಭದಲ್ಲಿ ಎರಡೂ ದೇಶಗಳು 10ಕ್ಕೂ ಹೆಚ್ಚು ಒಪ್ಪಂದಗಳಿಗೆ ಶೃಂಗಸಭೆಯ ನಂತರ ಸಹಿ ಹಾಕುವ ನಿರೀಕ್ಷೆಯಿದೆ. ಅಂತರಿಕ್ಷ, ಸಂಸ್ಕೃತಿ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣಾ ಕ್ಷೇತ್ರಗಳಿಗೆ ಸಂಬಂಧಿಸಿದ ಮಹತ್ವದ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

2+2 ಮಾತುಕತೆ: ರಷ್ಯಾ ಅಧ್ಯಕ್ಷರ ಜೊತೆ ಅಲ್ಲಿನ ವಿದೇಶಾಂಗ ಮತ್ತು ರಕ್ಷಣಾ ಸಚಿವರು ಕೂಡ ಇಂದು ಭಾರತಕ್ಕೆ ಬರುತ್ತಿದ್ದು ಇಲ್ಲಿನ ವಿದೇಶಾಂಗ ಮಂತ್ರಿ ಎಸ್ ಜೈಶಂಕರ್ ಹಾಗೂ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರ ಜೊತೆ 2+2 ಮಾತುಕತೆ ಏರ್ಪಡಲಿದೆ.

ಉಗ್ರ ಸಂಘಟನೆಗಳಿಂದ ದೇಶದ ನಾಗರಿಕರಿಕರಿಗೆ ಬೆದರಿಕೆಗಳಿವೆಯೇ ಎಂಬುದನ್ನು ನಾಯಕರು ಚರ್ಚಿಸಲಿದ್ದಾರೆ. ಆಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳ ಮಾನವ ಹಕ್ಕು ರಕ್ಷಣೆಗಳ ಬಗ್ಗೆ ಕೂಡ ಚರ್ಚೆ ನಡೆಯಲಿವೆ ಎಂದು ಹೇಳಲಾಗುತ್ತಿದೆ.

ಇನ್ನು ಇಂದು ನಡೆಯಲಿರುವ 2+2 ಮಾತುಕತೆಯಲ್ಲಿ ಭಾರತ ಮತ್ತು ರಷ್ಯಾ ದೇಶಗಳ ಸಚಿವರು ದ್ವಿಪಕ್ಷೀಯ, ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ವಿಷಯಗಳಿಗೆ ಒತ್ತು ನೀಡಲಿದ್ದಾರೆ. ಆಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ನಂತರ ಅಲ್ಲಿನ ಪರಿಸ್ಥಿತಿ, ಬೆಳವಣಿಗೆಗಳ ಬಗ್ಗೆ ಕೂಡ ಚರ್ಚೆ ನಡೆಯಲಿದೆ ಎನ್ನಲಾಗಿದೆ.

Leave a Reply

error: Content is protected !!
LATEST
BMTC ದಕ್ಷಿಣ ವಿಭಾಗದ 7 ಘಟಕಗಳಲ್ಲೂ ಚಾಲನಾ ಸಿಬ್ಬಂದಿಯೇ ಕಸಗುಡಿಸಬೇಕು- ಕಂಡು ಕಾಣದಂತೆ ವರ್ತಿಸುವ ಡಿಸಿ ಆಶಾಲತಾ ಮೇಡಂ! KKRTC: ಬಾಲ ಬಿಚ್ಚಿದರೇ ನಿಮ್ಮ ತಲೆಗಳನ್ನು ಉರುಳಿಸಬೇಕಾಗುತ್ತದೆ ಎಂದು ನೌಕರರಿಗೆ ಜೀವ ಬೇದರಿಕೆ ಹಾಕಿದ ಡಿಎಂ ಎತ್ತಂಗಡಿ ಸಿಎಂ ಸ್ವಕ್ಷೇತ್ರ ರಂಗಸಮುದ್ರ ಸ್ಮಶಾನ ಭೂಮಿ ಮೇಲು ಬಿದ್ದ ವಕ್ಫ್‌ ಕಣ್ಣು- ಪಹಣಿಯಲ್ಲಿ 2021-22ರಿಂದ ವಕ್ಫ್‌ ಬೋರ್ಡ್ ಹ... BMTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ-ಎಲ್ಲರನ್ನೂ ಅಭಿನಂದಿಸಿದ ಸಾರಿಗೆ ಸಚಿವರು, ಅಧಿಕಾರಿಗಳು KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ