NEWSನಮ್ಮಜಿಲ್ಲೆರಾಜಕೀಯ

ಆಮ್ ಆದ್ಮಿ ಪಕ್ಷದ ಬೃಹತ್ ಮಹಿಳಾ ಸಮಾವೇಶ ಯಶಸ್ವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಿಳೆಯರ ಪಾತ್ರ, ಮಹಿಳೆಯರ ಹಕ್ಕು, ಮಹಿಳೆಯರ ಸುರಕ್ಷೆಯ ಬಗ್ಗೆ ಅರಿವು ಮೂಡಿಸುವುದರಲ್ಲಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ನಿರಂತರವಾಗಿ ಶ್ರಮಿಸುತ್ತಿದೆ ಎಂದು ರಾಜ್ಯ ಸಂಚಾಲಕ ಪೃಥ್ವಿರೆಡ್ಡಿ ತಿಳಿಸಿದರು.

ಆಮ್ ಆದ್ಮಿ ಪಕ್ಷ ಮಹಿಳಾ ಘಟಕದಿಂದ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬೃಹತ್ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ತುಳಿತಕ್ಕೊಳಗಾದ ಮಹಿಳೆಯರು ಸೇರಿದಂತೆ ಇತರ ಎಲ್ಲ ವರ್ಗದವರ ಏಳಿಗೆಗೆ ನಮ್ಮ ಪಕ್ಷದ ಮಹಿಳಾ ತಂಡ ಸನ್ನದ್ಧ ವಾಗಿದೆ ಎಂದರು.

ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಹೆಚ್ಚಾಗಿ ಮಹಿಳೆಯರ ಅಭಿವೃದ್ಧಿಗೆ ಹೆಚ್ಚು ಒತ್ತುಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆದ ಸಮಾವೇಶದಲ್ಲಿ ಅತೀ ಹೆಚ್ಚು ಮಹಿಳೆಯರು ಪಕ್ಷ ಸೇರ್ಪಡೆಯಾದರು. ಇದು ನಿಜಕ್ಕೂ ಪಕ್ಷಕ್ಕೆ ಆನೆ ಬಲ ತಂದುಕೊಟ್ಟಂತಾಗಿದೆ ಎಂದು ಹೇಳಿದರು.

ಸಮಾವೇಶದಲ್ಲಿ 400ಕ್ಕೂ ಹೆಚ್ಚು ಮಹಿಳೆಯರು ಮತ್ತು ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕುಶಲ ಸ್ವಾಮಿ, ಪ್ರಧಾನ ಕಾರ್ಯದರ್ಶಿಯಾದ ಸುಹಾಸಿನಿ ಫಣಿರಾಜ್, ಬೆಂಗಳೂರು ಜಿಲ್ಲಾಧ್ಯಕ್ಷ ಮೋಹನ್ ದಾಸರಿ, ಉಪಾಧ್ಯಕ್ಷರಾದ ಸುರೇಶ್ ರಾಥೋಡ್ ಮತ್ತು ಬಿ.ಟಿ. ನಾಗಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಚಂದ್ರ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಶರತ್ ಖಾದ್ರಿ , ಬೊಮ್ಮನಹಳ್ಳಿ ಉಸ್ತುವಾರಿ ಸೀತಾರಾಮ್, ಬೇಗುರಿನ ಅಧ್ಯಕ್ಷರಾದ ಪದ್ಮ ಗಿರೀಶ್, ವೀಣಾ ಸೆರೋವ್, ಉಷಾ ಮೋಹನ್, ಪಲ್ಲವಿ ಚಿದಂಬರ, ಯೋಗಿತಾ, ಪಲ್ಲವಿ, ಸಹನಾ, ರಶ್ಮಿ, ಶಿಲ್ಪ ಇನ್ನು ಮುಂತಾದವರು ಭಾಗವಹಿಸಿದ್ದರು.

ಬೆಂಗಳೂರು: ಬೆಂಗಳೂರಿನ ರಸ್ತೆ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಗರದೆಲ್ಲೆಡೆ ಗುಂಡಿಗಳು ಬಿದ್ದಿರುವುದನ್ನು ಖಂಡಿಸಿ ಹತ್ತು ದಿನಗಳ ಬೃಹತ್‌ ಸಹಿ ಸಂಗ್ರಹ ಅಭಿಯಾನ ಇಂದಿಗೆ ಮೂರು ದಿನಗಳನ್ನು ಪೂರ್ಣಗೊಳಿಸುತ್ತಿದೆ.

ತೆರೆದ ವಾಹನ ಬಳಸಿಕೊಂಡು ಬೆಂಗಳೂರಿನಾದ್ಯಂತ ಜನಜಾಗೃತಿಗೆ ಆಮ್‌ ಆದ್ಮಿ ಪಾರ್ಟಿ ಮುಂದಾಗಿದ್ದು, ಮೂರನೇ ದಿನವಾದ ಇಂದು ವಾಹನವು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂಚರಿಸುತ್ತಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...