NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರಿ ನೌಕರರಿಗಿಂತ ಶೆ.5ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಡಿ.14ರಂದು ಎಲ್ಲ ಜಿಲ್ಲೆಗಳ ಡಿಸಿಗಳಿಗೆ ಸಾರಿಗೆ ನೌಕರರಿಂದ ಮನವಿ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರಿಗೆ ಸರ್ಕಾರಿ ನೌಕರರಿಗೆ ಪ್ರಸ್ತುತ ನೀಡುತ್ತಿರುವ ವೇತನಕ್ಕಿಂತ ಶೆ.5ರಷ್ಟು ವೇತನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.14ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವಮ ಮೂಲಕ ಅಭಿಯಾನ ಆರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘದ ಅಧ್ಯಕ್ಷ ಎಂ.ಮಲ್ಲಯ್ಯ ತಿಳಿಸಿದ್ದಾರೆ.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.14ರಂದು ಎಲ್ಲ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದ ಬಳಿಕ ಡಿ.28ರಂದು ನಾಲ್ಕೂ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಇದೇ ಡಿ.14 -28ರ ನಡುವಿನ ದಿನಗಳಲ್ಲಿ ವೇತನ ತಾರತಮ್ಯತೆ ಬಗ್ಗೆ ಅಭಿಯಾನ ನಡೆಸಿ ನಮ್ಮ ಎಲ್ಲ ನೌಕರರಿಗೂ ಮನವರಿಕೆ ಮಾಡಿಕೊಡಲಾಗುವುದು. ಜತೆಗೆ ಸಂಸ್ಥೆಯ ಆಡಳಿತ ಮಂಡಳಿಯ ಗಮನವನ್ನು ಸೆಳೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಿದ್ದೇವೆ ಎಂದು ವಿವರಿಸಿದರು.

ಇನ್ನು ಕಳೆದ 2020 ಜನವರಿ 1ರಂದು ವೇತನ ಪರಿಷ್ಕರಣೆ ಆಗಬೇಕಿತ್ತು. ಆದರೆ ಈವರೆಗೂ ಅದನ್ನು ಮಾಡಿಲ್ಲ. ಜತೆಗೆ 10-12ಗಂಟೆಗಳವರೆಗೆ ದುಡಿಸಿಕೊಳ್ಳುತ್ತಿದ್ದು, ಓಟಿಯನ್ನು ಸಹ ಕೊಡುತ್ತಿಲ್ಲ, ನೌಕರರ ಸೇವೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ ಹೀಗಾಗಿ ವೇತನ ಪರಿಷ್ಕರಣೆ ಮಾಡಬೇಕು ಎಂದು ಆಗ್ರಹಿಸಿದರು.

ಸಮಯಕ್ಕೆ ಸರಿಯಾಗಿ ವೇತನ  ಕೊಡುತ್ತಿ. ಕಳೆದ ಸೆಪ್ಟೆಂಬರ್‌ನಿಂದ ನವೆಂಬರ್‌ ತಿಂಗಳ ಅಂದರೆ ಮೂರು ತಿಂಗಳೂ ಅರ್ಧ ವೇತನ ಮಾತ್ರ ಕೊಟ್ಟಿದ್ದಾರೆ. ಇದರಿಂದ ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ ಮತ್ತು ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ದುಡಿಮೆಗೆ ತಕ್ಕ ವೇತನವನ್ನು ಕೊಡುತ್ತಿಲ್ಲ. ಇನ್ನು ಕೊಡುತ್ತಿರುವ ವೇತನದಲ್ಲೂ ಅರ್ಧಮಾತ್ರ ಕೊಟ್ಟು ಸುಮ್ಮಾನಾಗುತ್ತಿದೆ ಆಡಳಿತ ವರ್ಗ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಸ್ಥೆಯ ನಿವೃತ್ತ ನೌಕರರಿಗೂ ಕಳೆದ ಒಂದು ವರ್ಷದಿಂದ ನಿವೃತ್ತಿ ವೇತನವನ್ನು ಬಿಡುಗಡೆ ಮಾಡಿಲ್ಲ. ಇದರಿಂದ ಆ ನೌಕರರ ಜೀವನವೂ ಮೂರಾಬಟ್ಟೆಯಾಗುತ್ತಿದೆ. ಹೀಗಾಗಿ ಸಂಸ್ಥೆಯ ಆಡಳಿತವರ್ಗವನ್ನು ಸರ್ಕಾರ ಚಾಟಿ ಬೀಸುವ ಮೂಲಕ ಬಡಿದೆಬ್ಬಿಸಿ ನೌಕರರಿಗೆ ಬರಬೇಕಿರುವ ಸೌಲಭ್ಯಗಳನ್ನು ಕೊಡಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಗ್ರಾಮಾಂತರ ವಿಭಾಗದ ಅಧ್ಯಕ್ಷ ಶಿವರಾಜು, ಪ್ರಧಾನ ಕಾರ್ಯದರ್ಶಿ ನಾಗಪ್ರಸಾದ್‌ ಮತ್ತು ಪದಾಧಿಕಾರಿಗಳು ಇದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ