Vijayapatha – ವಿಜಯಪಥ
Friday, November 1, 2024
NEWSನಮ್ಮರಾಜ್ಯರಾಜಕೀಯ

ʼಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆ ನಿಪುಣಾಗ್ರೇಸರಿಂದ ಈಗ ʼJDFʼ ಎಂಬ ಹೊಸ ಜಪ : ಅಯ್ಯೋ, ಎಂಥಾ ದುರ್ವಿಧಿ ಎಂದ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ʼಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ!! ಅಯ್ಯೋ, ಎಂಥಾ ದುರ್ವಿಧಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸಿದ್ದರಾಮಯ್ಯ ಅವರ ಹೆಸರೇಳದೆ ಕೆಣಕಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮತಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್‌ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ದಕಲಾಕೋವಿದನಿಗೆ ಎಂದು ಮನೆಮನೆಗೂ ಹೋಗಿ ಪ್ರಚಾರ ಮಾಡುತ್ತಿರುವುದು ಮಂಡ್ಯದಲ್ಲಿ ಮಜಭೂತಾಗಿ ನಡೆಯುತ್ತಿದೆ. ಹೇಳುವುದು ಒಂದು, ಮಾಡುವುದು ಇನ್ನೊಂದು ಎಂದು ಸರಣಿ ಟ್ವೀಟ್‌ ಮೂಲಕ ಕಿಡಿಕಾರಿದ್ದಾರೆ.

ಅವರಿಗೆ ಜೆಡಿಎಸ್‌ ಫೋಬಿಯಾ ಕಾಡುತ್ತಿದೆ. ಚುನಾವಣೆ ಬಂದರೆ ಜೆಡಿಎಸ್‌ ಚಳಿ-ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಸಿದ್ದಸೂತ್ರದಾರ ಬಳಸುವ ಹೊಸ ಔಷಧವೇ ʼJDFʼ. ಅವರನ್ನು ಉಳಿಸುವ ಟಾನಿಕ್‌ʼನ ಹೆಸರೇ ಜೆಡಿಎಸ್‌ ಕುಟುಂಬ ರಾಜಕಾರಣ. ಹಾಗಾದರೆ, ಅವರದ್ದು #SCF ( #ಸಿದ್ದಸೂತ್ರದಾರ_ಕಾಂಗ್ರೆಸ್‌_ಫ್ಯಾಮಿಲಿ ) ಅಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌, ಬಿಜೆಪಿ ಬಿ ಟೀಂ ಎಂದು ಭಜನೆ ಮಾಡುವವರು, ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲಿಕ್ಕೆ? ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ಟಿಕೆಟ್‌ ಕೊಟ್ಟಿದ್ದರ ಒಳಲೆಕ್ಕ ಏನು? ಇದು ಯಾರ ಲೆಕ್ಕ ಚುಕ್ತಾ ಮಾಡಲಿಕ್ಕೆ? ಇದೆಂಥಾ ಒಳ ಒಪ್ಪಂದ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್‌ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‌ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ ಎಂದು ಹೇಳಿದ್ದಾರೆ.

ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ