CrimeNEWSದೇಶ-ವಿದೇಶ

ಸೇನಾ ಹೆಲಿಕಾಪ್ಟರ್ ಪತನ: ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಪತ್ನಿ ಸೇರಿ 13ಮಂದಿ ಸಾವು

ವಿಜಯಪಥ ಸಮಗ್ರ ಸುದ್ದಿ

ನೀಲಗಿರಿ: ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ಮಧ್ಯಾಹ್ನ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ 13 ಮಂದಿ ದುರ್ಮರಣಕ್ಕೀಡಿಗಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡುವ ಮೂಕ ಖಚಿತ ಪಡಿಸಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶೇ.80ರಷ್ಟು ಸುಟ್ಟಗಾಯಗಳಿಂದ ತೀವ್ರವಾಗಿ ನೋವು ಅನುಭವಿಸಿದ ಅವರಿಗೆ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮತ್ತು ಇತರ 12 ಜನರನ್ನು(ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.

ತನಿಖೆಗೆ ಆದೇಶ: ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ