ಒಬ್ಬ ಶಾಸಕ ಒಂದು ಪಿಂಚಣಿ ಯೋಜನೆ ಜಾರಿಗೆತಂದ ಭಗವಂತ ಮಾನ್ ಸರ್ಕಾರ – ವಾರ್ಷಿಕ 100 ಕೋಟಿ ಉಳಿತಾಯ
ಚಂಡೀಗಢ: ಪಂಜಾಬ್ ಸರ್ಕಾರ ಜನಪ್ರತಿನಿಧಿಗಳು ಜನ ಸೇವಕರು ಅವರಿಗೆ ಸಂಭಾವನೆ ಕೊಡುವುದು ಸರಿಯಿದೆ ಆದರೆ ಅದನ್ನು ಹೇಗೆ ಕೊಡಬೇಕು ಎಂಬುದರ ಬಗ್ಗೆ ಆದೇಶವೊಂದನ್ನು ಹೊರಡಿಸಿದೆ.
ಹೌದು ಪಂಜಾಬ್ ಮುಖ್ಯಮಂತ್ರಿ ಭವವಂತ ಮಾನ್ ನೇತೃತ್ವದ ಸರ್ಕಾರ ಒಬ್ಬ ಶಾಸಕ ಒಂದುಪಿಂಚಣಿ ಯೋನೆ ಜಾಋಿಗೆ ತಂದಿದೆ. ಈ ಪಿಂಚಣಿ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದು, 5 ವರ್ಷಗಳಲ್ಲಿ 100 ಕೋಟಿ ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್ ಮಾಡಿದೆ.
ಮಾಜಿ ಶಾಸಕರಿಗೆ ಬಹು ಪಿಂಚಣಿಗಳನ್ನು ಸೀಮಿತಗೊಳಿಸುವ ಮಸೂದೆಗೆ ಪಂಜಾಬ್ ರಾಜ್ಯಪಾಲರು ತಮ್ಮ ಒಪ್ಪಿಗೆ ನೀಡಿದ ನಂತರ ಎಎಪಿ ಸರ್ಕಾರ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, 5 ವರ್ಷಗಳಲ್ಲಿ 100 ಕೋಟಿ ಉಳಿತಾಯವಾಗಲಿದೆ. ಜೊತೆಗೆ `ಒಂದು ಶಾಸಕ-ಒಂದು ಪಿಂಚಣಿ’ ಯೋಜನೆಯು ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ ಎಂದು ಭಗವಂತ್ ಮಾನ್ ಹೇಳಿದರು.
ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಅಭಿನಂದನೆ ಸಲ್ಲಿಸಲು ಹಾಗೂ ಅವರ ಕನಸುಗಳನ್ನು ನನಸಾಗಿಲು ಎಎಪಿ ಸರ್ಕಾರವು ಕೈಗೊಂಡ ಉಪಕ್ರಮವಾಗಿದೆ. ಪಂಜಾಬ್ ವಿಧಾನಸಭೆಯ ಸದಸ್ಯರ `ಪಿಂಚಣಿ ಮತ್ತು ವೈದ್ಯಕೀಯ ಸೌಲಭ್ಯಗಳ ನಿಯಂತ್ರಣ ಮಸೂದೆ (ತಿದ್ದುಪಡಿ)-2022 ಅನ್ನು ಅಂಗೀಕರಿಸಿದೆ. ಇದು ರಾಜ್ಯ ವಿಧಾನಸಭೆಯ ಸದಸ್ಯರಿಗೆ ಒಂದೇ ಅವಧಿಗೆ ಪ್ರತಿ 60,000 ರೂಪಾಯಿಗಳ ಹೊಸ ದರದಲ್ಲಿ ಮಾತ್ರ ಪಿಂಚಣಿ ನೀಡುವ ಗುರಿಯನ್ನು ಹೊಂದಿದೆ. ಇದಕ್ಕೆ ಪಂಜಾಬ್ ರಾಜ್ಯಪಾಲರೂ ಒಪ್ಪಿಗೆ ಸೂಚಿಸಿದ್ದಾರೆ.
ಈ ಮೂಲಕ ರಾಜ್ಯ ಸರ್ಕಾರಕ್ಕೆ ವಾರ್ಷಿಕ 19.53 ಕೋಟಿ ರೂ. ಉಳಿತಾಯವಾಗಲಿದೆ. ಒಟ್ಟಾರೆ 5 ವರ್ಷಗಳಲ್ಲಿ ಸುಮಾರು 100 ಕೋಟಿ ರೂ. ಉಳಿತಾಯವಾಗಲಿದೆ ಎಂದು ಹೇಳಿದ್ದಾರೆ.
ಪಂಜಾಬ್ ಮಾಜಿ ಶಾಸಕರು 2 ಬಾರಿ, 5 ಬಾರಿ ಅಥವಾ ಹತ್ತು ಬಾರಿ ಗೆದ್ದಿದ್ದರೂ ಅವರು ಇನ್ನು ಮುಂದೆ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ. ಅವರು ಸಲ್ಲಿಸಿದ್ದ ಸೇವೆಗೆ ಪ್ರತಿ ಅವಧಿಗೂ ಪಿಂಚಣಿ ಪಡೆಯುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುವುದು. ಅವರ ಪಿಂಚಣಿಯನ್ನು ಒಂದು ಅವಧಿಗೆ ಮಾತ್ರ ಸೀಮಿತಗೊಳಿಸಲಾಗುತ್ತದೆ ಎಂದು ಭಗವಂತ್ ಮಾನ್ ಸಿಎಂ ಆದ ಕೆಲ ದಿನಗಳಲ್ಲೇ ಹೇಳಿದ್ದರು.
ನಮ್ಮ ರಾಜಕೀಯ ನಾಯಕ ಸಾರ್ವಜನಿಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕೈಮುಗಿದು ಮತ ಪಡೆದು ಗೆಲ್ಲುತ್ತಾರೆ. ಆದರೆ 3-4 ಬಾರಿ ಗೆದ್ದ ನಂತರವೂ ಹಲವು ಹಲವು ಶಾಸಕರು ಮುಂದಿನ ಚುನಾವಣೆಯಲ್ಲಿ ಸೋತರು ಅಥವಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದಿದ್ದರೂ ತಿಂಗಳಿಗೆ ಲಕ್ಷಾಂತರ ರೂಪಾಯಿ ಪಿಂಚಣಿ ಪಡೆಯುತ್ತಾರೆ. ಇದು ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಮಾನ್ ತಿಳಿಸಿದ್ದರು.
ಚುನಾವಣೆಯಲ್ಲಿ ಸೋತರೂ ಕೆಲವರು 3.50 ರಿಂದ 5 ಲಕ್ಷ ರೂ. ವರೆಗೂ ಪಿಂಚಣಿ ಪಡೆಯುತ್ತಿದ್ದಾರೆ. ಲಾಲ್‌ಸಿಂಗ್, ಸರ್ವಾನ್‌ಸಿಂಗ್ ಫಿಲೌ ಹಾಗೂ ರಾಜಿಂದರ್ ಕೌರ್ ಭಟ್ಟಾಲ್ ತಿಂಗಳಿಗೆ 3.55 ಲಕ್ಷ ರೂ.ಪಿಂಚಣಿ ಪಡೆಯುತ್ತಿದ್ದಾರೆ. ರವಿಂದರ್ ಸಿಂಗ್, ಬೈಲ್ವಿಂದರ್ ಸಿಂಗ್ 2.75 ಲಕ್ಷ ಹಾಗೂ ಅಕಾಲಿ ದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ 5 ಲಕ್ಷ ರೂ. ಪಿಂಚಣಿ ಪಡೆಯುತ್ತಿದ್ದಾರೆ. ಇದರಿಂದ ಬೊಕ್ಕಸಕ್ಕೆ ಕೋಟ್ಯಂತರ ರೂ. ಆರ್ಥಿಕ ಹೊರೆಯಾಗುತ್ತಿದೆ ಎಂದು ಆತಂಕಪಟ್ಟಿದ್ದರು.
Related
You Might Also Like
ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ 2025ರ ಜನವರಿ 6ರಿಂದ ಜಾರಿಗೆ ಬರಲಿದೆ ಎಂದು ಸಂಸ್ಥೆಯ ನಿರ್ದೇಶಕರು (ಸಿ&ಜಾ)...
ಸಾರಿಗೆ ಕಾರ್ಮಿಕರ ಬೀದಿಗೆ ತಂದಿದ್ದು ಹೊಸ ಸಂಘಟನೆ ಮುಖಂಡ ನಾವಲ್ಲ: ಜಂಟಿ ಪದಾಧಿಕಾರಿ
ಬೆಂಗಳೂರು: ಕಾರ್ಮಿಕರು ಒಗ್ಗಟ್ಟಿಲ್ಲದೆ ಮುಷ್ಕರ ಆಗೋದಿಲ್ಲ ಎಂಬುದಕ್ಕೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಡಿ.31ರ ಮುಷ್ಕರ ಮುಂದೂಡಿರುವುದೇ ನಿದರ್ಶನವಾಗಿದೆ. ಇನ್ನು ಸಾರಿಗೆ ನೌಕರರ...
KSRTC: ಸಾರಿಗೆ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿದ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಇದೇ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ...
ಇಂದು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ತುರ್ತು ಸಭೆ ಕರೆದ ಸಿಎಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗಾಗಿ ಇದೇ ಡಿ.31ರಿಂದ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಹಿನ್ನೆಲೆಯಲ್ಲಿ...
KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ?
ಬೆಂಗಳೂರು: ಡಿಸೆಂಬರ್ 31ರಿಂದ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಯೋಜಿತ ಅನಿರ್ದಿಷ್ಟಾವಧಿ ಮುಷ್ಕರ ತಡೆಯಲು ಸಾರಿಗೆ ಇಲಾಖೆ ಸಕ್ರಿಯವಾಗಿದೆ. ಈ ನಡುವೆ ವೇತನ ಹೆಚ್ಚಳ ಸೇರಿದಂತೆ...
NWKRTC: ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ- ಹುಬ್ಬಳ್ಳಿ ಸಾರಿಗೆ ನೌಕರರ ಒಕ್ಕೂಟ
ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಒಕ್ಕೂಟದ ಪದಾಧಿಕಾರಿಗಳು ಹುಬ್ಬಳ್ಳಿಯ ನಗರ ಸಾರಿಗೆ ಘಟಕ 1, ಗ್ರಾಮಾಂತರ ಘಟಕ 1, ಗ್ರಾಮಾಂತರ ಘಟಕ...
NWKRTC: ಬಸ್-ಕಾರು ನಡುವೆ ಅಪಘಾತ – ಮಹಿಳೆ ಮೃತ, ಇಂಜಿನಿಯರ್‌ಗೆ ಗಾಯ
ಚಿಕ್ಕೋಡಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತೊಟ್ಟಿದ್ದು, ಕಾರು ಚಾಲನೆ ಮಾಡುತ್ತಿದ್ದ ಇಂಜಿನಿಯರ್ ಪ್ರಾಣಾಪಾಯದಿಂದ...
ದೆಹಲಿ ರೈತರ ಹೋರಾಟ ಬೆಂಬಲಿಸಿ ಬನ್ನೂರಿನಲ್ಲಿ ರೈತರು- ರೈತ ಮುಖಂಡರ ಪ್ರತಿಭಟನೆ
ಬನ್ನೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ...
KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು
ಬೆಂಗಳೂರು: ರಾಜ್ಯ ಸಾರಿಗೆಯ ನಾಲ್ಕೂ ನಿಗಮಗಳ ಎಲ್ಲ ಅಧಿಕಾರಿ ವರ್ಗ, ಆಡಳಿತ ವರ್ಗ, ಭದ್ರತಾ ಸಿಬ್ಬಂದಿಗಳು ಎಲ್ಲರೂ ತಮ್ಮ ತಮ್ಮ ಕರ್ತವ್ಯ ತೊರೆದು ಬಂದು ಎಲ್ಲಿತನಕ ಮುಷ್ಕರಕ್ಕೆ...
KSRTC: ಸಾರಿಗೆ ಕಾರ್ಮಿಕರ ವೇತನ ಹೆಚ್ಚಳ ಸಂಬಂಧ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡೇಮಾಡುತ್ತೇವೆ- ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಡಿಸೆಂಬರ್ 31ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...