Please assign a menu to the primary menu location under menu

NEWSನಮ್ಮಜಿಲ್ಲೆಸಂಸ್ಕೃತಿ

ಶಿಕ್ಷಣದೊಂದಿಗೆ ದೇಶಭಕ್ತಿಯೂ ಮೂಡಲಿ : ಲೆಫ್ಟಿನೆಂಟ್ ಕರ್ನಲ್ ಯಶ್ ಜೋಷಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪಠ್ಯ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯೂ ಮೂಡಲಿ ಎಂದು ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದ ಮುಖ್ಯಸ್ಥ ಲೆಫ್ಟಿನೆಂಟ್ ಕರ್ನಲ್ ಯಶ್ ಜೋಷಿ ಹೇಳಿದ್ದಾರೆ.

ಸಿದ್ಧಾರ್ಥನಗರದ ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶಭಕ್ತಿ ಎಂಬುದು ನೌಕರಿಗೆ ಸೇರುವ ಹಂತದಲ್ಲಿ ಬರುವುದಿಲ್ಲ. ಎಳೆವೆಯಲ್ಲೇ ಮೂಡಿದಾಗ ಮಾತ್ರ ಅದಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹು ದೊಡ್ಡದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಂಸ್ಕೃತಿಕ ಚಟುವಟಿಕೆ, ಸೇವಾ ಮನೋಭಾವ, ಪ್ರಕೃತಿ ಸಂರಕ್ಷಣೆ ಮುಂತಾದವು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತವೆ. ಇದನ್ನು ರೂಢಿಸುತ್ತಿರುವ ಕೇಂದ್ರೀಯ ವಿದ್ಯಾಲಯದ ಕಾರ್ಯ ಶ್ಲಾಘನೀಯ ಎಂದರು.

ಪ್ರಾಚಾರ್ಯ ಬಿ. ಬಿನಾಯ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಚಟುವಟಿಕೆ ವಿಭಾಗ ಮುಖ್ಯಸ್ಥ ವೈ.ಆರ್. ರಘು, ಎನ್‌ಸಿಸಿ ಅಧಿಕಾರಿ ಸುಮಾಲಿನಿ, ಶಿಕ್ಷಕರಾದ ವಿಜಯ ನಾರಸಿಂಹ, ನಚಿಕೇತ ಮತ್ತಿತರರಿದ್ದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಮೂಹ ನೃತ್ಯ, ಗಾಯನ, ದೇಶಭಕ್ತಿ ಬಿಂಬಿಸುವ ನೃತ್ಯ ರೂಪಕಗಳ ಪ್ರದರ್ಶನ ನಡೆಯಿತು.

Leave a Reply

error: Content is protected !!
LATEST
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್