CrimeNEWSದೇಶ-ವಿದೇಶ

ಅಬಕಾರಿ ನೀತಿಯಲ್ಲಿ ಅಕ್ರಮ ಆರೋಪ – ಡಿಸಿಎಂ ಸೇರಿ 15 ಮಂದಿ ವಿರುದ್ಧ FIR ದಾಖಲು, CBI ಶೋಧ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿ ಉಪ ಮುಖ್ಯಮಂತ್ರಿ ಸೇರಿದಂತೆ 15ಜನರ ವಿರುದ್ಧ ಅಬಕಾರಿ ನೀತಿಯಲ್ಲಿ ಅಕ್ರಮ ಎಸಲಾಗಿದೆ ಎಂದು ಆರೋಪಿಸಿ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ರಫ್‌ಐಆರ್‌ ದಾಖಲು ಮಾಡಿದೆ.

2021ರ ನವೆಂಬರ್‌ನಲ್ಲಿ ಹೊರಡಿಸಿದ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇರೆಗೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಕೇಸು ದಾಖಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಸಿಸೋಡಿಯಾ ಅವರ ನಿವಾಸ ಸೇರಿದಂತೆ 21 ಸ್ಥಳಗಳಲ್ಲಿ ಶೋಧ ನಡೆಸಿದೆ.

ಅದರಲ್ಲಿ ಎಎಪಿ ನಾಯಕರ ಮನೆ, ಐಎಎಸ್ ಅಧಿಕಾರಿ ಮತ್ತು ಮಾಜಿ ಅಬಕಾರಿ ಆಯುಕ್ತ ಅರವ್ ಗೋಪಿ ಕೃಷ್ಣ ಅವರ ನಿವಾಸ ಮತ್ತು ಇತರ 19 ಸ್ಥಳಗಳಲ್ಲೂ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಿಬಿಐ ದಾಳಿ ನಡೆಸಿದೆ. ಇನ್ನಿಬ್ಬರು ಅಧಿಕಾರಿಗಳ ಮನೆಗಳನ್ನೂ ಶೋಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರ ನಿವಾಸವನ್ನು ತಲುಪುತ್ತಿದ್ದಂತೆ, ಸಿಬಿಐಗೆ ಸ್ವಾಗತ. ಆದರೆ ಪಿತೂರಿಗಳು ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ ಮತ್ತು ಉತ್ತಮ ಶಿಕ್ಷಣವನ್ನು ನೀಡುವ ಕೆಲಸದಲ್ಲಿ ಮುಂದುವರಿಯುವ ನಮ್ಮ ಸಂಕಲ್ಪವನ್ನು ತಡೆಯುವುದಿಲ್ಲ ಎಂದು ದೆಹಲಿ ಡಿಸಿಎಂ ಟ್ವೀಟ್ ಮಾಡಿ ಹೇಳಿದ್ದಾರೆ.

ಮತ್ತೊಂದೆಡೆ, ಬಿಜೆಪಿ ಸಹ ದೆಹಲಿ ಉಪಮುಖ್ಯಮಂತ್ರಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅಬಕಾರಿ ಖಾತೆಯನ್ನು ಹೊಂದಿರುವ ಸಿಸೋಡಿಯಾ ಅವರು “ಎಕ್ಸ್ಯೂಸ್ ಮಂತ್ರಿ” ಆಗಿದ್ದಾರೆ. “ಮದ್ಯ ಪರವಾನಗಿ ಮತ್ತು ಅದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ಕೇಜ್ರಿವಾಲ್ ಸರ್ಕಾರ ನೂರಾರು ಕೋಟಿ ರೂಪಾಯಿಗಳ ಮದ್ಯದ ಹಗರಣದಲ್ಲಿ ಭಾಗಿಯಾಗಿದೆ ಎಂದು ದೆಹಲಿ ಬಿಜೆಪಿ ಆರೋಪಿಸಿದೆ. ಆದರೆ ಕರ್ನಾಟಕದಲ್ಲಿ ಇದೇ ಬಿಜೆಪಿ 40% ಕಮಿಷನ್‌ ದಂದೆ ನಡೆಸುತ್ತಿದೆ ಎಂಬ ಆರೋಪ ಕೇಳಿ ಬಂದರೂ ಈವರೆಗೂ ಯಾವುದೇ ಸಚಿವರ ಮನೆಗಳ ಮೇಲೆ ದಾಳಿಯಾಗದಿರುವುದು ದುರಂತ ಎಂದು ಎಎಪಿ ರಾಜ್ಯ ನಾಯಕರು ಕಿಡಿಕಾರಿದ್ದಾರೆ.

Leave a Reply

error: Content is protected !!
LATEST
BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ