Please assign a menu to the primary menu location under menu

NEWSಕೃಷಿದೇಶ-ವಿದೇಶ

ನಾಳೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ದೆಹಲಿಯಲ್ಲಿ ಬೃಹತ್ ರೈತರ ರ‍್ಯಾಲಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿಯ ಜಂತರ್ ಮಂತರ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಕರ್ನಾಟಕ ವತಿಯಿಂದ ನಾಳೆ (ಆ.22) ರೈತರ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಭಾರತ ರಾಜ್ಯಗಳ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ನಮ್ಮ ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್ 22 ರಂದು ದೆಹಲಿ ಜಂತರ್ ಮಂತರ್ ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಬೃಹತ್ ರೈತರ ರ‍್ಯಾಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಇನ್ನು ರೈತರ ರ‍್ಯಾಲಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳಿಂದ ನೂರಾರು ರೈತರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಒತ್ತಾಯಗಳು: ಎಲ್ಲ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ MSP ಕಾತರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. 2022ರ ವಿದ್ಯುತ್ ಕಾಯ್ದೆ ಖಾಸಗೀಕರಣ ತಿದ್ದುಪಡಿ ಕೈಬಿಡಬೇಕು.

ಕಬ್ಬಿನ ಎಫ್ ಆರ್ ಪಿ ದರ ಪುನರ್ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ನಿಗದಿ ಮಾಡಬೇಕು. ಕೃಷಿ ಉತ್ಪನ್ನಗಳು ಹಾಗೂ ಉಪಕರಣಗಳ ಮೇಲಿನ ಜಿಎಸ್ಟಿ ರದ್ದುಪಡಿಸ ಬೇಕು.

ದೇಶದಲ್ಲಿ ಮೂರುವರೆ ಲಕ್ಷ ರೈತರು ಕೃಷಿ ಸಂಕಷ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ಕೊರೊನಾ ಲಾಕ್ಡೌನ್ ಸಂಕಷ್ಟದಿಂದ ನಲುಗಿದ್ದಾರೆ. ಆದಕಾರಣ ದೇಶದ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ರೀತಿಯಲ್ಲಿ, ರೈತರ ಸಾಲ ಮನ್ನಾ ಮಾಡ ಬೇಕು.

ಫಸಲ್ ಭೀಮಾ ಬೆಳೆವಿಮೆ ಯೋಜನೆ ಮಾನದಂಡ ಬದಲಾಯಿಸ ಬೇಕು. ವಿಶ್ವವ್ಯಾಪಾರ ಒಪ್ಪಂದ ಡಬ್ಲ್ಯುಟಿಒ ನಿಂದ ಭಾರತ ಸರ್ಕಾರ ಹೊರಬರ ಬೇಕು. ಲಕ್ಷ್ಮೀಪುರ ಕೇರಿ ಪ್ರಕರಣದಲ್ಲಿ ಭಾಗಿಯಾಗಿರುವ ಕೇಂದ್ರದ ರಾಜ್ಯ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಬೇಕು.

ದೆಹಲಿ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗ ಕೇಂದ್ರ ಸರ್ಕಾರ ನವೆಂಬರ್ ತಿಂಗಳಲ್ಲಿ ಮೂರು ಕೃಷಿ ಕಾಯ್ದೆ ರದ್ದು ಮಾಡಿದಾಗ ನೀಡಿದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಭರವಸೆ ಈಡೇರಿಸಬೇಕು ಎಂದು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ