NEWSನಮ್ಮಜಿಲ್ಲೆನಮ್ಮರಾಜ್ಯ

ಏಳು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ :ಹಾಸನಕ್ಕೆ ಅರ್ಚನಾ ನೂತನ ಡಿಸಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಏಳು ಮಂದಿ ಐಎಎಸ್ (IAS) ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ಈ ಕೂಡಲೇ ಜಾರಿಗೆ ಬರುವಂತೆ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಕಪಿಲ್ ಮೋಹನ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಮಾಶಂಕರ್ ಎಸ್.ಆರ್ ಐಎಎಸ್ (ಕೆಎನ್: 1993) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಿ ವರ್ಗಾವಣೆ ಮಾಡಲಾಗಿದೆ.

ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ) ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್ ಎಸ್. ಐಎಎಸ್ (ಕೆಎನ್: 1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಹೆಚ್ಚುವರಿಯಾಗಿ ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹೊಣೆಯನ್ನು ಮುಂದುವರಿಸಲಾಗಿದೆ.

ಪೊನ್ನುರಾಜ್ ವಿ. IAS (KN: 2000), ಸರ್ಕಾರದ ಕಾರ್ಯದರ್ಶಿ ಡಿಪಿಎಆರ್ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿ ಹುದ್ದೆಯ ಏಕಕಾಲಿಕ ಉಸ್ತುವಾರಿಯಲ್ಲಿ ಇರಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಹಾಸನ ಜಿಲ್ಲಾಧಿಕಾರಿಯಾಗಿದ್ದ ಗಿರೀಶ್ ಆರ್.  ಐಎಎಸ್ (ಕೆಎನ್: 2010), ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಮುಂದಿನ ಆದೇಶದವರೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ವರ್ಗಾವಣೆ ಮಾಡಿದೆ.

ಡಾ. ಎನ್. ಶಿವಶಂಕರ ಐಎಎಸ್ (ಕೆಎನ್: 2012), ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಕಾರ್ಯನಿರ್ವಾಹಕ ಸದಸ್ಯರು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ), ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುನ್ಸಿಪಲ್ ಆಡಳಿತ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನು ಮುನ್ಸಿಪಲ್ ಆಡಳಿತ ನಿರ್ದೇಶಕರಾಗಿದ್ದ ಎಂ.ಎಸ್.ಅರ್ಚನಾ ಅವರನ್ನು ಹಾಸನಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !