NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮುಷ್ಕರದ ವೇಳೆ ವರ್ಗಾವಣೆಗೊಂಡ ನೌಕರರು ಮರಳಿ ಮಾತೃ ಘಟಕಕ್ಕೆ – ಸಿಟಿಎಂ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ 2021ರ ಏಪ್ರಿಲ್‌ನಲ್ಲಿ ನಡೆದ ಸಾರಿಗೆ ಮುಷ್ಕರದ ವೇಳೆ ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದ್ದ ಚಾಲನಾ/ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳನ್ನು ಮರಳಿ ಮಾತೃ ಘಟಕಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಸಂಬಂಧ ಈಗಾಗಲೇ ಕೆಎಸ್‌ಆರ್‌ಟಿಸಿ ಬೇರೆಬೇರೆ ವಿಭಾಗಗಳು ಮತ್ತು ಘಟಕಗಳಿಗೆ ವರ್ಗಾವಣೆಗೊಳಿಸಿದ್ದವರನ್ನು ಮಾತೃ ಘಟಕಕ್ಕೆ ವರ್ಗಾವಣೆ ಮಾಡಿ ಹಲವಾರು ನೌಕರರು ಮಾತೃ ಘಟಕದಲ್ಲೇ ಕರ್ತವ್ಯಕ್ಕೆ ನಿಯೋಜನೆ ಗೊಂಡಿದ್ದಾರೆ.

ಅದೇ ರೀತಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೂಡ ಮುಷ್ಕರದ ವೇಳೆ ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದ್ದ ಚಾಲನಾ/ ಸಂಚಾರ ಮೇಲ್ವಿಚಾರಕ ಸಿಬ್ಬಂದಿಗಳನ್ನು ಮರಳಿ ಮಾತೃ ಘಟಕಗಳಿಗೆ ವರ್ಗಾವಣೆ ಮಾಡುತ್ತಿದೆ.

ಈ ಸಂಬಂಧ ಚಾಲನಾ/ ಸಂಚಾರ ಸಿಬ್ಬಂದಿಗಳನ್ನು 2021 ರ ಮುಷ್ಕರದ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಘಟಕಕ್ಕೆ ನಿಯೋಜಿಸಲು ಆದೇಶಿಸಲಾಗಿದ್ದು, ಈ ಆದೇಶದಲ್ಲಿನ ಚಾಲನಾ/ಸಂಚಾರ, ಸಿಬ್ಬಂದಿಗಳು ಪ್ರಸ್ತುತ ಘಟಕದಲ್ಲಿಯೇ ಮುಂದುವರಿಯಲು ಇಚ್ಚಿಸಿ ಮನವಿ ಸಲ್ಲಿಸಿದ್ದರೆ ಅಂತಹ ಸಿಬ್ಬಂದಿಗಳನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಘಟಕದಲ್ಲಿಯೇ ಮುಂದುವರಿಸಲು ಅನುಮತಿಸಲಾಗುವುದು.

2021 ರ ಮುಷ್ಕರದ ಸಂಬಂಧ ವಿಭಾಗ ಮಟ್ಟದಲ್ಲಿ ಘಟಕ ವರ್ಗಾವಣೆ ಮಾಡಿದ್ದಲ್ಲಿ (ಮುಷ್ಕರದ ನಂತರ ಶಿಸ್ತು/ಗೈರುಹಾಜರಾತಿ/ ಅಪಘಾತ ಪ್ರಕರಣಗಳಲ್ಲಿ ಭಾಗಿಯಾಗಿ ಅಮಾನತುಗೊಂಡ ನೌಕರರನ್ನು ಹೊರತುಪಡಿಸಿ) ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಘಟಕಗಳಗೆ ಅವರ ಕೋರಿಕೆ ಮೇರೆಗೆ ನಿಯೋಜಿಸಲು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?