NEWSಕೃಷಿದೇಶ-ವಿದೇಶವಿಡಿಯೋ

 ದೆಹಲಿಯಲ್ಲಿ ಬೃಹತ್ ರೈತರ ರ‍್ಯಾಲಿ- ರೈತರ ಸಾಲ ಮನ್ನಾ ಮಾಡಬೇಕು : ಕುರುಬೂರು ಶಾಂತಕುಮಾರ್ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಮೂರುವರೆ ಲಕ್ಷ ರೈತರು ಕೃಷಿ ಸಂಕಷ್ಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಹಾಗೂ ಕೊರೊನಾ ಲಾಕ್ಡೌನ್ ಸಂಕಷ್ಟದಿಂದ ನಲುಗಿದ್ದಾರೆ. ಆದಕಾರಣ ದೇಶದ ಉದ್ಯಮಿಗಳ 10 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ ರೀತಿಯಲ್ಲಿ, ರೈತರ ಸಾಲ ಮನ್ನಾ ಮಾಡ ಬೇಕು ಎಂದು ದಕ್ಷಿಣ ಭಾರತ ರಾಜ್ಯಗಳ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಕರ್ನಾಟಕ ವತಿಯಿಂದ ಇಂದು (ಆ.22) ಹಮ್ಮಿಕೊಂಡಿದ್ದ ರೈತರ ಬೃಹತ್ ರ‍್ಯಾಲಿಯಲ್ಲಿ ಮಾತನಾಡಿದರು.

ಫಸಲ್ ಭೀಮಾ ಬೆಳೆವಿಮೆ ಯೋಜನೆ ಮಾನದಂಡ ಬದಲಾಯಿಸ ಬೇಕು. ವಿಶ್ವವ್ಯಾಪಾರ ಒಪ್ಪಂದ ಡಬ್ಲ್ಯುಟಿಒ ನಿಂದ ಭಾರತ ಸರ್ಕಾರ ಹೊರಬರ ಬೇಕು. ಲಕ್ಷ್ಮೀಪುರ ಕೇರಿ ಪ್ರಕರಣದಲ್ಲಿ ಭಾಗಿಯಾಗಿರುವ ಕೇಂದ್ರದ ರಾಜ್ಯ ಗೃಹ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ಇನ್ನು ಪ್ರಮುಖವಾಗಿ ದೆಹಲಿ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗ ಕೇಂದ್ರ ಸರ್ಕಾರ ನವೆಂಬರ್ ತಿಂಗಳಲ್ಲಿ ಮೂರು ಕೃಷಿ ಕಾಯ್ದೆ ರದ್ದು ಮಾಡಿದಾಗ ನೀಡಿದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಭರವಸೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ MSP ಕಾತರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು. 2022ರ ವಿದ್ಯುತ್ ಕಾಯ್ದೆ ಖಾಸಗೀಕರಣ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು.

ಕಬ್ಬಿನ ಎಫ್‌ಆರ್‌ಪಿ ದರ ಪುನರ್ ಪರಿಶೀಲನೆ ನಡೆಸಿ ವೈಜ್ಞಾನಿಕವಾಗಿ ನಿಗದಿ ಮಾಡಬೇಕು. ಕೃಷಿ ಉತ್ಪನ್ನಗಳು ಹಾಗೂ ಉಪಕರಣಗಳ ಮೇಲಿನ ಜಿಎಸ್ಟಿ ರದ್ದುಪಡಿಸ ಬೇಕು ಎಂಬುವುದು ಸೇರಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಮೋರ್ಚಾ ವತಿಯಿಂದ ಬೃಹತ್ ರೈತರ ರ‍್ಯಾಲಿ ನಡೆಸುತ್ತಿದ್ದು, ಇಂದು ದೇಶದ ಪ್ರಧಾನಿಯವರನ್ನು ಎಚ್ಚರಿಸುವ ಸಲುವಾಗಿ ಈ ರ‍್ಯಾಲಿ ನಡೆಸಲಾಗುತ್ತಿದೆ. ಇದರಿಂದ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್‌ ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.

ರೈತರ ರ‍್ಯಾಲಿಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳಿಂದ ನೂರಾರು ರೈತರು ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ