Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ವೀರ ಸಾವರ್ಕರ್ ರಥಯಾತ್ರೆಗೆ ಮಾಜಿ ಸಿಎಂ ಯಡಿಯೂರಪ್ಪ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ವೀರ ಸಾವರ್ಕರ್ ರಥಯಾತ್ರೆಗೆ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.

ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಬಿಎಸ್‌ವೈ, ಎಂಟು ದಿನಗಳ ಈ ಯಾತ್ರೆ ರಾಜ್ಯದ ಅಷ್ಟದಿಕ್ಕುಗಳಲ್ಲೂ, ವೀರ್‌ ಸಾವರ್ಕರ್‌ ಅವರ ಜೀವನ ಮೌಲ್ಯ, ದೇಶ ಪ್ರೇಮದ ಸಂದೇಶವನ್ನು ಸಾರಲಿದೆ ಎಂದು ತಿಳಿಸಿದರು.

ಇನ್ನು ದೇಶ ಇಂದು ಮಹತ್ವದ ಕಾಲಘಟ್ಟದಲ್ಲಿದೆ. ಒಂದೆಡೆ, ದೇಶ ವಿಶ್ವಗುರು ಅಗುವತ್ತ ದಾಪುಗಾಲು ಇಡುತ್ತಿದೆ. ಇನ್ನೊಂದೆಡೆ ಅನೇಕ ಸವಾಲುಗಳು ನಮ್ಮ ಮುಂದಿದೆ. ದೇಶದ ಮೌಲ್ಯಗಳಿಗೆ ಮಸಿ ಬಳಿಯುವ ಕೆಲಸ ಕೆಲವರಿಂದ ನಡೆಯುತ್ತಿದೆ. ಈ ಪೈಕಿ, ಮುಖ್ಯವಾದದ್ದು ಸಾವರ್ಕರ್‌ ವಿರುದ್ಧ ಅಪಪ್ರಚಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಗೌಡ, ಲೋಕಸಭಾ ಸದಸ್ಯರು, ಶಾಸಕರುಗಳು, ಪಾಲಿಕೆ ಅಧ್ಯಕ್ಷರು, ಪಾಲಿಕೆಯ ಸದಸ್ಯರು, ಹಿರಿಯ ಮುಖಂಡರು, ಮಂಡಲದ ಪದಾಧಿಕಾರಿಗಳು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು.

ಶಕ್ತಿ ಕೇಂದ್ರದ ಅಧ್ಯಕ್ಷರು, ವಿವಿಧ ಮೋರ್ಚಾದ ಅಧ್ಯಕ್ಷರು & ಪ್ರಧಾನ ಕಾರ್ಯದರ್ಶಿಗಳು, ಕ್ಷೇತ್ರದ ಕಾರ್ಯಕಾರಿಣಿ ಸದಸ್ಯರು , ಪ್ರಕೋಷ್ಟದ ಸಂಚಾಲಕರು & ಸಹ ಸಂಚಾಲಕರು , ಮೋರ್ಚಾದ ಕಾರ್ಯಕಾರಣಿ ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ...