NEWSದೇಶ-ವಿದೇಶನಮ್ಮರಾಜ್ಯ

ಎಸಿಬಿ ರದ್ದು ಸಂಬಂಧ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ಉಚ್ಚನ್ಯಾಯಾಲಯ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದು ಮಾಡಿರುವುದನ್ನು ಪ್ರಶ್ನಿಸಿ ಸುಪ್ರೀ ಕೋರ್ಟ್‌ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿದೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದೊಡ್ಡಬಳ್ಳಾಪುರದಲ್ಲಿ ಮಂಗಳವಾರ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಿಂದ ಈ ಸಂಬಂಧ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಖಾಸಗಿ ವ್ಯಕ್ತಿ ಸಲ್ಲಿಸಿದ ಅರ್ಜಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಎಸಿಬಿ ರದ್ದು ಕುರಿತು ಹೈಕೋರ್ಟ್‌ ಆದೇಶವನ್ನೇ ಸರ್ಕಾರ ಪಾಲಿಸಲಿದೆ ಎಂದು ಹೇಳಿದ್ದಾರೆ.

ಎಸಿಬಿ ಕುರಿತಾಗಿ ಹೈಕೋರ್ಟ್‌ ನೀಡಿದ ಆದೇಶ ಹಾಗೂ ಪ್ರಣಾಳಿಕೆಯಲ್ಲಿ ನಾವು ಹೇಳಿದ ಅಂಶ ಎರಡೂ ಒಂದೇ. ಹಾಗಾಗಿ ಇದರ ಬಗ್ಗೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಹೈಕೋರ್ಟ್‌ ಆದೇಶವನ್ನು ಹೇಗೆ ಜಾರಿ ಮಾಡಬೇಕು ಎಂಬುವುದ ಬಗ್ಗೆ ಈಗಾಗಲೇ ಕೆಲಸ ಆರಂಭಿಸಿದ್ದೇವೆ ಎಂದು ತಿಳಿಸಿದರು.

ಇನ್ನು ಕೋರ್ಟ್‌ ಆದೇಶ ಬಂದ ಮೊದಲ ದಿನವೇ ಕ್ಯಾಬಿನೆಟ್‌ ಸಭೆ ಸೇರಿದ್ದೆವು. ಆಗಲೇ ಮೇಲ್ಮನವಿ ಮಾಡಬಾರದು ಎಂದು ತೀರ್ಮಾನ ಮಾಡಿದ್ದೆವು. ಈಗ ಮೇಲ್ಮನವಿ ಸಲ್ಲಿಸಿರುವುದು ಯಾವುದೋ ಖಾಸಗಿ ವ್ಯಕ್ತಿ. ಆದರೆ, ಹೈಕೋರ್ಟ್‌ ಆದೇಶವನ್ನು ಸರ್ಕಾರ ಪಾಲನೆ ಮಾಡಲಿದೆ ಎಂದರು.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಖಾಸಗಿ ವ್ಯಕ್ತಿ: ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದು ಮಾಡಿ, ಅಲ್ಲಿರುವ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶದ ವಿರುದ್ಧ ಕನಕರಾಜು ಎಂಬುವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಈಗ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಖಾಸಗಿಯಾಗಿ ಮೇಲ್ಮನವಿ ಸಲ್ಲಿಸಲಾಗಿದೆ. ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರ ನೇತೃತ್ವದ ಪೀಠಕ್ಕೆ ಅರ್ಜಿ ಸಲ್ಲಿಸಿದ್ದು, ಶೀಘ್ರವೇ ಇದರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ