NEWSನಮ್ಮಜಿಲ್ಲೆರಾಜಕೀಯ

ನೀವು ನಿಮ್ಮ ಮನೆಯಲ್ಲಿ ಯಾವ ಆಹಾರವನ್ನಾದರೂ ತಿನ್ನಿ..: ಸಿದ್ದರಾಮಯ್ಯ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಥಯಾತ್ರೆಯ ಹಿಂದೆ ಯಾವ ಉದ್ದೇಶವೂ ಇಲ್ಲ. ಸಾವರ್ಕರ್ ಬಗ್ಗೆ ಜನರಿಗೆ ತಿಳಿವಳಿಕೆ ಮೂಡಿಸಲು ಯಾತ್ರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದಲ್ಲಿ ಇಂದು ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ ಸಾವರ್ಕರ್ ರಥಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ನಮ್ಮಲ್ಲಿ ಆಸ್ತಿಕರು ಹಾಗೂ ನಾಸ್ತಿಕರು ಎಲ್ಲ ತರಹದ ಜನರಿದ್ದಾರೆ. ಸಾರ್ವಜನಿಕವಾಗಿ ಗುಡಿಗೆ ಹೋಗಬೇಕಾದ್ರೆ ಶಿಷ್ಟಾಚಾರ ಇರುತ್ತದೆ. ಆ ಶಿಷ್ಟಾಚಾರ ಪಾಲನೆ ಮಾಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಲಹೆ ನೀಡಿದರು.

ನೀವು ನಿಮ್ಮ ಮನೆಯಲ್ಲಿ ಯಾವ ಆಹಾರವನ್ನಾದರೂ ತಿನ್ನಿ. ಆದ್ರೆ, ದೇವಸ್ಥಾನ ಪವಿತ್ರ ಸ್ಥಳ, ಅಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಿರುತ್ತಾರೆ. ಅಲ್ಲಿಗೆ ಹೋಗುವವರು ಮಡಿ-ಮೈಲಿಗೆಯಿಂದ ಹೋಗುತ್ತಾರೆ. ಮೊದಲು ಅದನ್ನು ತಿಳಿದುಕೊಳ್ಳಿ ಎಂದು ಹೇಳಿದರು.

ಇನ್ನು ಮೈಸೂರಿನ ಮೂಲೆ ಮೂಲೆಯಲ್ಲಿ ಚಾಮುಂಡಿ ಹಬ್ಬವನ್ನ ಆಚರಿಸುತ್ತಾರೆ. ಬಹಳ ಮಡಿಯಿಂದ ಮೊಸರನ್ನವನ್ನು ನೈವೇದ್ಯವಾಗಿ ಅರ್ಪಿಸುತ್ತಾರೆ‌. ನಂತರ ಮರಿ ಹೊಡೆದುಕೊಂಡು ತಿನ್ನುತ್ತಾರೆ. ಮರಿ ಹೊಡೆದು ತಿನ್ನುವ ಮೈಸೂರಿಗರೇ ಬೆಟ್ಟಕ್ಕೆ ಮಡಿಯಿಂದ ಹೋಗ್ತಾರೆ ಎಂದು ಹೇಳಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?