NEWSನಮ್ಮಜಿಲ್ಲೆರಾಜಕೀಯ

ಕಾನೂನಿಗೆ ಮನ್ನಣೆ ನೀಡಿ ಆ.26ರ ಪ್ರತಿಭಟನೆ ಮುಂದೂಡಿಕೆ : ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಿರುವುದರಿಂದ ಕಾನೂನಿಗೆ ಮನ್ನಣೆ ನೀಡಿ ಆಗಸ್ಟ್ 26ರ ಪ್ರತಿಭಟನೆಯನ್ನು ಮುಂದೂಡಲು ಕಾಂಗ್ರೆಸ್‌ ಪಕ್ಷ ನಿರ್ಧರಿಸಿದೆ. ಪಕ್ಷದ ನಾಯಕರ ಜೊತೆ ಚರ್ಚಿಸಿ ಪ್ರತಿಭಟನೆಯ ಮುಂದಿನ ದಿನವನ್ನು ನಿರ್ಧಾರ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಭದ್ರತಾ ವೈಫಲ್ಯ ಮತ್ತು ಅತಿವೃಷ್ಟಿ ಪರಿಹಾರದಲ್ಲಿ ಸ್ಥಳೀಯ ಶಾಸಕರ ಭ್ರಷ್ಟಾಚಾರದ ವಿರುದ್ಧ ನಾವು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೆವು. ಲಕ್ಷಾಂತರ ಮಂದಿ ಭಾಗವಹಿಸುವ ಈ ಸಮಾವೇಶದಲ್ಲಿ ಸರ್ಕಾರದ ವೈಫಲ್ಯ ಬಯಲಾಗುತ್ತದೆ ಎಂಬ ಭೀತಿಯಲ್ಲಿ ನಿಷೇದಾಜ್ಞೆ ಹೇರಲಾಗಿದೆ ಎಂದು ಆರೋಪಿಸಿದರು.

ಇನ್ನು ನಮ್ಮ ಪ್ರತಿಭಟನೆಗೆ ಹೆದರಿ ಅದನ್ನು ರದ್ದುಪಡಿಸಬೇಕೆಂಬ ಉದ್ದೇಶದಿಂದಲೇ ಬಿಜೆಪಿ ಅದೇ ದಿನ ಜನಜಾಗೃತಿ ಸಮಾವೇಶ ನಡೆಸಲು ಹೊರಟಿದೆ. ಪೊಲೀಸರ ನಿಷ್ಕ್ರಿಯತೆಯನ್ನು ಮುಚ್ಚಿಹಾಕುವ ದುರುದ್ದೇಶದಿಂದಲೇ ಪಕ್ಷದಿಂದ ಸಮಾವೇಶ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದನ್ನು ಜನ ಸುಲಭದಲ್ಲಿ ಅರ್ಥಮಾಡಿಕೊಳ್ಳುತ್ತಾರೆ ಎಂದರು.

ಕೊಡಗಿನ ಜನರು ನೇರ ನಡೆ-ನುಡಿಯ ನ್ಯಾಯದ ಪರವಾಗಿರುವ ಜನ. ನಮ್ಮ ಪ್ರತಿಭಟನೆ ಪೊಲೀಸ್ ಇಲಾಖೆ ಮತ್ತು ರಾಜ್ಯ ಸರ್ಕಾರದ ವಿರುದ್ಧವಾಗಿತ್ತೇ ಹೊರತು ಕೊಡಗಿನ ಜನರ ವಿರುದ್ಧವಾಗಿರಲಿಲ್ಲ. ಅಲ್ಲಿನ ಜನ ಬಿಜೆಪಿ ಶಾಸಕರ ವಿರುದ್ಧ ತಿರುಗಿಬಿದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರು ಬಿಜೆಪಿಗೆ ಬುದ್ಧಿ ಕಲಿಸಲಿದ್ದಾರೆ ಎಂದು ಹೇಳಿದರು.

ಪ್ರತಿಭಟನೆ ವಿರೋಧ ಪಕ್ಷದ ಹಕ್ಕು. ಆಡಳಿತ ಪಕ್ಷ ಪ್ರತಿಭಟನೆಗೆ ಕಾರಣ ತಿಳಿದುಕೊಂಡು ತಪ್ಪುಗಳನ್ನು ಸರಿಪಡಿಸಿಕೊಳ್ಳಬೇಕು. ಆದರೆ ಬಿಜೆಪಿ ಶಾಸಕ ಬೋಪಯ್ಯ ಅವರು ಕೊಡಗಿಗೆ ಬರಲಿ ನೋಡ್ಕೋತಿವಿ ಎಂದು ನನಗೆ ಸವಾಲು ಹಾಕುತ್ತಾರೆ. ಇದೇ ರೀತಿ ಸವಾಲು ಹಾಕಿದ್ದ ಬಳ್ಳಾರಿ ರೆಡ್ಡಿಗಳು ಏನಾದರೂ ಎನ್ನುವುದು ಇವರ ನೆನಪಲ್ಲಿರಲಿ ಎಂದು ಎಚ್ಚರಿಕೆ ನೀಡಿದರು.

ಇನ್ನು ನನ್ನ ಮೇಲೆ ಮೊಟ್ಟೆ ಒಡೆದದ್ದು ತಪ್ಪು ಎಂದು ಮುಖ್ಯಮಂತ್ರಿ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಈಗ ಇವರಿಬ್ಬರು ಅದೇ ಘಟನೆಯ ವಿರುದ್ಧ ನಾವು ಮಾಡುವ ಪ್ರತಿಭಟನೆಯನ್ನೂ ತಪ್ಪು ಎಂದು ಹೇಳುತ್ತಿದ್ದಾರೆ. ಯಾಕಿಂತಹ ದ್ವಂದ್ವ ಎಂದು ಪ್ರಶ್ನಿಸಿದರು.

ಕೊಡಗಿನಲ್ಲಿ ನನ್ನ ವಿರುದ್ಧ ನಡೆದ ಪ್ರತಿಭಟನೆ ಪೂರ್ವಯೋಜಿತವೆನ್ನುವುದು ಪೊಲೀಸರ ನಿಷ್ಕ್ರಿಯತೆಯಿಂದ ಸ್ಪಷ್ಟವಾಗಿದೆ. ಮೊದಲ ಸಲ ಪ್ರತಿಭಟನೆ ನಡೆದಾಗಲೇ ಪೊಲೀಸರು ಎಚ್ಚರಿಕೆ ವಹಿಸಬೇಕಾಗಿತ್ತು. ಆದರೆ ಅವರು ಕಣ್ಣುಮುಚ್ಚಿಕೊಂಡು ಷಾಮೀಲಾಗಿದ್ದ ಕಾರಣದಿಂದಲೇ ನಂತರ 3-4 ಕಡೆ ಪ್ರತಿಭಟನೆ ನಡೆದವು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಾಯಕರು ಹುಟ್ಟು ಸುಳ್ಳುಕೋರರು. ಮೊಟ್ಟೆ ಎಸೆದವನು ಕಾಂಗ್ರೆಸ್ ಕಾರ್ಯಕರ್ತನೆಂದು ಈಗ ಸುಳ್ಳು ಹೇಳುತ್ತಿದ್ದಾರೆ. ಮಾಜಿ ಸಚಿವ ಜಿವಿಜಯ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರೂ ಮೊಟ್ಟೆ ಎಸೆದ ಸಂಪತ್ ನಮ್ಮ ಪಕ್ಷದವನಲ್ಲ, ಬಿಜೆಪಿಯವನು ಎಂದು ಹೇಳಿ ಬಿಜೆಪಿಯಸುಳ್ಳನ್ನು ಬಯಲು ಮಾಡಿದ್ದಾರೆ ಎಂದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!?