NEWSನಮ್ಮಜಿಲ್ಲೆನಮ್ಮರಾಜ್ಯ

ಅನ್ನಭಾಗ್ಯ ನಿಲ್ಲಿಸುವ ಯೋಚನೆ ಮಾಡಿದರೆ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ : ಸಿದ್ದರಾಮಯ್ಯ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಚಿವ ಉಮೇಶ್ ಕತ್ತಿಯವರೇ ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೆ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ. ಎಚ್ಚರ ಇರಲಿ ಎಂದು ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಕೇಂದ್ರ ಸರಕಾರ ಒಪ್ಪಿದರೆ ಅನ್ನಭಾಗ್ಯ ಯೋಜನೆಯನ್ನು ಬಂದ್ ಮಾಡುವುದಾಗಿ ರಾಜ್ಯ ಆರೋಗ್ಯ ಸಚಿವ ವಿ.ಉಮೇಶ್ ಕತ್ತಿ ಹೇಳಿಕೆಯನ್ನು ಆಕ್ಷೇಪಿಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಲೇ ಇದ್ದ ರಾಜ್ಯ ಬಿಜೆಪಿ ನಾಯಕರು ಈ ಯೋಜನೆ ನಿಲ್ಲಿಸಲು ನೆಪಗಳನ್ನು ಹುಡುಕುತ್ತಿರುತ್ತಾರೆ. ರಾಜ್ಯದ ಆಹಾರ ಸಚಿವ ಉಮೇಶ್ ಕತ್ತಿ ಅವರಿಗೆ ಅಂತಹದ್ದೊಂದು ನೆಪ ಸುಪ್ರೀಂ ಕೋರ್ಟ್ ನ ಆದೇಶದಲ್ಲಿ ಸಿಕ್ಕಿದ್ದಕ್ಕೆ ಸಂತಸ ಪಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೂ.2,65,000 ಕೋಟಿ ಗಾತ್ರದ ಬಜೆಟ್ ನಲ್ಲಿ 2022-23ರ ಸಾಲಿನ ಅನ್ನಭಾಗ್ಯ ಯೋಜನೆಗೆ ಮೀಸಲಿಟ್ಟಿರುವುದು ರೂ.2,800 ಕೋಟಿ ಮಾತ್ರ. ಇಷ್ಟು ಹಣವನ್ನು ಉಳಿತಾಯ ಮಾಡಲು ನೆಪಗಳನ್ನು ಹುಡುಕುತ್ತಿರುವ ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಚಿವರ ಮನಸ್ಸಿನಲ್ಲಿ ಬಡವರ ಬಗ್ಗೆ ಎಷ್ಟೊಂದು ದ್ವೇಷ-ಅಸಹನೆ ಇರಬಹುದು? ಎಂದು ಪ್ರಶ್ನಿಸಿದ್ದಾರೆ.

ಅಭಿವೃದ್ದಿ ಚಟುವಟಿಕೆಗಳು ಸ್ಥಗಿತಗೊಂಡು, ಕಲ್ಯಾಣ ಕಾರ್ಯಕ್ರಮಗಳು ದುಡ್ಡಿಲ್ಲದೆ ನನೆಗುದಿಗೆ ಬೀಳಲು ಕಾರಣ ರಾಜ್ಯ ಬಿಜೆಪಿ ಸರಕಾರದ ಕಮಿಷನ್ ದಾಹ. 40 ಶೇ. ಕಮಿಷನ್ ಈಗ ಶೇ.50ಕ್ಕೆ ಏರಿದೆಯಂತೆ. ಉಮೇಶ್ ಕತ್ತಿಯಂತಹ ಬೇಜವಾಬ್ದಾರಿ ಸಚಿವರು ಅನ್ನಭಾಗ್ಯ ಯೋಜನೆ ನಿಲ್ಲಿಸಲು ಹೊರಟಿದ್ದಾರೆ.

ಸಚಿವ ಉಮೇಶ್ ಕತ್ತಿಯವರೇ ಬಡವರ ಹೊಟ್ಟೆಗೆ ಹೊಡೆಯುವ ನಿಮ್ಮ ದುಷ್ಟತನದ ಕತ್ತಿಯನ್ನು ಒರೆಯಲ್ಲಿಟ್ಟುಬಿಡಿ. ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸುವ ಯೋಚನೆ ಮಾಡಿದರೂ ಬಡವರ ಹಸಿವಿನ ಬೆಂಕಿಯಲ್ಲಿ ಬೆಂದು ಹೋಗುತ್ತೀರಿ.. ಎಚ್ಚರ ಇರಲಿ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು