NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಸಮಸ್ಯೆಗಳಿಗೆ ಅತೀ ಶೀಘ್ರದಲ್ಲೇ ಪರಿಹಾರ : ಮಾಜಿ ಸಿಎಂ ಬಿಎಸ್‌ವೈ ಭರವಸೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ನಿಯೋಗದಿಂದ ಯಡಿಯೂರಪ್ಪ ಭೇಟಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ನೌಕರರಿಗೆ ಸರ್ಕಾರ ಕೊಟ್ಟ ಮಾತಿನಂತೆ ಸರ್ಕಾರಿ ನೌಕರರಂತೆ ಸಮಾನ ವೇತನ, ವೇತನ ಆಯೋಗದ ಮಾದರಿಯಲ್ಲಿ ನೀಡಬೇಕು ಹಾಗೂ ಇತರೆ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸುವಂತೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೂಟದ ಪದಾಧಿಕಾರಿಗಳು ಮನವಿ ಮಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್‌ ನೇತೃತ್ವದಲ್ಲಿ ಬುಧವಾರ ಕೂಟದ ಪದಾಧಿಕಾರಿಗಳ ನಿಯೋಗ ಯಡಿಯೂರಪ್ಪ ಅವರನ್ನು ಬೇಟಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸ್ಪಂದಿಸುವಂತೆ ತಾವು ಮಾಡಬೇಕು ಎಂದು ವಿನಂತಿಸಿತು.

ನಿಯೋಗದ ಮನವಿ ಸ್ವೀಕರಿಸಿದ ಯಡಿಯೂರಪ್ಪ, ನಿಮ್ಮ ಎಲ್ಲ ಸಮಸ್ಯೆಗಳಿಗೂ ಅತೀ ಶೀಘ್ರದಲ್ಲೇ ಪರಿಹಾರ ಕೊಡಿಸುತ್ತೇವೆ ಎಂಬ ಭರವಸೆ ನೀಡಿದರು. ಅಲ್ಲದೆ ಮುಂದಿನ ದಿನಗಳಲ್ಲಿ ನೌಕರರಿಗೆ ತೊಂದರೆ ಆಗದ ರೀತಿ ನಮ್ಮ ಸರ್ಕಾರ ಮಾಡಲಿದೆ ಎಂಬ ಆಶ್ವಾಸನೆ ನೀಡಿದರು.

ನಿಯೋಗದ ಮನವಿ ಪತ್ರ: ವೇತನ ಆಯೋಗದ ವಿಷಯಕ್ಕೆ ಸಂಬಂಧಪಟ್ಟಂತೆ ಡಿಸೆಂಬರ್-2020 ರಲ್ಲಿ ತಾವೂ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಡೆದ ಸಾರಿಗೆ ಮುಷ್ಕರದ ಸಂದರ್ಭದಲ್ಲಿ ನಮ್ಮ ಕೂಟದ ಪಾದಧಿಕಾರಿಗಳೊಂದಿಗೆ ಪ್ರಸ್ತುತ ಮುಖ್ಯಮಂತ್ರಿಗಳು, ಮಾಜಿ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಆರ್. ಆಶೋಕ ಹಾಗೂ ಇನ್ನು ಹಲವರು ಮತ್ತು ಅಧಿಕಾರಿಗಳೊಂದಿಗೆ ನಡೆದ ಸಂಧಾನ ಸಭೆಯಲ್ಲಿ 9 ಬೇಡಿಕೆಗಳಲ್ಲಿ ಮುಖ್ಯವಾದ ಸಾರಿಗೆ ನೌಕರರಿಗೂ ಸರ್ಕಾರಿ ನೌಕರಂತೆ ಚಾಲ್ತಿಯಲ್ಲಿರುವ ಆರನೇ ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವದಾಗಿ ಲಿಖಿತ ಭರವಸೆ ನೀಡಿದ್ದೀರಿ.

ತದನಂತರ ಮೂರು ತಿಂಗಳ ಕಾಲ ಹಲವು ಬಾರಿ ಅಧಿಕಾರಿಗಳು ಮತ್ತು ಮಂಡಳಿ ಜೊತೆ ಸಭೆಗಳು ನಡೆದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ 2021- ಏಪ್ರಿಲ್‌ನಲ್ಲಿ ಸರ್ಕಾರದ ಗಮನ ಸೆಳೆಯಲು ನಾವು ಮತ್ತೊಮ್ಮೆ ಸಾರಿಗೆ ಮುಷ್ಕರ ಮಾಡಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಬಂದಿತು.

1.25 ಲಕ್ಷ ನೌಕರರು ಹಗಲು-ರಾತ್ರಿ ನೋಡಿದೆ, ಅತೀ ಒತ್ತಡದಲ್ಲಿ ದಿನಕ್ಕೆ ಸುಮಾರು ಒಂದು ಕೋಟಿ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಆದರೆ, ಸರ್ಕಾರಿ ನೌಕರರ ವೇತನಕ್ಕೆ ಹೊಲಿಸಿದರೆ ನಮ್ಮ ವೇತನದಲ್ಲಿ 13% ಯಿಂದ 45% ವರೆಗೆ ವ್ಯತ್ಯಾಸವಿದೆ. ಇದರಿಂದ ಸಾರಿಗೆ ನೌಕರರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಬಹಳ ಹಿಂದುಳಿದಿದ್ದಾರೆ.

ಇನ್ನು ಪ್ರತಿ ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಅವೈಜ್ಞಾನಿಕ ವೇತನ ಪರಿಷ್ಕರಣೆ ಸಮಯದಲ್ಲಿ ಸಾರಿಗೆ ಮುಷ್ಕರ ಮಾಡಿ ಸರ್ಕಾರಕ್ಕೆ ಮುಜುಗರ, ಸಂಸ್ಥೆಗೆ ಆರ್ಥಿಕ ನಷ್ಟ ಮತ್ತು ಪ್ರಯಾಣಿಕರಿಗೆ ತೊಂದರೆ ನೀಡಿದ ಮೇಲೆ 10% 12.50% ವೇತನ ಪರಿಷ್ಕರಣೆಯಾಗುತ್ತದೆ. ಬಳಿಕ ಈ ಮುಷ್ಕರದ ಕಾರಣದಿಂದ ಹಲವು ನೌಕರರು ಸೇವೆಯಿಂದ ವಜಾ, ವರ್ಗಾವಣೆ ಮತ್ತು ಅಮಾನನಿನಂತ ಯಾತನೆ ಅನುಭವಿಸಬೇಕು.

ಆದರೆ, ರಾಜ್ಯದಲ್ಲಿ ಸರ್ಕಾರಿ ಇಲಾಖೆ ಹಾಗೂ ಎಲ್ಲ ನಿಗಮ ಮಂಡಳಿಗಳಿಗೆ ಯಾವುದೇ ಮುಷ್ಕರ ಇಲ್ಲದೆ ವೇತನ ಆಯೋಗದ ಮಾದರಿಯಲ್ಲಿ ವೇತನ ನಿಗದಿಯಾಗುತ್ತದೆ. ( ಉದಾ: ಕೆಇಬಿ ನೌಕರರು ಸರ್ಕಾರಿ ನೌಕರರಿಗಿಂತ ಸುಮಾರು 21% ಹೆಚ್ಚಿನ ವೇತನ ಪಡೆಯುತ್ತಿದ್ದಾರೆ).

ಸಾರ್ವಜನಿಕರ ಅತೀ ಅವಶ್ಯಕ ಮೂಲಭೂತ ಸೌಕರ್ಯಗಳಲ್ಲಿ ಸಾರಿಗೆಯು ಒಂದು. ಆದರೆ ಇಂಥ ಮುಖ್ಯ ಸೇವೆ ಒದಗಿಸುತ್ತಿರುವ ನಾವು ಎಲ್ಲ ಇಲಾಖೆ ಹಾಗೂ ನಿಗಮ ಮಂಡಳಿ ನೌಕರರಗಿಂತ ಕಡಿಮೆ ವೇತನ ಪಡೆಯುತ್ತಿರುವುದು ಭಾರತದ ಸಂವಿಧಾನದ ಮುಖ್ಯ ಆಶಯವಾದ ಸಮಾನ ಕೆಲಸಕ್ಕೆ ಸಮಾನ ವೇತನ ಎಂಬುದಕ್ಕೆ ವಿರುದ್ಧವಾಗಿದೆ. ಆದ್ದರಿಂದ ತಾವು ಈ ಬೇಡಿಕೆಗಳನ್ನು ಈ ಕೂಡಲೆ ಅತೀ ಶೀಘ್ರದಲ್ಲೇ ಈಡೇರಿಸಬೇಕು.

1) ಸಾರಿಗೆಯಲ್ಲಿ ಮುಷ್ಕರದ ಸಮಯದಲ್ಲಿ ಮಾಡಿರುವ ವಜಾ ಪ್ರಕರಣಗಳನ್ನು ಯಾವುದೇ ನಿಬ೦ಧನೆಗಳನ್ನು ವಿಧಿಸದೇ, ಈ ಕೂಡಲೇ ಪುನರ್‌ ನೇಮಕ ಮಾಡಿಕೊಳ್ಳಬೇಕು. ಮುಷ್ಕರದ ಸಮಯದಲ್ಲಿ ಮಾಡಿರುವ ವರ್ಗಾವಣೆ ಹಾಗೂ ಇತರ ಶಿಕ್ಷೆಗಳನ್ನು ಯಾವುದೇ ನಿಬಂಧನೆಗಳನ್ನು ವಿಧಿಸದೆ ರದ್ದು ಮಾಡಿ, 2021ರ ಏಪ್ರಿಲ್‌ 6ರ ಪೂರ್ವದ ಯಥಾಸ್ಥಿತಿಯನ್ನು ಕಾಪಾಡಬೇಕು.

2) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನವನ್ನು ಕೊಡಬೇಕು. ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ನಾಲ್ಕು ವರ್ಷಕ್ಕೊಮ್ಮೆ ಮಾಡುವ ಅವೈಜ್ಞಾನಿಕ ಚೌಕಾಸಿ ವೇತನ ಪರಿಷ್ಕರಣೆ ಪದ್ಧತಿ ಕೈ ಬಿಟ್ಟು, ಸರ್ಕಾರದ ಇಲಾಖೆ ಮತ್ತು ನಿಗಮ ಮಂಡಳಿಗಳಲ್ಲಿ ಚಾಲ್ತಿಯಲ್ಲಿರುವ ವೇತನ ಆಯೋಗದ ಮಾದರಿಯನ್ನು ಅಳವಡಿಸಿಳಕೊಳ್ಳಬೇಕು.

3) ಮುಷ್ಕರದ ಸಮಯದಲ್ಲಿ ನೌಕರರ ಮತ್ತು ಅವರ ಕುಟುಂಬ ಸದಸ್ಯರ ಮೇಲೆ ದಾಖಲಾಗಿರುವ ಪೊಲೀಸ್‌ ಪ್ರಕರಣಗಳನ್ನು ಹಿಂಪಡೆಯಬೇಕು. 4) ಸಾರಿಗೆ ನಿಗಮಗಳಲ್ಲಿ ಕೂಡಲೇ ಕಾರ್ಮಿಕ ಸಂಘಗಳ ಚುನಾವಣೆ ನಡೆಸಬೇಕು. (1992ರ ನಂತರ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕ ಸಂಘಗಳ ಚುನಾವಣೆ ನಡೆದಿಲ್ಲ).

ರಾಜ್ಯದ ದುಡಿಯುವ ಎಲ್ಲ ನೌಕರರಿಗೆ ಸರಿಯಾದ ವೇತನ ಮತ್ತು ಸೌಲಭ್ಯಗಳನ್ನು ನೀಡಿ ಅವರೆಲ್ಲರೂ ನೆಮ್ಮದಿಯಾಗಿ ಜೀವನ ನಡೆಸುವಂತೆ ಮಾಡಿರುವ ತಮ್ಮ ಬಿಜೆಪಿ ಸರ್ಕಾರ ದಿನವು ಜೀವವನ್ನು ಅಂಗೈಯಲ್ಲಿ ಹಿಡಿದು ರಾಜ್ಯದ ಜನತೆಗೆ ಸೇವೆ ನೀಡುತ್ತಿರುವ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನೂ ಈಡೇರಿಸಬೇಕು. ಈ ಬಗ್ಗೆ ನಮ್ಮ ಪರ ಮುಖ್ಯಮಂತ್ರಿಗಳಿಗೆ ಹಾಗೂ ಸಾರಿಗೆ ಸಚಿವರಿಗೆ ಒತ್ತಾಯಿಸಬೇಕೆಂದು ತಮ್ಮಲ್ಲಿ ಸಮಸ್ತ ಸಾರಿಗೆ ನೌಕರರು ಹಾಗೂ ನಮ್ಮ ಕುಟುಂಬ ಸದಸ್ಯರ ವತಿಯಿಂದ ಮನವಿ ಮಾಡುತ್ತಿದ್ದೇವೆ ಎಂದು ಕೂಟದ ಪದಾಧಿಕಾರಿಗಳು ಯಡಿಯೂರಪ್ಪ ಅವರಿಗೆ ಬುಧವಾರ (ಆ.24) ಮನವಿ ಸಲ್ಲಿಸಿದ್ದಾರೆ.

ನಿಯೋಗದಲ್ಲಿ ಕೂಟದ ಅಧ್ಯಕ್ಷ ಚಂದ್ರು, ಪ್ರಧಾನ ಕಾರ್ಯದರ್ಶಿ ತಿಪ್ಪೆಸ್ವಾಮಿ ಹಾಗೂ ಪದಾಧಿಕಾರಿಗಳು ಇದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು