ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚನ್ನಸಂದ್ರ ಘಟಕ 21ರ ಚಾಲಕ ಡಿಪೋದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಹೊಳೆ ಬಸಪ್ಪ ಎಂಬುವರೆ ಡಿಪೋ ಒಳಗೇ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಚಾಲಕರು.
ಇಂದು ಬೆಳಗ್ಗೆ ಹೊಳೆ ಬಸಪ್ಪ ಜನರಲ್ ಶಿಫ್ಟಿಗೆ ಬಂದಿದ್ದರು. ಆದರೆ ಕರ್ತವ್ಯಕ್ಕೆ ಹೋಗದೆ 12 ಗಂಟೆಗೂ ಮುಂಚೆ ಅಲ್ಲೇ ಇರುವ ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಇನ್ನು ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸಾರಿಗೆ ನೌಕರರ ಸಂಘಟನೆಗಳ ಹಲವಾರು ಮುಖಂಡರು ಮತ್ತು ಬಿಎಂಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ.