CrimeNEWSನಮ್ಮಜಿಲ್ಲೆ

ಬಸ್‌ ಕಾರುಗಳ ನಡುವೆ ಅಪಘಾತ – ಮೂರು ತಿಂಗಳ ಮಗು ಸೇರಿ ಮೂವರು ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಸರ್ಕಾರಿ ಬಸ್- ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಹಾಗೂ ಬಾಣಂತಿ ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಹಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 218 ರ ಕುಪಕಡ್ಡಿ ಕ್ರಾಸ್ ಬಳಿ ನಡೆದಿದೆ.

ಬುಧವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಕಲಬುರಗಿ ಮೂಲದ ಕಲಶೆಟ್ಟಿ ಕುಟುಂಬದ ತಾಯಿ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ( 25) ಹಾಗೂ ಮಗು ಸುಮನ್ (3 ತಿಂಗಳು) ಕಾರಿನಲ್ಲೇ ಮೃತಪಟ್ಟರೇ ಶರಣಮ್ಮ ಬಸವರಾಜ್ ಕಲಶೆಟ್ಟಿ (55) ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಉಮೇಶ ಕಲಶೆಟ್ಟಿ ಮತ್ತು ಅವರ ಪತ್ನಿ ಸುರೇಖಾ ಹಾಗೂ ಮಕ್ಕಳಾದ ಸುಹಾನ್ (8 ತಿಂಗಳು) ಮತ್ತು ಸಾನ್ವಿ (2) ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಗಲಕೋಟೆಯಿಂದ ವಿಜಯಪುರಕ್ಕೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗೆ ಎದುರಿಗೆ ಬರುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಹಿಂದಿಕ್ಕುವ ( ಓವರಟೇಕ್) ಬರದಲ್ಲಿ ಎರಡು ಕಾರುಗಳು ಬಸ್‌ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಲಶೆಟ್ಟಿ ಕುಟುಂಬದವರು (KA 32 Z 1706) ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ವಿಜಯಪುರ ಮೂಲದ ಬಲೆರೋ ಕಾರಿ( KA 28 Z 5645) ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಕೊಲ್ಹಾರ ಪೊಲೀಸ್ ಠಾಣೆ ಪಿಎಸ್ಐ ಪ್ರೀತಮ್ ನಾಯಕ್ ಮತ್ತು ಪೊಲೀಸ್ ಸಿಬ್ಬಂದಿ ಘಟನಾಸ್ಥಳಕ್ಕೆ‌ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC