CrimeNEWSನಮ್ಮಜಿಲ್ಲೆ

ಬಸ್‌ನಿಲ್ದಾಣದಲ್ಲಿ ಹೆಚ್ಚು ಹೊತ್ತು ಬಸ್‌ ನಿಲ್ಲಿಸಿದ್ದೆ ಎಂದು KSRTC ಚಾಲಕನ ಮೇಲೆ ಪೊಲೀಸ್‌ ಸಿಬ್ಬಂದಿಯಿಂದ ಹಲ್ಲೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಗಡ ಬುಕ್ಕಿಂಗ್ ಮಾಡಿದ್ದ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಕೆಎಸ್‍ಆರ್‌ಟಿಸಿ ಬಸ್ ನಿಲ್ಲಿಸಿದಕ್ಕೆ ಕೋಪಗೊಂಡ ಟ್ರಾಫಿಕ್ ಪೊಲೀಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಾರ್ಪೊರೇಷನ್ ಬಳಿ ಜರುಗಿಸಿದೆ.

ಇಲ್ಲಿ ಹೆಚ್ಚು ಹೊತ್ತು ಬಸ್ ನಿಲ್ಲಿಸಿದ್ದೀಯ ಬೇಗಬೇಗ ಹೋಗು ಎಂದು ಟ್ರಾಫಿಕ್ ಪೊಲೀಸ್ ಕೆಎಸ್‍ಆರ್‌ಟಿಸಿಟಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ್ದು, ಚಾಲಕ ಮೂಗಿನಲ್ಲಿ ರಕ್ತಶ್ರಾವವಾಗಿದೆ.

ಕಾರ್ಪೊರೇಷನ್ ಬಸ್‌ನಿಲ್ದಾಣದಲ್ಲಿ ಪ್ರಯಾಣಿಕರು ಹತ್ತುತ್ತಿದ್ದರಿಂದ ಬಸ್ ಮುಂದೆ ಹೋಗಲಿಲ್ಲ. ಹೀಗಾಗಿ ಟ್ರಾಫಿಕ್ ಸಿಬ್ಬಂದಿ ಹಾಗೂ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಕೋಪಗೊಂಡ ಟ್ರಾಫಿಕ್ ಸಿಬ್ಬಂದಿ ಕ್ಯಾಪ್‍ನಿಂದ ಚಾಲಕನ ಮೂಗಿಗೆ ರಕ್ತ ಬರುವಂತೆ ಥಳಿಸಿದ್ದಾರೆ.

ಈ ಸಂಬಂಧ ಎಸ್.ಜೆ ಪಾರ್ಕ್ ಪೊಲೀಸ್‌ ಠಾಣೆಗೆ ಹಲ್ಲೆಗೊಳಗಾದ ಚಾಲಕ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಹಲ್ಲೆಗೊಳಗಾದ ಚಾಲಕ ಚಾಲಕ ಸುದ್ದಿಗಾರರೊಂದಿಗೆ ಮಾತನಾಡಿ, 7 ಜನ ಮುಂಗಡ ಬುಕ್ಕಿಂಗ್‌ ಮಾಡಿಕೊಂಡಿದ್ದ ಪ್ರಯಾಣಿಕರಿದ್ದರು. ಅದಕ್ಕಾಗಿ ಬಸ್ ನಿಲ್ಲಿಸಿದ್ದೆ. ಈ ವೇಳೆ ಏಕಾಏಕಿ ಬಂದ ಟ್ರಾಫಿಕ್ ಪೊಲೀಸ್ ಬಸ್ ತೆಗೆಯುವಂತೆ ನನ್ನ ಮೇಲೆ ಕೂಗಾಡಿದರು. ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗುತ್ತೇನೆ ಎಂದು ಹೇಳಿದೆ. ಆದರೆ ಬಸ್ ಚಾಲನೆಯಲ್ಲಿರುವಾಗಲೇ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ