NEWSನಮ್ಮರಾಜ್ಯರಾಜಕೀಯ

ಎಎಪಿ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿ ಶಾಸಕ ಸಿ.ಟಿ.ರವಿಗೆ ಇಲ್ಲ: ಮುಕುಂದ್‌ ಗೌಡ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪಾರದರ್ಶಕ ಆಡಳಿತದಲ್ಲಿ ದೃಢವಾದ ನಂಬಿಕೆ ಹೊಂದಿರುವ ಆಮ್‌ ಆದ್ಮಿ ಪಾರ್ಟಿ ಬಗ್ಗೆ ಮಾತನಾಡುವ ನೈತಿಕತೆಯು ಬಿಜೆಪಿ ಶಾಸಕ ಸಿ.ಟಿ.ರವಿಯವರಿಗೆ ಇಲ್ಲ ಎಂದು ಎಎಪಿಯ ರಾಜ್ಯ ಯುವ ಘಟಕದ ಅಧ್ಯಕ್ಷ ಮುಕುಂದ್‌ ಗೌಡ ಹೇಳಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ವಿರುದ್ಧ ಸಿ.ಟಿ.ರವಿ ಹೇಳಿಕೆ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮುಕುಂದ್‌ ಗೌಡ, “ಒಂದು ಕಾಲದಲ್ಲಿ ಒಂದು ಜೊತೆ ಬಟ್ಟೆಯೂ ಸರಿಯಾಗಿಲ್ಲದೇ, ಬಾಬಾ ಬುಡನ್‌ಗಿರಿ ಫೈಲುಗಳನ್ನು ಹೊತ್ತುಕೊಂಡು ಆರೆಸ್ಸೆಸ್‌ ಕಚೇರಿ ಅಲೆಯುತ್ತಿದ್ದ ಸಿ.ಟಿ.ರವಿಯವರ ಈಗಿನ ಆಸ್ತಿ ಎಷ್ಟು? ಕೋಟಿಗಟ್ಟಲೆ ಮೌಲ್ಯದ ಆಸ್ತಿಯನ್ನು ಹೇಗೆ ಸಂಪಾದಿಸಿದರೆಂದು ಅವರು ರಾಜ್ಯದ ಜನತೆಗೆ ತಿಳಿಸಲಿ ಎಂದು ಸವಾಲು ಹಾಕಿದರು.

ಇನ್ನು ದೇವನಹಳ್ಳಿಯ ಭೂ ಹಗರಣದಿಂದ ತಪ್ಪಿಸಿಕೊಳ್ಳಲು ಸಿ.ಟಿ.ರವಿ ಕಾಂಗ್ರೆಸ್ ನಾಯಕರ ಬೂಟು ನೆಕ್ಕಿದ್ದ, ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಕುಡಿದು ಪಾನಮತ್ತನಾಗಿ ಕಾರು ಓಡಿಸಿ ಅಮಾಯಕ ಯುವಕರನ್ನು ಬಲಿ ತೆಗೆದುಕೊಂಡ ರವಿ ಎಂಥವರು ಎಂಬುದು ಜನರಿಗೆ ತಿಳಿದಿದೆ ಎಂದು ಕಿಡಿಕಾರಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಹೆಚ್ಚು ಹಣ ಕೊಳ್ಳೆ ಹೊಡೆಯಲು ಸಾಧ್ಯವಿಲ್ಲವೆಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸ್ಥಾನವನ್ನೇ ಕಾಲಲ್ಲಿ ಒದ್ದವರು ಸಿ.ಟಿ.ರವಿ. ಪಾರದರ್ಶಕತೆಗೆ ಆದ್ಯತೆ ನೀಡುವ ಮೂಲಕ ದೇಶದ ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಸುತ್ತಿರುವ ಆಮ್‌ ಆದ್ಮಿ ಪಾರ್ಟಿಯ ಹೆಸರು ಹೇಳುವ ಯೋಗ್ಯತೆ ಕೂಡ ಅವರಿಗೆ ಇಲ್ಲ ಎಂದು ಹೇಳಿದರು.

ರವಿಯವರು ಯಾವ್ಯಾವ ಕಾಂಗ್ರೆಸ್ ನಾಯಕರೊಂದಿಗೆ ಸೇರಿಕೊಂಡು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ದಂಧೆ ನಡೆಸಿ ನೂರಾರು ಕೋಟಿ ರೂ. ಸಂಪಾದನೆ ಮಾಡಿದ್ದಾರೆಂಬುದನ್ನು ಜನತೆಯ ಮುಂದಿಡಲಿ ಎಂದು ಮುಕುಂದ್‌ ಗೌಡ ಸವಾಲು ಹಾಕಿದರು.

ಸಿ.ಟಿ.ರವಿಯವರು ದೆಹಲಿಗೆ ತೆರಳಿ ಎಎಪಿ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಲು ಸಿದ್ಧರಿದ್ದರೆ ಅವರಿಗೆ ಅವಕಾಶ ಕಲ್ಪಿಸಿಕೊಡುತ್ತೇವೆ. ಭೇಟಿಗೆ ಅವರೇ ದಿನಾಂಕ ಹಾಗೂ ಸಮಯ ನಿಗದಿಪಡಿಸಲಿ. ಅತ್ಯಾಧುನಿಕ ಸೌಲಭ್ಯಗಳುಳ್ಳ ಸರ್ಕಾರಿ ಶಾಲೆಗಳು, ಮೊಹಲ್ಲಾ ಕ್ಲಿನಿಕ್‌ಗಳು ಸೇರಿದಂತೆ ದೆಹಲಿ ಎಎಪಿ ಸರ್ಕಾರ ತಂದ ನೂರಾರು ಕ್ರಾಂತಿಕಾರಿ ಬದಲಾವಣೆಗಳನ್ನು ಅವರು ಪರಿಶೀಲಿಸಿ ಎಂದು ಸಲಹೆ ನೀಡಿದರು.

ಇನ್ನು ಈ ಎಲ್ಲವನ್ನು ನೋಡಿದ ನಂತರವಷ್ಟೇ ಆ ಬಗ್ಗೆ ಮಾತನಾಡಲಿ. ಭ್ರಷ್ಟ ಬಿಜೆಪಿಯ 40% ಕಮಿಷನ್‌ ಸರ್ಕಾರದ ಕಳಪೆ ಕಾಮಗಾರಿಗಳಿಗೂ ಎಎಪಿ ಸರ್ಕಾರದ ಗುಣಮಟ್ಟದ ಕಾಮಗಾರಿಗಳಿಗೂ ಇರುವ ವ್ಯತ್ಯಾಸವು ಸಿ.ಟಿ.ರವಿಯವರಿಗೆ ಅರ್ಥವಾಗುತ್ತಿಲ್ಲ ಎಂದು ಮುಕುಂದ್‌ ಗೌಡ ಹೇಳಿದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ