CrimeNEWSಸಂಸ್ಕೃತಿ

ಅನೈತಿಕ ಸಂಪರ್ಕ ಆರೋಪದ ಆಡಿಯೋ : ಶ್ರೀ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಜಿಲ್ಲೆಯ ಮಡಿವಾಳೇಶ್ವರ ಮಠದ ಶ್ರೀ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.

ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಆರೋಪದ ಬಳಿಕ ಇಬ್ಬರು ಮಹಿಳೆಯರ ಫೋನ್‌ಕಾಲ್‌ ಆಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಆಡಿಯೋನಲ್ಲಿ ಆತ್ಮಹತ್ಯೆಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಇದರಿಂದ ಮನನೊಂದು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಆ ಮಹಿಳೆಯರು ನೇಗಿನಹಾಳ ಸ್ವಾಮೀಜಿ ಹೆಸರನ್ನು ಸಹ ಉಲ್ಲೇಖಿಸಿ ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದರು ಎಂದು ಹೇಳಲಾಗಿದೆ. ಇದರಿಂದ ಸ್ವಾಮೀಜಿ ಆಘಾತಗೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ನಿನ್ನೆ ತಡ ರಾತ್ರಿವರೆಗೆ ಭಕ್ತರೊಂದಿಗೆ ಸಮಾಲೋಚನೆ ನಡೆಸಿದ ಸ್ವಾಮೀಜಿ, ನೀವೆಲ್ಲರೂ ನಮ್ಮನ್ನು ಸಂಶಯದಿಂದ ನೋಡುವಂತಾಗಿದೆ ಈ ಘಟನೆಯಿಂದ ಬದುಕಿರಬಾರದು ಎಂದೆನಿಸಿದೆ ಎಂದು ಹೇಳಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಮನನೊಂದ ನೇಗಿನಹಾಳ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ವಾಮೀಜಿ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಭಕ್ತರು ಮಠಕ್ಕೆ ದೌಡಾಯಿಸಿದ್ದಾರೆ.

ಇತ್ತ ವಿಷಯ ತಿಳಿದ ಕೂಡಲೇ ಸಿಪಿಐ ಉಳವಪ್ಪ ಸಾತೇನಹಳ್ಳಿ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಆಡಿಯೋ ಕುರಿತು ಮಠದ ಆಡಳಿತ ಮಂಡಳಿ ಪೊಲೀಸರಗೆ ದೂರು ನೀಡಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್