NEWSನಮ್ಮಜಿಲ್ಲೆರಾಜಕೀಯ

ರಾಜಕೀಯ ಜಿದ್ದಾಜಿದ್ದಿನ ನಡುವೆ ಮೈಸೂರು ಮೇಯರ್‌, ಉಪ ಮೇಯರ್‌ ಗದ್ದುಗೆ ಏರಿದ ಬಿಜೆಪಿಯ ಶಿವಕುಮಾರ್, ರೂಪಾ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಹಲವು ದಿನಗಳಿಂದ ಕುತೂಹಲ ಕೆರಳಿಸಿದ್ದ ಮೈಸೂರು ಮೇಯರ್ ಚುನಾವಣೆ ಕೊನೆಗೂ ನಡೆದಿದೆ. ರಾಜಕೀಯ ಜಿದ್ದಾಜಿದ್ದಿನ ಬಳಿಕ ಮೈಸೂರು ಮೇಯರ್ ಮತ್ತು ಉಪ ಮೇಯರ್‌ ಪಟ್ಟ ಬಿಜೆಪಿಗೆ ಒಲಿದಿದೆ.

ಮೇಯರ್ ಚುನಾವಣೆಯಲ್ಲಿ 47 ನೇ ವಾರ್ಡ್ ಸದಸ್ಯ ಬಿಜೆಪಿಯ ಶಿವಕುಮಾರ್ ಆಯ್ಕೆಯಾದರು. ಮೈಸೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ. ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಅಭ್ಯರ್ಥಿ ಕೆ.ವಿ.ಶ್ರೀಧರ್ ನಾಮಪತ್ರ ವಾಪಸ್ ಪಡೆದಿದ್ದರಿಂದ ಬಿಜೆಪಿ- ಕಾಂಗ್ರೆಸ್ ನಡುವೆ ಹಣಾಹಣಿ ಏರ್ಪಟ್ಟಿತ್ತು.

ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಹಸರತ್‌ಉಲ್ಲಾ 28 ಮತಗಳನ್ನು ಗಳಿಸಿದರು. ಬಿಜೆಪಿಯ ಶಿವಕುಮಾರ್ 47 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಈ ಮೂಲಕ ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ.

ಜೆಡಿಎಸ್‌ ಸದಸ್ಯರು ಬಿಜೆಪಿಯ ಶಿವಕುಮಾರ್ ಪರ ಮತ ಚಲಾಯಿಸಿದ್ದಾರೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ಪರಿಷತ್​ನ ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡರಿಂದ ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಒಟ್ಟಾರೆ 20 ಮತಗಳ ಅಂತರದಿಂದ ಮೇಯರ್ ಆಗಿ ಶಿವಕುಮಾರ್ ಆಯ್ಕೆಯಾಗಿದ್ದಾರೆ.

ಇನ್ನು ಮಹಾನಗರಪಾಲಿಕೆ ಮೇಯರ್ – ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ಉಪ ಮೇಯರ್ ಸ್ಥಾನ ಪಡೆಯಲಾಗದೆ ಜೆಡಿಎಸ್ ಮುಖಭಂಗ ಅನುಭವಿಸಿತು.

ಜೆಡಿಎಸ್ ಅಭ್ಯರ್ಥಿ ರೇಷ್ಮಾ ಭಾನು ನಾಮಪತ್ರ ತಿರಸ್ಕೃತವಾಯಿತು. ರೇಷ್ಮಾ ಅವರು ಸಾಮಾನ್ಯ ಕ್ಷೇತ್ರದಿಂದ ಗೆದ್ದಿದ್ದಾರೆ. ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದೆ. ಆ ಜಾತಿ ಪ್ರಮಾಣಪತ್ರ ನೀಡದಿದ್ದರಿಂದ ನಾಮಪತ್ರವನ್ನು ಕ್ರಮಬದ್ಧವಾಗಿಲ್ಲ ಎಂದು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಪ್ರಕಾಶ್ ತಿಳಿಸಿದರು. ಇದರಿಂದ ಜೆಡಿಎಸ್ ಆಘಾತ ಅನುಭವಿಸಬೇಕಾಯಿತು.

ಜಿ.ರೂಪಾ: ಜೆಡಿಎಸ್ ಬಂಡಾಯ ಅಭ್ಯರ್ಥಿ ನಿರ್ಮಲಾ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಅವರು, 27 ಮತಗಳನ್ನು ಪಡೆದರು. ಬಿಜೆಪಿಯ ಜಿ.ರೂಪಾ 45 ಮತಗಳನ್ನು ಗಳಿಸಿ ಉಪ ಮೇಯರ್ ಆಗಿ ಗೆಲುವು ಸಾಧಿಸಿದರು.‌

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ