NEWSನಮ್ಮಜಿಲ್ಲೆರಾಜಕೀಯ

ಮನುಷ್ಯತ್ವ ಇಲ್ಲದ ಪಡ್ಡೆಗಳು ಸಂಸದರಾಗಿದ್ದು ದುರಂತ – ಮುಕುಂದ ಗೌಡ

ಮಳೆಯಿಂದ ಜನ ಹೈರಾಣರಾಗಿದ್ದರೂ, ಹೋಟೆಲ್ ದೋಸೆ ಸವಿಯಲು ಆಹ್ವಾನಿಸಿದ ಸಂಸದ ತೇಜಸ್ವಿ ಸೂರ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದಲ್ಲಿ ಕಳೆದ ಕೆಲವು ದಿನಗಳಿಂದ ಪ್ರತಿದಿನ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ಭಾಗಗಳು ಕೆರೆಯಂತಾಗಿವೆ. ಒಂದೆಡೆ ಜನ ಸಂಕಷ್ಟಗಳಿಂದ ಹೈರಾಣಾಗಿದ್ದಾರೆ, ಮತ್ತೊಂದೆಡೆ ಆಡಳಿತ ಯಂತ್ರ ಕುಸಿದಿದ್ದು, ಸಮಪರ್ಕವಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ಜನರು ಟೀಕಿಸುತ್ತಿದ್ದಾರೆ.

ಇತ್ತ ಕನ್ನಡನಾಡಿಗೆ ಕಷ್ಟ ಬಂದಾಗಲೆಲ್ಲಾ ಬಿಜೆಪಿಯವರು ಸೌಜನ್ಯ ಮರೆತು,‌ ಮನುಷ್ಯತ್ವ ಇಲ್ಲದೇ ನಡೆದುಕೊಳ್ಳುತ್ತಾರೆ ಎಂಬುದನ್ನು ತೇಜಸ್ವಿ ಸೂರ್ಯ ಮತ್ತೆ ತೋರಿಸಿಕೊಟ್ಟಿದ್ದಾರೆ ಎಂದು ಆಪ್ ಯುವ ಘಟಕದ ಅಧ್ಯಕ್ಷ ಮುಕುಂದ್ ಗೌಡ ತಮ್ಮ ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಣದಲ್ಲಿ ಕಾಣಿಸುತ್ತಿರುವ ಅವರ ವಿಡಿಯೋ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, “ಬೆಂಗಳೂರಿನ ಬಹುಭಾಗ ಮಳೆಹಾನಿಯಿಂದ ತತ್ತರಿಸಿ ಹೋಗಿರುವಾಗ ಯಾವುದೋ ಹೋಟೆಲ್ ನ ಊಟ ಸವಿದು ಅದರ ಪ್ರಚಾರ ಮಾಡಲು ಹೊರಟಿರುವುದು ಅತಿರೇಕ ಮತ್ತು ಅಸಹ್ಯದ ವರ್ತನೆ ನಾಚಿಕೆಗೇಡಿನದ್ದು. ಬಿಜೆಪಿಯ ಬಾಲಿಶ ರಾಜಕಾರಣಕ್ಕೆ ಇದಕ್ಕಿಂತ ಉದಾಹರಣೆ ಬೇಕಾಗಿಲ್ಲ ಎಂದಿದ್ದಾರೆ.

ಇಡೀ ಬಿಜೆಪಿ ಶಾಸಕರು ಸಚಿವರೊಂದಿಗೆ ಸಂಸದರೂ 40% ಕಮಿಷನ್ ಫಲಾನುಭವಿಗಳಾಗಿ ಇಂದು ನಗರ ಕೊಚ್ಚಿಹೋಗಲು ಕಾರಣರಾಗಿದ್ದಾರೆ, ಇಂಥವರನ್ನು ಪಡೆದದ್ದು ಬೆಂಗಳೂರಿನ ದೌರ್ಭಾಗ್ಯ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ