NEWSಶಿಕ್ಷಣ-

ಶಿಕ್ಷಕರ ಆದರ್ಶ ಗುಣಗಳೇ ವಿದ್ಯಾರ್ಥಿಗಳಿಗೆ ಪ್ರೇರಣೆ: ಸಚಿವ ಡಾ. ಕೆ.ಸುಧಾಕರ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸುಭದ್ರ ಸಮಾಜ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾದದು. ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ವಿಶೇಷ ಸ್ಥಾನ-ಮಾನಗಳಿದ್ದು, ಅವರ ಮಾತುಗಳನ್ನು ಗ್ರಾಮೀಣ ಜನರು ಮತ್ತು ವಿದ್ಯಾರ್ಥಿಗಳು ಕೇಳುತ್ತಾರೆ. ಆದ್ದರಿಂದ ಶಿಕ್ಷಕರು ಆದರ್ಶ ಗುಣಗಳಿಂದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿ ಮಾದರಿಯಾಗಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದೊಂದಿಗೆ ಭಾರತರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ದೇವನಹಳ್ಳಿ ಟೌನ್‌‌ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಇಂದು ಏರ್ಪಡಿಸಲಾದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಜಿಲ್ಲೆಯ ಉತ್ತಮ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿ ಮಾತನಾಡಿದರು.

ಮಹಾಭಾರತದ ದ್ರೋಣಾಚಾರ್ಯ ಏಕಲವ್ಯ ಗುರು ಶಿಷ್ಯರ ಸಂಬಂಧದಂತೆ ಪರಸ್ಪರ ಒಬ್ಬರಿಗೆ ಒಬ್ಬರ ಮೇಲೆ ನಂಬಿಕೆ ಮತ್ತು ವಿಶ್ವಾಸ ಇಂದಿನ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕಾಣಬೇಕಾಗಿದೆ ಎಂದರು.

ಗುರು ಮತ್ತು ವಿದ್ಯಾರ್ಥಿಗಳ ನಡುವೆ ಶಾಶ್ವತವಾದ ಪ್ರೀತಿ, ವಿಶ್ವಾಸ ಮತ್ತು ನಂಬಿಕೆಗಳಿಂದ ಕೂಡಿದ ಸಂಬಂಧ ಏರ್ಪಡಬೇಕು ಎಂದರಲ್ಲದೆ ನಾನು ಕೂಡ ಶಿಕ್ಷಕರ ಕುಟುಂಬದಿಂದ ಬಂದಿದ್ದು, ನಮ್ಮ ತಂದೆಯವರು ಶಿಕ್ಷಕರಾಗಿದ್ದರು. ಆದ್ದರಿಂದ ಶಿಕ್ಷಕರ ಸ್ಥಿತಿಗತಿ ಮತ್ತು ಸಮಸ್ಯೆಗಳ ಪರಿಚಯವಿದೆ. ಈ ಹಿಂದಿನ ಕಾಲದ ಶಿಕ್ಷಕರಿಗಿಂತ ಸ್ವಾಭಿಮಾನದಿಂದ ಬದುಕುವಷ್ಟು ಪ್ರಸ್ತುತ ಪರಿಸ್ಥಿತಿ ಉತ್ತಮ ಮಟ್ಟದಲ್ಲಿ ಸುಧಾರಿಸಿದೆ ಎಂದು ಹೇಳಿದರು.

ಒಂದು ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದ್ದು, ದೇಶದ ಬುನಾದಿ ಕಟ್ಟುವ ಶಿಕ್ಷಕರ ಸಮಸ್ಯೆಗಳಿಗೆ ನಾವು ಮೊದಲು ಆದ್ಯತೆ ನೀಡಬೇಕು. ಹಳ್ಳಿಗಾಡಿನ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದಿದ್ದರೂ ಶಿಕ್ಷಕರು ಮಕ್ಕಳಿಗೆ ಕಲಿಸುವ ಆಸಕ್ತಿಯನ್ನು ಕುಗ್ಗಿಸಿಕೊಂಡಿಲ್ಲ. ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದರ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡುತ್ತಿರುವುದು ಸಂತಸದ ವಿಷಯವಾಗಿದೆ. ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದರು.

ಒಬ್ಬ ಶಿಕ್ಷಕ ದೇಶದ ರಾಷ್ಟ್ರಪತಿ ಆಗಬಹುದು ಎಂಬುದನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರು ತೋರಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಮಕ್ಕಳನ್ನು ಉತ್ತಮ ಪ್ರಜೆಗಳಾನ್ನಾಗಿಸುವ ಪಾತ್ರ ಶಿಕ್ಷಕರ ಮೇಲಿದೆ. ಶಿಕ್ಷಕರು ಮಕ್ಕಳ ಅಭಿವೃದ್ಧಿಗಾಗಿ ಹಾಗೂ ಅವರ ಏಳಿಗಾಗಿ ಕೆಲಸ ಮಾಡುತ್ತಿದ್ದಾರೆ. ದೇಶದ ಮೂಲೆ ಮೂಲೆಗಳಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ದೇಶದಲ್ಲಿ ಶಿಕ್ಷಕರ ಕಾರ್ಯ ಸಾಕಷ್ಟು ಮಹತ್ವ ಪಡೆದಿದೆ ಹಾಗೂ ಈ ಮೊದಲು ಶಿಕ್ಷಣ ಕೇವಲ ಕಲಿಕೆಗೆ ಮಾತ್ರ ಸೀಮಿತವಾಗಿತ್ತು. ಜಾಗತೀಕರಣದ ನಂತರ ವಿಶ್ವದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯೂ ವಿಶ್ವ ಮಾನವನಾಗಿ ಬೆಳೆಯಬಹುದು. ಯಾವುದೇ ದೇಶದ ನಾಗರಿಕರಾಗಿ ಬದುಕಲು ಜ್ಞಾನವನ್ನು ಸಮರ್ಪಣೆ ಮಾಡಬಹುದು. ಶಿಕ್ಷಕರ ನಿಸ್ವಾರ್ಥಭಾವ ಶ್ಲಾಘನೀಯವಾದದ್ದು ಎಂದರು.

ಕೋವಿಡ್ ಸಂಕಷ್ಟದ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ದಾಖಲಾತಿ ಸಂಖ್ಯೆ ಹೆಚ್ಚಾಗಿದೆ ಅದಕ್ಕೆ ಮುಖ್ಯ ಕಾರಣ ನಮ್ಮ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿರುವ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ಮತ್ತು ಪಠ್ಯೇತರ ಚಟುವಟಿಕೆಗಳು ಪೋಷಕರನ್ನು ಗಮನ ಸೆಳೆಯಿತ್ತಿದೆ, ಕರೋನಾ ವೈರಾಣುವಿನಿಂದಾಗಿ ಜನತೆ ಹೈರಾಣಾಗಿದ್ದು, ಪೋಷಕರು ಆರ್ಥಿಕ ಹಿನ್ನಡೆಯಿಂದ ನಮ್ಮ ಸರ್ಕಾರಿ ಶಾಲೆಗಳತ್ತ ಒಲವು ತೋರುತ್ತಿರುವುದು ಖುಷಿಯ ವಿಷಯವಾಗಿದೆ ಎಂದರು.

ಶಿಕ್ಷಣ ಕೇವಲ ವ್ಯಕ್ತಿಯನ್ನು ಪರಿವರ್ತನೆ ಮಾಡುವುದು ಮಾತ್ರವಲ್ಲದೇ, ರಾಷ್ಟ್ರ ನಿರ್ಮಾಣದಲ್ಲಿಯೂ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ. ಸಮಾಜದಲ್ಲಿ ಗುರುವಿನ ಬಗ್ಗೆ ಹೆಚ್ಚಿನ ಗೌರವಿದೆ. ಗುರಿವಿನ ಬೋಧನೆ, ಮೌಲ್ಯಗಳು, ಸಂಸ್ಕಾರ ಹಾಗೂ ಜೀವನ ಪದ್ಧತಿ ಅನೇಕ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರಲಿದೆ. ವಿದ್ಯಾರ್ಥಿಗಳು ಮತ್ತು ಸಮಾಜ ಶಿಕ್ಷಕರಿಗೆ ಗುರುವಿನ ಸ್ಥಾನ ನೀಡಿ, ಬಹಳಷ್ಟು ಗೌರವ ಹಾಗೂ ನಿರೀಕ್ಷೆ ಇಟ್ಟುಕೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 2022-23 ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದಂತಹ ಕಿರಿಯ ಪ್ರಾಥಮಿಕ ಶಾಲಾ ವಿಭಾಗದ 4 ಶಿಕ್ಷಕರಿಗೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದ 4 ಶಿಕ್ಷಕರಿಗೆ ಹಾಗೂ ಪ್ರೌಢಶಾಲಾ ವಿಭಾಗದ 6 ಮುಖ್ಯ ಶಿಕ್ಷಕರನ್ನು ಸನ್ಮಾನಿಸಲಾಯಿತು.

ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಡಿ.ಗೋಪಮ್ಮ, ದೇವನಹಳ್ಳಿ ಪುರಸಭೆ ಉಪಾಧ್ಯಕ್ಷರಾದ ಕೆ.ಗೀತಾ ಶ್ರೀಧರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಆರ್.ಲತಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣಪ್ಪ, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತಕುಮಾರ್ ಸೇರಿದಂತೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಶ್ರೀಕಂಠ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜೇಗೌಡ ಸೇರಿದಂತೆ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC