CrimeNEWSನಮ್ಮಜಿಲ್ಲೆನಮ್ಮರಾಜ್ಯ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ, ಸಚಿವ ಉಮೇಶ್ ಕತ್ತಿ ಇನ್ನಿಲ್ಲ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅರಣ್ಯ ಸಚಿವರು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಮತ್ತು ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿ ಇದ್ದ ಉಮೇಶ್‌ ಕತ್ತಿ ಇನ್ನಿಲ್ಲ.

ಹೃದಯಾಘಾತದಿಂದ ಆಸ್ಪತ್ರೆ ಸೇರಿದ್ದ ಸಚಿವ ಉಮೇಶ್‌ ಕತ್ತಿ (61) ಮಂಗಳವಾರ ರಾತ್ರಿ 11ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. ಡಾಲರ್ಸ್‌ ಕಾಲೋನಿ ನಿವಾಸದಲ್ಲಿದ್ದಾಗ ಅವರಿಗೆ ರಾತ್ರಿ 10 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನಹೊಂದಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

1961 ಮಾರ್ಚ್‌ 14ರಂದು ಬೆಳಗಾವಿ ಜಿಲ್ಲೆಯಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಕತ್ತಿ, ರಾಜಕಾರಣಿ, ಕೃಷಿಕ, ಉದ್ಯಮಿ ಆಗಿಯೂ ಸಾರ್ಥಕ ಜೀವನ ನಡೆಸಿದ್ದಾರೆ. ಉಮೇಶ್‌ ಕತ್ತಿ ಅವರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಉಮೇಶ್‌ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಸಿಎಂ ಬೊಮ್ಮಾಯಿ ಸ್ಥಳಕ್ಕೆ ಆಗಮಿಸಿದರು.

ಸಚಿವ ಉಮೇಶ್ ಕತ್ತಿ 9 ಬಾರಿ ಚುನಾವಣೆಗೆ ಸ್ಪರ್ಧಿಸಿ, 8 ಬಾರಿ ಗೆಲುವು ಕಂಡಿದ್ದರು. 800 ಮತಗಳ ಅಂತರದಲ್ಲಿ ಒಂದು ಬಾರಿ ಸೋತಿದ್ದರು. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ಆರು ಪಕ್ಷಗಳನ್ನು ಬದಲಿಸಿದ್ದಾರೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ನಾನು ಸಹ ಮುಖ್ಯಮಂತ್ರಿಯಾಗುತ್ತೇನೆ ಎಂಬ ಹೇಳಿಕೆಗಳಿಂದ ಪ್ರಸಿದ್ಧಿ ಪಡೆದಿದ್ದರು. 1996 ರಲ್ಲಿ ಮೊದಲ ಬಾರಿಗೆ ಸಚಿವಸ್ಥಾನ ಅಲಂಕರಿಸಿದ ಕತ್ತಿ ಅಂದು ಮೊದಲಿಗೆ ಸಕ್ಕರೆ ಸಚಿವ ಖಾತೆಯ ಹೊಣೆ ಹೊತ್ತಿದ್ದರು.

ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿರುವ ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದರು. ಮೊದಲ ಪ್ರಯತ್ನದಲ್ಲೇ ಗೆಲುವು ಕಂಡರು.

1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಬಾರಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದರು.

2004ರಲ್ಲಿ ಕಾಂಗ್ರೆಸ್‌ಗೆ ಬಂದ ಉಮೇಶ್ ಕತ್ತಿ ಚುನಾವಣೆಯಲ್ಲಿ ಸೋಲು ಕಂಡರು. ರಾಜಕೀಯ ಜೀವನದಲ್ಲಿ ಇದೊಂದೇ ಚುನಾವಣೆಯಲ್ಲಿ ಉಮೇಶ್ ಕತ್ತಿ ಸೋಲು ಕಂಡಿರುವುದು. 2008ರಲ್ಲಿ ಜೆಡಿಎಸ್ ಸೇರಿದರು, ಗೆಲುವು ಕಂಡರು.

ಬಳಿಕ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು. ಶಾಸಕರಾಗಿದ್ದ ತಂದೆ ವಿಶ್ವನಾಥ್ ಕತ್ತಿ ನಿಧನದಿಂದಾಗಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ 1996ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾದರು. 2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾದರು.

2010ರಲ್ಲಿ ಕೃಷಿ ಸಚಿವರಾದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಿಕ್ಕಿತು. 2021ರಲ್ಲಿಯೂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಆಹಾರ ಮತ್ತು ಅರಣ್ಯ ಸಚಿವರಾಗಿದ್ದರು. ಸಹೋದರ ರಮೇಶ್ ಕತ್ತಿ ಸಹ ರಾಜಕೀಯದಲ್ಲಿದ್ದು, ಮಾಜಿ ಸಂಸದರು.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC