CrimeNEWSನಮ್ಮಜಿಲ್ಲೆನಮ್ಮರಾಜ್ಯ

ಇಂದು ಬಿಎಂಟಿಸಿ ಮತ್ತೊಬ್ಬ ಚಾಲಕ ಆತ್ಮಹತ್ಯೆ – ವಾರ ಕಳೆಯುವಷ್ಟರಲ್ಲಿ ನಾಲ್ವರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಎಂಟಿಸಿಯಲ್ಲಿ ವಾರದ ಹಿಂದಷ್ಟೇ 24ಗಂಟೆಯೊಳಗೆ ಮೂವರು ಚಾಲಕರು ಆತ್ಮಹತ್ಯೆ ಮಾಡಿಕೊಂಡಿದ್ದರು, ಆ ಸುದ್ದಿ ಮಾಸುವ ಮುನ್ನವೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಚ್‌ಆರ್‌ ಲೇಔಟ್‌ ಘಟಕ -25 ರ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಹೆಬ್ಬಗೋಡಿಯಲ್ಲಿ ನಡೆದಿದೆ.

ಚಾಲಕ ಈಶಣ್ಣ.

ಚಾಲಕ ಈಶಣ್ಣ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು. ಇದರಿಂದ ನಿಗಮದ ಚಾಲನಾ ಸಿಬ್ಬಂದಿ ಆತಂಕಕ್ಕೆ ಸಿಲುಕಿದ್ದಾರೆ.

ಆತ್ಮಹತ್ಯೆಗೆ ಇನ್ನು ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಘಟಕ ವ್ಯವಸ್ಥಾಪಕರು ಸೇರಿದಂತೆ ಸಂಸ್ಥೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚೆಗೆ ಬನಶಂಕರಿ ಘಟಕ 20ರ ಚಾಲಕ, ಚನ್ನಸಂದ್ರ ಘಟಕ -21ರ ಚಾಲಕ, ಜಿಗಣಿ ಘಟಕ 27ರ ಚಾಲಕ, ಹೀಗೆ ಮೂವರು ಚಾಲಕರು ಅಧಿಕಾರಿಗಳ ಕಿರುಕುಳದಿಂದ  ಒತ್ತಡಕ್ಕೆ ಒಳಗಾಗಿ  ಮೃತಪಟ್ಟಿದ್ದರು.

ಇನ್ನು ಆಗಸ್ಟ್‌ ಕೊನೆಯ ವಾರ 24 ಗಂಟೆಯಲ್ಲಿ ಬಿಎಂಟಿಸಿಯಲ್ಲಿ ಅಧಿಕಾರಿಗಳ ಕಿರುಕುಳದಿಂದ ಮೂವರು ನೌಕರರು ಜೀವಕಳೆದು ಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಒಟ್ಟಾರೆ ಸಾರಿಗೆ ನಿಗಮಗಳಲ್ಲಿ ಚಾಲನಾ ಸಿಬ್ಬಂದಿಯ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವುದು ತುಂಬ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಸರ್ಕಾರ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳು ಎಚ್ಚರ ವಹಿಸದಿರುವುದು ನೌಕರರು ಖಿನ್ನತೆಗೆ ಒಳಗಾಗುವುದಕ್ಕೂ ಕಾರಣವಾಗುತ್ತಿದೆ. ಹೀಗಾಗಿ ಇನ್ನಾದರೂ ಚಾಲನಾ ಸಿಬ್ಬಂದಿಗೆ ಸಂಬಂಧಪಟ್ಟವರು ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಹಲವು ನೌಕರರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...