NEWSಶಿಕ್ಷಣ-

ರಾಜ್ಯದಲ್ಲಿ ನಿಯಮ ಪಾಲನೆ ಮಾಡದೆ ನಡೆಯುತ್ತಿರುವ ಖಾಸಗಿ ಶಾಲೆಗಳಿಗೆ ಶಾಶ್ವತ ಬೀಗ ಬೀಳೋದು ಪಕ್ಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಶಿಕ್ಷಣ ಇಲಾಖೆಯಲ್ಲೂ 40 ಪರ್ಸೆಂಟ್ ಕಮಿಷನ್ ಆರೋಪ ಕೇಳಿ ಬಂದ ಬೆನ್ನಲ್ಲೇ ಎಚ್ಚತ್ತ ರಾಜ್ಯ ಸರ್ಕಾರ ಅನಧಿಕೃತ ಶಾಲೆಗಳ ಮೇಲೆ ಪ್ರಹಾರ ನಡೆಸಿದೆ. ಅನಧಿಕೃತ ಖಾಸಗಿ ಶಾಲೆಗಳ ತೆರವಿಗಾಗಿ ಆಪರೇಷನ್ ಕ್ಲೀನ್ ಅಭಿಯಾನ ಪಾರ್ಟ್-2 ಶುರು ಮಾಡಿದೆ.

ಈ ಮೂಲಕ ರಾಜ್ಯದಲ್ಲಿ ಇನ್ಮುಂದೆ ಅನಧಿಕೃತ ಖಾಸಗಿ ಶಾಲೆಗಳಿಗೆ ಬ್ರೇಕ್ ಬೀಳೋದು ಪಕ್ಕವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೇ ಅನಧಿಕೃತ ಖಾಸಗಿ ಶಾಲೆಗಳನ್ನು ಪಟ್ಟಿ ಮಾಡಲು ಅಭಿಯಾನ ಶುರು ಮಾಡಿತ್ತು. ಇದೀಗ ಶಿಕ್ಷಣ ಇಲಾಖೆ ರಿಲೀಸ್ ಮಾಡಿರೋ ಮಾನದಂಡಗಳು ಇದ್ರೆ ಮಾತ್ರ ಆ ಶಾಲೆಗಳು ಅಧಿಕೃತ ಎಂದು ಪರಿಗಣಿಸಲಾಗುತ್ತದೆ. ಸರ್ಕಾರದ ನಿಯಮ ಪಾಲನೆ ಮಾಡದೇ ಇರೋ ಶಾಲೆಗಳಿಗೆ ಬೀಗ ಬಿಳೋದು ಖಚಿತವಾಗಿದೆ.

ಇನ್ನು ಪ್ರತಿ ಜಿಲ್ಲೆಗಳಲ್ಲಿ ಶಾಲೆಗಳ ಮಾಹಿತಿ ಸಂಗ್ರಹಕ್ಕೆ ಬಿಇಒ, ಡಿಡಿಪಿಐಗಳಿಗೆ ಟಾಸ್ಕ್ ನೀಡಲಾಗಿದ್ದು, ಅನಧಿಕೃತ ಶಾಲೆಗಳನ್ನು ಪಟ್ಟಿ ಮಾಡಿ ಕೊಡುವಂತೆ ಮಾನದಂಡ ರಿಲೀಸ್ ಮಾಡಿದೆ.

ಯಾವ ಶಾಲೆಗಳು ಅನಧಿಕೃತ ಆಗುತ್ತವೆ?: ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 30, 31 ಅಡಿ ನೋಂದಣಿ ಪಡೆಯದ ಶಾಲೆಗಳು. ಶಾಲಾ ಮಾನ್ಯತೆಯನ್ನು 1 ವರ್ಷಕ್ಕಿಂತ ಹೆಚ್ಚು ನವೀಕರಣ ಮಾಡದಿರುವುದು. ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಕಲಂ 36, ಆರ್‌ಟಿಇ ಕಾಯ್ದೆ 2009 ಅಡಿಯ ಮಾನ್ಯತೆ ಪಡೆಯದ ಶಾಲೆಗಳು.

ಪೂರ್ವಾನುಮತಿ ಇಲ್ಲದೆ ಸ್ಥಳಾಂತರ ಮಾಡಿದ ಶಾಲೆಗಳು. ಅನಧಿಕೃತವಾಗಿ ಬೇರೆಯವರಿಗೆ ಹಸ್ತಾಂತರ ಮಾಡಿದ ಶಾಲೆಗಳು. ಇಲಾಖೆಯಿಂದ ನೋಂದಣಿ ಪಡೆಯದ ಉಪಶಾಲೆಗಳು. ಹೆಚ್ಚುವರಿ ತರಗತಿಯನ್ನು ಅನುಮತಿ ಪಡೆಯದೇ ಪ್ರಾರಂಭಿಸಿರುವ ಶಾಲೆಗಳು.

ಅನುಮತಿ ಪಡೆದ ನಂತರ ಮತ್ತೊಂದು ಮಾಧ್ಯಮದಲ್ಲಿ ಪಠ್ಯ ಬೋಧನೆ ಮಾಡುವುದು. ಸರ್ಕಾರ ಅನುಮತಿ ನೀಡಿದ ಪಠ್ಯಕ್ರಮ ಬದಲಾಗಿ ಬೇರೆ ಪಠ್ಯ ಬೋಧನೆ ಮಾಡುವ ಶಾಲೆಗಳು. ಶಾಲೆ ಸ್ಥಾಪನೆಗೆ ಅನುಮತಿ ಕೊಟ್ಟ ಜಾಗದಿಂದ ಅನುಮತಿ ಪಡೆಯದೇ ಸ್ಥಳಾಂತರ ಮಾಡಿದ ಶಾಲೆಗಳು.

ಅನುಮತಿ ಪಡೆಯದೇ ಬೇರೊಂದು ಆಡಳಿತ ಮಂಡಳಿ ನಡೆಸುವುದು. ಬೇರೆ ಪಠ್ಯಕ್ರಮದ ಅನುಮತಿ ಪಡೆದ ಬಳಿಕವೂ ರಾಜ್ಯ ಪಠ್ಯಕ್ರಮ ಬೋಧನೆ ಮಾಡುವ ಶಾಲೆಗಳು ಅನಧಿಕೃತ ಆಗುತ್ತವೆ ಎಂದು ತಿಳಿಸಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ