NEWSನಮ್ಮಜಿಲ್ಲೆರಾಜಕೀಯ

ರಾಜಕಾಲುವೆ ಅಭಿವೃದ್ಧಿಯಲ್ಲಿ ಅಕ್ರಮ: ಲಿಂಬಾವಳಿ ವಿರುದ್ಧ ತನಿಖೆಗೆ ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹದೇವಪುರ ಕ್ಷೇತ್ರದಲ್ಲಿ 14.95 ಕೋಟಿ ರೂಪಾಯಿ ಮೊತ್ತದ ರಾಜಕಾಲುವೆ ಕಾಮಗಾರಿ ನಡೆದಿದ್ದರೂ ಕ್ಷೇತ್ರದ ಹಲವು ಭಾಗ ಮುಳುಗಡೆಯಾಗಿರುವುದಕ್ಕೆ ಶಾಸಕ ಅರವಿಂದ್‌ ಲಿಂಬಾವಳಿ ಉತ್ತರ ನೀಡಬೇಕೆಂದು ಮಹದೇವಪುರ ಕ್ಷೇತ್ರದ ಆಮ್‌ ಆದ್ಮಿ ಪಾರ್ಟಿ ಅಧ್ಯಕ್ಷ ಅಶೋಕ್‌ ಮೃತ್ಯುಂಜಯ ಆಗ್ರಹಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ನೇರಪ್ರಸಾರವಾಗಿ ಮಾತನಾಡಿದ ಅಶೋಕ್‌ ಮೃತ್ಯುಂಜಯ, “2020ರಲ್ಲಿ ಶಾಸಕ ಅರವಿಂದ ಲಿಂಬಾವಳಿಯವರು 14.95 ಕೋಟಿ ರೂಪಾಯಿ ಮೊತ್ತದ ಹಲವು ರಾಜಕಾಲುವೆ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು.

ಇದಾಗಿ ಕೇವಲ ಎರಡೇ ವರ್ಷಗಳಲ್ಲಿ ಕ್ಷೇತ್ರದ ಹಲವು ರಸ್ತೆಗಳು ಮುಳುಗಡೆಯಾಗಿ, ಮನೆಗಳಿಗೆ ನೀರು ನುಗ್ಗಿದೆ. ಕಾಮಗಾರಿಗಳಿಗೆ ಬಿಡುಗಡೆಯಾಗಿದ್ದ ಕೋಟ್ಯಂತರ ರೂಪಾಯಿ ಯಾರ ಜೇಬು ಸೇರಿದೆ ಎಂಬ ಪ್ರಶ್ನೆಯು ಕ್ಷೇತ್ರದ ಜನರನ್ನು ಕಾಡುತ್ತಿದೆ. ಇದಕ್ಕೆ ಲಿಂಬಾವಳಿ ಉತ್ತರಿಸಬೇಕಿದೆ ಎಂದು ಒತ್ತಾಯಿಸಿದರು.

ಲಿಂಬಾವಳಿ ನೇತೃತ್ವದಲ್ಲಿ ಕಳೆದ ಎರಡು ವರ್ಷಗಳಲ್ಲಿ ನಡೆದ ರಾಜಕಾಲುವೆ ಕಾಮಗಾರಿಗಳ ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಬಹುತೇಕ ಕಡೆಗಳಲ್ಲಿ ರಾಜಕಾಲುವೆಗಳು ಒತ್ತುವರಿಯಾದರೂ ಶಾಸಕ ಲಿಂಬಾವಳಿ ಜಾಣಕುರುಡು ತೋರಿದ್ದಾರೆ.

ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡ ಪ್ರಭಾವಿಗಳು ಹಾಗೂ ಶಾಸಕ ಲಿಂಬಾವಳಿ ನಡುವೆ ಯಾವ ರೀತಿಯ ಒಪ್ಪಂದವಾಗಿದೆ ಎಂದು ತಿಳಿಯುವ ಹಕ್ಕು ಜನಸಾಮಾನ್ಯರಿಗೆ ಇದೆ. ಲಿಂಬಾವಳಿಯವರು ಇನ್ನಾದರೂ ರಾಜಕಾಲುವೆ ಒತ್ತುವರಿ ಕುರಿತು ಮಾತನಾಡುವ ಧೈರ್ಯ ತೋರಲಿ” ಎಂದು ಅಶೋಕ್‌ ಮೃತ್ಯುಂಜಯ ಸವಾಲು ಹಾಕಿದರು.

ಯಮಲೂರು ಕೋಡಿಯಿಂದ ರಾಜಕಾಲುವೆ ಅಭಿವೃದ್ಧಿಗೆ 9 ಕೋಟಿ ರೂ, ಚೌಳಕೆರೆ ಕೋಡಿ ಸಮೀಪದ ರಾಜಕಾಲುವೆ ಅಭಿವೃದ್ಧಿಗೆ 1 ಕೋಟಿ ರೂ, ಚೈತನ್ಯ ಶಾಲೆ ರಸ್ತೆ ಸಮೀಪದ ರಾಜಕಾಲುವೆ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಸೇರಿದಂತೆ ಒಟ್ಟು 12 ಕಾಮಗಾರಿಗಳಿಗೆ 14.95 ಕೋಟಿ ರೂ. ಖರ್ಚು ಮಾಡಿರುವ ಬಗ್ಗೆ ಸಮಗ್ರ ತನಿಖೆಯಾಗಬೇಕು. ಬೆಂಗಳೂರಿನ ರಾಜಕಾಲುವೆಗಳಿಗೆ ಸರ್ಕಾರ ಎಷ್ಟು ಹಣ ಖರ್ಚು ಮಾಡಿದೆ ಎಂಬ ಬಗ್ಗೆ ಆಮ್‌ ಆದ್ಮಿ ಪಾರ್ಟಿಯು ಮಾಹಿತಿಯನ್ನು ಬಿಡುಗಡೆ ಮಾಡಿ ಸರ್ಕಾರವನ್ನು ಪ್ರಶ್ನಿಸಲಿದೆ ಎಂದು ಅಶೋಕ್‌ ಮೃತ್ಯುಂಜಯ ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು