NEWSದೇಶ-ವಿದೇಶರಾಜಕೀಯ

ʼಪರ್ಯಾಯ ರಾಜಕೀಯʼ ಕೂಟಕ್ಕೆ ಅಡಿಗಲ್ಲು: ತೆಲಂಗಾಣ ಸಿಎಂ ಕೆಸಿಆರ್‌ ಭೇಟಿಯಾದ ಮಾಜಿ ಸಿಎಂ ಎಚ್‌ಡಿಕೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್‌: 2023ರ ಕರ್ನಾಟಕದ ವಿಧಾನಸಭೆ ಚುನಾವಣೆ ಹಾಗೂ ʼವಿಜಯದಶಮಿʼಗೆ ರಾಷ್ಟ್ರ ಮಟ್ಟದಲ್ಲಿ ಪರ್ಯಾಯ ರಾಜಕೀಯ ಶಕ್ತಿಗೆ ಅಂಕುರಾರ್ಪಣೆ ಮಾಡುವ ಬಗ್ಗೆ ಹೆಚ್ಚು ಒತ್ತು ಕೊಟ್ಟು ಹಿರಿಯರಾದ ಕೆಸಿಆರ್‌ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರನ್ನು ಹೈದರಾಬಾದ್‌ನ ಸಿಎಂ ಕಚೇರಿ ʼಪ್ರಗತಿ ಭವನʼದಲ್ಲಿ ಭೇಟಿಯಾಗಿ ಅತ್ಯಂತ ಮಹತ್ವದ ಸ್ನೇಹಪೂರ್ವಕ ಮಾತುಕತೆ ನಡೆಸಲಾಯಿತು ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಕರ್ನಾಟಕ, ತೆಲಂಗಾಣ ರಾಜ್ಯಗಳ ರಾಜಕೀಯ ಸ್ಥಿತಿಗತಿಗಳ ಕುರಿತು ಹಾಗೂ ಸದ್ಯದ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಯಿತು.

ರಾಷ್ಟ್ರ ರಾಜಕಾರಣಕ್ಕೆ ಪರಿಣಾಮಕಾರಿ ತಿರುವು ನೀಡಿ, ರಾಷ್ಟ್ರೀಯ ಪಕ್ಷಗಳಿಗೆ ಹೊರತಾದ ರೈತ, ಕಾರ್ಮಿಕ, ದೀನದಲಿತ ಒಟ್ಟಾರೆ ಶ್ರೀಸಾಮಾನ್ಯನ ಪರವಾದ ದನಿಯುಳ್ಳ ʼಪರ್ಯಾಯ ರಾಜಕೀಯʼ ಕೂಟ ರಚಿಸುವ ತಮ್ಮ ಮನದಿಂಗಿತವನ್ನು ನನ್ನೊಂದಿಗೆ ಮುಕ್ತವಾಗಿ ಹಂಚಿಕೊಂಡರು ಎಂದು ವಿವರಿಸಿದ್ದಾರೆ.

ಇನ್ನು ಕೆಸಿಆರ್‌ ಅವರಿಗೆ ಶುಭ ಹಾರೈಸಿದೆ ಹಾಗೂ ಜತೆಯಲ್ಲಿ ನಿಲ್ಲುವುದಾಗಿ ಭರವಸೆಯನ್ನೂ ನೀಡಿದೆ. ಈ ವೇಳೆ ಅವರು ನನ್ನಡೆಗೆ ತೋರಿದ ಆದರಾಭಿಮಾನ, ವಾತ್ಸಲ್ಯ, ವಿಶ್ವಾಸಕ್ಕೆ ನಾನು ಮಾರು ಹೋಗಿದ್ದೇನೆ ಎಂದು ಹೇಳಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ