NEWSಶಿಕ್ಷಣ-ಸಂಸ್ಕೃತಿ

ದಸರಾ ರಜೆ ಪರಿಷ್ಕರಿಸಲು ಡಿಸಿ, ಸಿಇಒಗಳಿಗೆ ಅಧಿಕಾರ: ಸಚಿವ ನಾಗೇಶ್

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದಸರಾ ಹಬ್ಬಕ್ಕೆ ಪೂರಕವಾಗುವಂತೆ ರಾಜ್ಯಾದ್ಯಂತ ದಸರಾ ರಜೆಯನ್ನು ಪರಿಷ್ಕರಣೆ ಮಾಡಿದ್ದು, ಸೆ.26ರಿಂದ ಅ.10ರವರೆಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ಅಲ್ಲದೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವ ಶಿಕ್ಷಣ ಸಚಿವ ನಾಗೇಶ್ ಸ್ಥಳೀಯ ಮಟ್ಟದ ಮನವಿ ಮೇರೆಗೆ ದಸರಾ ರಜೆಯನ್ನುಆಯಾಯ ಜಿಲ್ಲೆಗಳಿಗೆ ಪೂರಕವಾಗುವಂತೆ ಪರಿಶೀಲಿಸಲಾಗಿದ್ದು, ಪ್ರಕಟಣೆ ಹೊರಡಿಸುವಂತೆ ಸೂಚಿಸಿದ್ದಾರೆ. ಆದರೆ ಅ.2ರ ಗಾಂಧಿ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸಲು ಸೂಚಿಸಿದ್ದಾರೆ.

ಶಿಕ್ಷಣ ಸಚಿವರ ಟಿಪ್ಪಣಿಯಲ್ಲಿ ಏನಿದೆ: ಪ್ರತಿ ವರ್ಷದಂತೆ ಈ ವರ್ಷದ ರಾಜ್ಯದ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿಪಡಿಸಿ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸಲಾಗಿರುತ್ತದೆ. ಅದರಂತೆ ಈ ಮಾರ್ಗಸೂಚಿಯನ್ವಯ ಶಾಲಾರಂಭ, ಶಾಲಾ ಮುಕ್ತಾಯದ ದಿನ, ದಸರೆ, ಬೇಸಿಗೆ ರಜೆ ಕಿರು ಪರೀಕ್ಷೆ, ಪರೀಕ್ಷೆ ನಡೆಸಬೇಕಾದ ಅವಧಿ ಇತ್ಯಾದಿ ವಿವರಗಳನ್ನು ಒಳಗೊಂಡಿರುತ್ತದೆ.

ಕೆಲವು ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ ಮಾರ್ಪಾಡು ಅಗತ್ಯವಿದ್ದಲ್ಲಿ, ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬದಲಾವಣೆಗಳನ್ನು ಮಾಡಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲೆಯಲ್ಲಿ ದಸರೆ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ. 26. ರಿಂದ ಅ.10 ರವರೆಗೆ ದಸರೆ ರಜೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವ ಹಾಗೂ ಅ.2 ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸುವ ಷರತ್ತಿನ ಮೇರೆಗೆ ರಜೆಯನ್ನು ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತಿಳಿಸಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ