NEWSನಮ್ಮಜಿಲ್ಲೆಸಂಸ್ಕೃತಿ

ನಾಡ ಹಬ್ಬ ದಸರಾ ಹಿನ್ನೆಲೆ ನೂತನ ಮೇಯರ್‌ ನಗರ ಪ್ರದಕ್ಷಿಣೆ : ರಸ್ತೆ, ಫುಟ್‌ಪಾತ್‌ ದುರಸ್ತಿಗೆ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾ ಮಹೋತ್ಸವ ಹತ್ತಿರವಾಗುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗುವ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗ ಅಚ್ಚುಕಟ್ಟಾಗಿರುವಂತೆ ನೋಡಿಕೊಳ್ಳಲು ನೂತನ ಮೇಯರ್‌ ಶಿವಕುಮಾರ್ ಬೆಳ್ಳಂಬೆಳಗ್ಗೆ ನಗರ ಪ್ರದಕ್ಷಿಣೆ ಮಾಡಿ, ಅವ್ಯವಸ್ಥೆಗಳನ್ನು ನೋಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.

ಫೈವ್‌ಲೈಟ್ ವೃತ್ತದಿಂದ ಮಂಗಳವಾರ ಬೆಳಗ್ಗೆ ನಗರದ ಪ್ರದಕ್ಷಿಣೆ ಆರಂಭಿಸಿದ ಮೇಯರ್‌, ವೃತ್ತದಲ್ಲಿ ಮ್ಯಾನ್‌ಹೋಲ್ ಒಡೆದು ರಸ್ತೆಗೆ ನೀರು ಹರಿಯುತ್ತಿರುವುದನ್ನು ಕಂಡು ಸಿಡಿಮಿಡಿಗೊಂಡರು. ತಕ್ಷಣವೇ ಮ್ಯಾನ್‌ಹೋಲ್ ದುರಸ್ತಿಪಡಿಸಿ ಲೀಕ್ ಆಗುವುದನ್ನು ತಪ್ಪಿಸಬೇಕು ಎಂದು ಸೂಚಿಸಿದರು.

ಇನ್ನು ಹೃದಯ ಭಾಗದಲ್ಲಿ ಸ್ವಚ್ಛತೆ ಕಾಪಾಡದಿರುವುದು ಹಾಗೂ ಮ್ಯಾನ್‌ಹೋಲ್ ಮುಚ್ಚದಿರುವುದನ್ನು ಕಂಡು ಯುಜಿಡಿ, ಪರಿಸರ ಇಂಜಿನಿಯರ್‌ಗಳನ್ನು ತರಾಟೆಗೆ ತಗೆದುಕೊಂಡರು.

ಬಳಿಕ ಬಿಷಫ್‌ ಹೌಸ್ ವೃತ್ತದಲ್ಲಿರುವ ಖಾಸಗಿ ಕಟ್ಟಡದ ಮಾಲೀಕರು ಜಾಗ ಬಿಟ್ಟುಕೊಡದ ಕಾರಣ ಜೋಡಿ ರಸ್ತೆ ನಿರ್ಮಾಣಕ್ಕೆ ಅಡ್ಡಿಯಾಗಿದೆ. ಇರ್ವೀನ್ ರಸ್ತೆಯಲ್ಲಿ ಪರಿಹಾರದ ಮೊತ್ತವನ್ನೇ ನಮಗೂ ಕೊಡುವಂತೆ ಕೇಳಿದ್ದು, ಈವಿಚಾರದಲ್ಲಿ ಹಲವಾರು ಬಾರಿ ಮಾತುಕತೆ ನಡೆಸಲಾಗಿದೆ. ಹೀಗಿದ್ದರೂ, ಜಾಗಬಿಡಲು ಒಪ್ಪಿಲ್ಲವೆಂದು ಹೇಳಿದಾಗ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು, ಕಾನೂನು ತಜ್ಞರ ಸಲಹೆ ಪಡೆದು ಸಮಸ್ಯೆ ಇತ್ಯರ್ಥಪಡಿಸಿ ಉಳಿದ ಕಾಮಗಾರಿ ಮುಗಿಸಲು ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇನ್ನು ಇದೇ ರಸ್ತೆಯಲ್ಲಿ ಯುಜಿಡಿ ಕಾಮಗಾರಿಗೆ ರಸ್ತೆಯನ್ನು 50 ಮೀಟರ್‌ನಷ್ಟು ಅಗೆದಿದ್ದು, ಈ ವೇಳೆ ಬಸ್‌ಗಳ ಸಂಚಾರಕ್ಕೆ ತೊಂದರೆಯಾಗಿರುವುದನ್ನು ಗಮನಿಸಿ, ದಸರಾ ತನಕ ಆರಂಭಿಸಿರುವ ಕಾಮಗಾರಿ ಪೂರ್ಣಗೊಳಿಸಿ, ಉಳಿದಿದ್ದನ್ನು ನಂತರ ಕೈಗೆತ್ತಿಕೊಳ್ಳಬೇಕು. ಪೈಪ್ ಅಳವಡಿಸಿದ ಮೇಲೆ ಚೆನ್ನಾಗಿ ಮಣ್ಣು, ಜಲ್ಲಿಯಿಂದ ಮುಚ್ಚಬೇಕು. ಅದೇಮಣ್ಣನ್ನು ಹಾಕಿ ತುಂಬಿದರೆ ಒತ್ತಡ ತಾಳದೆ ಗುಂಡಿಯಾಗುತ್ತದೆ ಎಂದು ಹೇಳಿದರು.

ದೇಶ-ವಿದೇಶಗಳಿಂದ ದಸರಾ ಮಹೋತ್ಸವ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಕಾರಣ ಹೃದಯ ಭಾಗದ ರಸ್ತೆಗಳನ್ನು ಸ್ವಚ್ಛವಾಗಿಡಬೇಕಿದೆ. ಅಲ್ಲಲ್ಲಿ ಯುಜಿಡಿ ಸಮಸ್ಯೆ, ಸ್ವಚ್ಛತೆ ಸಮಸ್ಯೆಗಳು ಕಂಡುಬಂದಿದ್ದರಿಂದ ಎರಡು ದಿನಗಳಲ್ಲಿ ಸರಿಪಡಿಸಿ ಫೋಟೋ ಸಮೇತ ವರದಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಸ್ ನಿಲ್ದಾಣದ ರಸ್ತೆಯಲ್ಲಿ ಇರುವ ಅವ್ಯವಸ್ಥೆಗೆ ಶೀಘ್ರ ಮುಕ್ತಿ ಕೊಡಲಾಗುವುದು ಶಿವಕುಮಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಇನ್ನು ಫುಟ್‌ಪಾತ್‌ಗಳು ಹಾಳಾಗಿರುವುದರಿಂದ ಓಡಾಡಲು ತುಂಬಾ ತೊಂದರೆಯಾಗಿದೆ. ಸಬರ್ಬ್‌ ಬಸ್ ನಿಲ್ದಾಣ ಅಕ್ಕಪಕ್ಕದ ರಸ್ತೆಗಳಲ್ಲಿ ಫುಟ್‌ಪಾತ್ ನಿರ್ಮಾಣ ಮಾಡಬೇಕು. ಯುಜಿಡಿ ಲೈನ್ ಹಾಳಾಗಿರುವುದರಿಂದ ದುರಸ್ತಿಗೆ ಗಮನ ಹರಿಸಬೇಕು ಎಂದು ನಗರಪಾಲಿಕೆ ಸದಸ್ಯ ಎಂ.ಸತೀಶ್ ಹೇಳಿದರು.

ಸಬರ್ಬ್ ಬಸ್ ನಿಲ್ದಾಣ ರಸ್ತೆ, ಬಿಷಪ್ ಹೌಸ್, ಬಿ.ಎನ್.ರಸ್ತೆ, ಪುರಭವನ ಮೊದಲಾದ ಕಡೆಗಳಲ್ಲಿ ನಗರ ಪ್ರದಕ್ಷಿಣೆ ಹಾಕಿದ ಮೇಯರ್‌ ಶಿವಕುಮಾರ್ ಹಲವಾರು ಸಮಸ್ಯೆಗಳನ್ನು ವೀಕ್ಷಿಸಿದರು. ನಗರಪಾಲಿಕೆ ಸದಸ್ಯ ಎಂ.ಬಿ.ನಾಗರಾಜು, ಉಪ ಆಯುಕ್ತರಾದ ಎಂ.ಜೆ.ರೂಪಾ ಇತರ ಅಧಿಕಾರಿಗಳು ಜನಪ್ರತಿನಿಧಿಗಳು ಇದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...